ಕನ್ನಡ ಸುದ್ದಿ  /  Karnataka  /  Congress To Win 150 Seats In Karnataka, Rahul Gandhi At Kolar Jai Bharat Yatra Pcp

Rahul Gandhi: ಕರ್ನಾಟಕದಲ್ಲಿ ಕನಿಷ್ಠ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಿ, ಕೋಲಾರ ಜೈ ಭಾರತ ಸಮಾವೇಶದಲ್ಲಿ ರಾಹುಲ್‌ ಗಾಂಧಿ

ಕನಿಷ್ಠ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು. ಆಗ ಬಿಜೆಪಿಗೆ ಭ್ರಷ್ಟಾಚಾರ ಮಾಡಲು ಅವಕಾಶ ತಪ್ಪಿಸಬಹುದು" ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

Rahul Gandhi: ಕರ್ನಾಟಕದಲ್ಲಿ ಕನಿಷ್ಠ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಿ, ಕೋಲಾರ ಜೈ ಭಾರತ ಸಮಾವೇಶದಲ್ಲಿ ರಾಹುಲ್‌ ಗಾಂಧಿ
Rahul Gandhi: ಕರ್ನಾಟಕದಲ್ಲಿ ಕನಿಷ್ಠ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಿ, ಕೋಲಾರ ಜೈ ಭಾರತ ಸಮಾವೇಶದಲ್ಲಿ ರಾಹುಲ್‌ ಗಾಂಧಿ (HT_PRINT)

ಕೋಲಾರ : "ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ (Karnataka Congress) ಒಟ್ಟಾಗಿ ಹೋರಾಟ ಮಾಡುತ್ತಿರುವುದು ಸಂತೋಷದ ವಿಚಾರ. ಕಾಂಗ್ರೆಸ್ ಪಕ್ಷ ಇಲ್ಲಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಬೇಕಾಗಿದೆ. ಒಂದು ಮಾತು ನೆನಪಿನಲ್ಲಿಡಿ. ಬಿಜೆಪಿ ಸರ್ಕಾರ 40% ಕಮಿಷನ್ ಹಣದಲ್ಲಿ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಾರೆ. ನಿಮ್ಮಿಂದ ಕದ್ದ ಹಣದಲ್ಲಿ ಸರ್ಕಾರ ಬೀಳಿಸಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಾರೆ. ಹೀಗಾಗಿ ನೀವು ಕನಿಷ್ಠ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು. ಆಗ ಬಿಜೆಪಿಗೆ ಭ್ರಷ್ಟಾಚಾರ ಮಾಡಲು ಅವಕಾಶ ತಪ್ಪಿಸಬಹುದು" ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಕೋಲಾರದಲ್ಲಿ ನಡೆದ ಜೈ ಭಾರತ ಸಮಾವೇಶದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.

ಮೀಸಲಾತಿ ವಿಷಯ

‘ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

‘ಮೋದಿ ಅವರ ಸರ್ಕಾರದಲ್ಲಿ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳ ಪೈಕಿ ಕೇವಲ 7% ಮಾತ್ರ ಹಿಂದುಳಿದವರು, ದಲಿತರು ಇದ್ದಾರೆ. ಇದು ಮೋದಿ ಅವರ ಕಾಳಜಿಯೇ? ಯುಪಿಎ ಸರ್ಕಾರ 2011ರಲ್ಲಿ ಜಾತಿ ಗಣತಿ ಮಾಡಿಸಿದ್ದು, ಅದರ ಪ್ರಕಾರ ದೇಶದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತರ ಜನಸಂಖ್ಯೆ ಎಷ್ಟಿದೆ? ಎಂದು ಬಹಿರಂಗಪಡಿಸಲಿ. ಜತೆಗೆ ಅದರ ಅನುಗುಣವಾಗಿ ಸರ್ಕಾರದ ಕಾರ್ಯದರ್ಶಿಗಳ ಮಟ್ಟದಲ್ಲಿ ಆಯಾ ಸಮುದಾಯಗಳಿಗೆ ಅಧಿಕಾರ ನೀಡಲಿ. ಇಲ್ಲದಿದ್ದರೆ ಈ ಸರ್ಕಾರ ಹಿಂದುಳಿದ ಹಾಗೂ ದಲಿತ ಸಮುದಾಯಗಳಿಗೆ ದ್ರೋಹ ಮಾಡಿದಂತೆ’ ಎಂದು ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ

