ಕನ್ನಡ ಸುದ್ದಿ  /  Karnataka  /  Congress Means Corruption And Commission Jp Nadda In Poll Bound Karnataka

JP Nadda: ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಕಮಿಷನ್ ಎಂದರ್ಥ; ತುಮಕೂರಿನಲ್ಲಿ 'ಕೈ' ನಾಯಕರ ವಿರುದ್ಧ ಜೆಪಿ ನಡ್ಡಾ ವಾಗ್ದಾಳಿ

ಕರ್ನಾಟಕ ಅಷ್ಟೇ ಅಲ್ಲ, ಇಡೀ ದೇಶವೇ ಕಾಂಗ್ರೆಸ್‌ನ ಕುಟುಂಬ ರಾಜಕಾರಣದಿಂದ ಬೇಸತ್ತಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವವನ್ನು ಪ್ರಶ್ನಿಸುತ್ತಾರೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ನಿಮ್ಮ ಎಲ್ಲಾ ಮತಗಳ ಮೂಲಕ ನೀವು ಉತ್ತರಿಸಬೇಕು ಎಂದು ಜೆಪಿ ನಡ್ಡಾ ಅವರು ತುಮಕೂರಿನಲ್ಲಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ತುಮಕೂರು: ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತುಮಕೂರಿನಲ್ಲಿಂದು ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ಅವರು ರೋಡ್​ ಶೋ ಮೂಲಕ ಪಕ್ಷದ ಶಕ್ತಿ ಪ್ರದರ್ಶಿಸಿದ್ದಾರೆ.

ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ನಡ್ಡಾ ಅವರು, ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದಿದ್ದಾರೆ. ಅಧಿಕಾರದಲ್ಲಿದ್ದಾಗ ಕರ್ನಾಟಕವನ್ನು ಲೂಟಿ ಮಾಡಿದ್ದ ಅವರು ಮತ್ತೊಂದು ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ಆದರೆ ಕರ್ನಾಟಕದ ಜನರು ಬುದ್ಧಿವಂತರು ಜೊತೆಗೆ ಮುಂಬರುವ ಚುನಾವಣೆಯಲ್ಲಿ ಯಾರನ್ನು ಆರಿಸಬೇಕೆಂದು ಅವರಿಗೆ ತಿಳಿದಿದೆ ಎಂದು ನನಗೆ ಖಾತ್ರಿಯಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಅಷ್ಟೇ ಅಲ್ಲ, ಇಡೀ ದೇಶವೇ ಕಾಂಗ್ರೆಸ್‌ನ ಕುಟುಂಬ ರಾಜಕಾರಣದಿಂದ ಬೇಸತ್ತಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವವನ್ನು ಪ್ರಶ್ನಿಸುತ್ತಾರೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ನಿಮ್ಮ ಎಲ್ಲಾ ಮತಗಳ ಮೂಲಕ ನೀವು ಉತ್ತರಿಸಬೇಕು ಎಂದು ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರು ಬಿಟ್ಟು ಹೋಗಿರುವ ಪರಂಪರೆಯನ್ನು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮುಂದುವರಿಸಿಕೊಂಡು ಹೋಗುತ್ತಾರೆ ಎಂದು ಜೆಪಿ ನಡ್ಡಾ ಭರವಸೆ ನೀಡಿದ್ದಾರೆ.'ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಕರ್ನಾಟಕದಲ್ಲಿ ವಿಶ್ವದರ್ಜೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಬೆಳವಣಿಗೆಗೆ ಶ್ರಮಿಸಿ ನಮ್ಮ ಡಬಲ್ ಇಂಜಿನ್ ಸರ್ಕಾರದ ಶಕ್ತಿಯನ್ನು ಸಾಬೀತುಪಡಿಸುತ್ತಾರೆ ಎಂದು ನಾನು ಭರವಸೆ ನೀಡುತ್ತೇನೆ.

ರಾಜ್ಯದಲ್ಲಿ ಬಿಜೆಪಿ ದಾಖಲೆಯ ಬಹುಮತದೊಂದಿಗೆ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ನನಗೆ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷವು ತಮ್ಮ ವ್ಯವಹಾರವನ್ನು ಮುಗಿಸುವ ಸಮಯ ಬಂದಿದೆ ಎಂದು ಕೈ ನಾಯಕರಿಗೆ ನಡ್ಡಾ ಅವರು ಟಾಂಗ್ ನೀಡಿದ್ದಾರೆ.

ವಿಜಯ ಸಂಕಲ್ಪ ಯಾತ್ರೆ ಮುಖಾಂತರ ಡಬಲ್​ ಎಂಜಿನ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವ ಕಾರ್ಯವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಜೆ ಪಿ ನಡ್ಡಾ ಚಿತ್ರದುರ್ಗದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಅದಾದ ಬಳಿಕ ತುಮಕೂರಿಗೆ ಆಗಮಿಸಿದ್ದರು.

ಮೋದಿ ಬಂದ ನಂತರ ದೇಶದ ಅಭಿವೃದ್ಧಿ

ದೇಶಕ್ಕೆ ಇರುವುದೊಂದೇ ಪಕ್ಷ ಅದು ಭಾರತೀಯ ಜನತಾ ಪಾರ್ಟಿ ಆಗಿದೆ. ಅದನ್ನು ಗೆಲ್ಲಿಸುವ ಪಣವನ್ನ ನೀವೆಲ್ಲ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇತ್ತೀಚೆಗೆ ಹಾಸನದಲ್ಲಿ ಕರೆ ನೀಡಿದ್ದರು.

ಮೊದಲು ಬೇರೆ ರಾಷ್ಟ್ರಗಳು ಅಭಿವೃದ್ಧಿಯನ್ನು ಹೊಂದಿದ್ದವು. ಇದೀಗ ಪ್ರಧಾನಿ ಮೋದಿ ಅವರು ಭಾರತದ ಅಭಿವೃದ್ಧಿ ಮಾಡುತ್ತಿದ್ದಾರೆ. ಕಳೆದ 70 ವರ್ಷಗಳಿಂದ ಅಭಿವೃದ್ಧಿಯಾಗದ ದೇಶ ಮೋದಿ ಬಂದ ನಂತರ ಅಭಿವೃದ್ದಿಯಾಗುತ್ತಿದೆ. ಅಲ್ಲದೇ ಇತರ ರಾಷ್ಟ್ರಗಳು ಭಾರತವನ್ನು ತಿರುಗಿ ನೋಡುವಂತೆ ಪ್ರಧಾನಿ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ರು.

ಕೋವಿಡ್ ಬಂದ ನಂತರ ಪ್ರಪಂಚದ ಅರ್ಥವ್ಯವಸ್ಥೆ ಪೂರ್ತಿ ಹದಗೆಟ್ಟಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ದೂರ ದೃಷ್ಟಿಯಿಂದ ಭಾರತದ ಅರ್ಥ ವ್ಯವಸ್ಥೆ ಸದೃಢವಾಗಿದೆ. ಎಲ್ಲ ವರ್ಗದ ಸಮುದಾಯದಗಳ ಏಳಿಗೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ರೈತರ ನೆರವಿಗೆ ಮೋದಿ ಧಾವಿಸಿದ್ದಾರೆ ಎಂದಿದ್ದರು.

IPL_Entry_Point