ಇಲ್ಲಿ ಮುಂದಿನ ಕೆಲ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಸರ್ಕಾರ ರಾಜ್ಯದ ಯುವಕರು, ಮಹಿಳೆಯರು, ಬಡವರಿಗಾಗಿ ಏನು ಮಾಡಲಿದೆ ಎಂದು ಹೇಳುತ್ತೇನೆ. ಇತ್ತೀಚೆಗೆ ನಡೆದ ಹಿಮಾಚಲ ಪ್ರದೇಶದ ಚುನಾವಣೆ ನಂತರ ಜನರಿಗೆ ಯಾವ ಕಾರ್ಯಕ್ರಮ ನೀಡಬಹುದು ಎಂದು ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ನನ್ನನ್ನು ಕೇಳಿದರು. ಆಗ ನಾನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಎರಡು ಮೂರು ಭರವಸೆಗಳನ್ನು ಜಾರಿಗೆ ತರಬೇಕು. ಈ ಯೋಜನೆ ಜಾರಿ ಮಾಡಲು ವರ್ಷಾನುಗಟ್ಟಲೆ ಕಾಲಹರಣ ಮಾಡಬಾರದು. ಸರ್ಕಾರ ಬಂದ ಕೂಡಲೇ ಅವುಗಳನ್ನು ಅನುಷ್ಠಾನಕ್ಕೆ ತರಲು ಸೂಚಿಸಿದೆ. ಇದನ್ನು ನಾನು ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೇಳಬಯಸುತ್ತೇನೆ ಎಂದರು.

ಕರ್ನಾಟಕ ಜನರಿಗೆ 4 ಗ್ಯಾರಂಟಿ ಯೋಜನೆ

ನಾವು ಕರ್ನಾಟಕ ಜನರಿಗೆ 4 ಗ್ಯಾರಂಟಿ ಯೋಜನೆ ನೀಡಿದ್ದೇವೆ. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತ ನೀಡುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ. ಅನ್ನಭಾಗ್ಯದ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ. ಅಕ್ಕಿ ನೀಡಲಾಗುವುದು. ಇನ್ನು ಯುವನಿಧಿ ಯೇಜನೆ ಮೂಲಕ ಪ್ರತಿ ತಿಂಗಳು ನಿರುದ್ಯೋಗ ಪಧವೀದರರಿಗೆ 3 ಸಾವಿರ, ಡಿಪ್ಲೋಮಾ ಪದವಿಧರರಿಗೆ 1500 ನೀಡಲಾಗುವುದು. ಈ ಭರವಸೆಗಳು ಸರ್ಕಾರ ಬಂದ ಮೊದಲ ದಿನ ಹಾಗೂ ಮೊದಲ ಸಚಿವ ಸಂಪುಟದಲ್ಲಿ ಜಾರಿ ಮಾಡಬೇಕು ಎಂದು ಸೂಚಿಸುತ್ತೇನೆ.

ಬಿಜೆಪಿ ಅದಾನಿಗೆ, ನಾವು ಬಡವರಿಗೆ

ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ. ನೀವು ಹೃದಯಪೂರ್ವಕವಾಗಿ ಅಧಾನಿ ಅವರಿಗೆ ನೆರವು ನೀಡಿದರೆ, ನಾವು ಬಡ ಜನರು, ರೈತರು, ಮಹಿಳೆಯರು, ಯುವಕರಿಗೆ ಸಹಾಯ ಮಾಡುತ್ತೇವೆ. ನೀವು ನಿಮ್ಮ ಕೆಲಸ ಮಾಡಿ, ನಾವು ನಮ್ಮ ಕೆಲಸ ಮಾಡುತ್ತೇವೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಏನು ಮಾಡಿದೆ? 40% ಕಮಿಷನ್ ತಿಂದಿದ್ದಾರೆ. ಕೆಲಸ ಆಗಬೇಕಾದರೆ ರಾಜ್ಯದ ಜನರ ಲೂಟಿ ಮಾಡಿದೆ. ಅವರು ಮಾಡಿರುವ ಎಲ್ಲ ಕೆಲಸಕ್ಕೂ 40% ಕಮಿಷನ್ ತಿಂದಿದ್ದಾರೆ. ಈ ವಿಚಾರ ನನ್ನ ಆರೋಪವಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಈ ಆರೋಪ ಮಾಡಿದ್ದಾರೆ. ಪ್ರಧಾನಮಂತ್ರಿಗಳು ಈ ಪತ್ರಕ್ಕೆ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ. ಅವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ. ರುಪ್ಸಾ ಸಂಸ್ಥೆ ಪತ್ರ, ಪಿಎಸ್ಐ ಹಗರಣ, ಸಹಾಯಕ ಪ್ರಾದ್ಯಪಕರು, ಇಂಜಿನಿಯರ್ ನೇಮಕಾತಿ ಅಕ್ರಮಗಳು ನಿಮ್ಮ ಕಣ್ಣ ಮುಂದೆ ಇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

IPL_Entry_Point