ಯೋಗೇಶ್ ಗೌಡ ಹತ್ಯೆ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ರಿಟ್ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್‌
ಕನ್ನಡ ಸುದ್ದಿ  /  ಕರ್ನಾಟಕ  /  ಯೋಗೇಶ್ ಗೌಡ ಹತ್ಯೆ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ರಿಟ್ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್‌

ಯೋಗೇಶ್ ಗೌಡ ಹತ್ಯೆ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ರಿಟ್ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್‌

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ರಿಟ್ ಅರ್ಜಿ ತಿರಸ್ಕೃತವಾಗಿದೆ. ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಡೆಸಿದ್ದು, ದೋಷಗಳಿರುವ ಕಾರಣ ರಿಟ್ ಅರ್ಜಿಯನ್ನು ತಿರಸ್ಕರಿಸಿರುವುದಾಗಿ ಕೋರ್ಟ್ ಹೇಳಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಕರ್ನಾಟಕ ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ, ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ವಿನಯ ಕುಲಕರ್ಣಿ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಸೋಮವಾರ ಕಾಯ್ದಿರಿಸಿದ್ದ ತೀರ್ಪನ್ನು, ಪ್ರಕಟಿಸಿದರು. ಜನಪ್ರತಿನಿಧಿಗಳ ನ್ಯಾಯಾಲಯ ಮೂರು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಬೇಕು ಎಂದೂ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

ವಿನಯ್ ಕುಲಕರ್ಣಿ ರಿಟ್ ಪಿಟಿಷನ್‌ನಲ್ಲಿ ಏನಿತ್ತು

ನನ್ನ ವಿರುದ್ಧ ನಿಗದಿಪಡಿಸಲಾಗಿರುವ ದೋಷಾರೋಪ ಪಟ್ಟಿ ಮತ್ತು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ ನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಬೇಕು ಎಂದು ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಆರೋಪಿಯನ್ನು ಕೇಳಿ ನ್ಯಾಯಾಲಯಕ್ಕೆ ದಾಖಲೆಗಳನ್ನು ಮತ್ತು ದೋಷಾರೋಪ ಪಟ್ಟಿಯನ್ನು ಸಲ್ಲಿಸಿಲ್ಲ ಎಂದು ವಾದ ಮಂಡಿಸುತ್ತಾ ಹೋಗುವುದು ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈಗಾಗಲೇ ನಿಗದಿಪಡಿಸಿರುವ ಆರೋಪಗಳನ್ನು ತೆಗೆದು ಹಾಕಬೇಕು ಎಂಬ ವಾದ ಸರಿಯಲ್ಲ. ವಿಚಾರಣಾ ನ್ಯಾಯಾಲಯದಲ್ಲಿ ಆರೋಪಿ ಪರ ವಕೀಲ ಸಿ.ಎಚ್.ಹನುಮಂತರಾಯ ಅವರು ಸಹಿ ಮಾಡಿಯೇ ಎಲ್ಲ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ನೀಡಿಲ್ಲ ಎಂದು ಅವರು ಯಾವುದೇ ಹಂತದಲ್ಲಿ ತಕರಾರು ತೆಗೆದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವಿನಯ್ ವಿರುದ್ಧ ಆರೋಪಗಳ ನಿಗದಿ

ಪ್ರತಿ ಹಂತದಲ್ಲೂ ಆರೋಪಿಗಳ ವಾದವನ್ನು ಕೇಳಿಕೊಂಡೇ ನ್ಯಾಯಾಧೀಶರು ವಿಚಾರಣೆ ನಡೆಸಬೇಕು ಎಂದು ಯಾವುದೇ ಕಾನೂನು ಹೇಳುವುದಿಲ್ಲ. ಪ್ರಸ್ತುತ ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಧೀಶರು ಸರಿಯಾಗಿಯೇ ನಡೆದುಕೊಂಡಿದ್ದಾರೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ಮತ್ತು ಸಿಬಿಐ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

2016 ರ ಜೂನ್‌ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 21 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿದ್ದು, 2024ರ ಜನವರಿ 29ರಿಂದ ಫೆಬ್ರವರಿ 1ರವರೆಗೆ ಪ್ರತಿದಿನ ವಿಚಾರಣೆ ನಡೆಸುವುದಾಗಿ ಆದೇಶಿಸಿತ್ತು. ಆದರೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ ಕುಲಕರ್ಣಿ ದೋಷಾರೋಪ ನಿಗದಿ ಪಡಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು.

(ವರದಿ- ಎಚ್. ಮಾರುತಿ, ಬೆಂಗಳೂರು)

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

ಓದಬಹುದಾದ ಇನ್ನಷ್ಟು ಸ್ಟೋರಿಗಳು

1) ಡಾಲಿ ಧನಂಜಯ್‌ ಹೊಸ ಸಿನಿಮಾಕ್ಕೆ ಪರಮೇಶ್ವರ್ ಗುಂಡ್ಕಲ್ ನಿರ್ದೇಶನ; ಕೋಟಿ ಸಿನಿಮಾದ ಟೈಟಲ್‌ ಬಿಡುಗಡೆ - ಇಲ್ಲಿದೆ ವಿವರ

2) ಬೆಂಗಳೂರು ಕೊಚುವೇಲಿ ನಡುವೆ ವಿಶೇಷ ಸಾಪ್ತಾಹಿಕ ರೈಲು ಸೇವೆ; ಯುಗಾದಿ, ಬೇಸಿಗೆ ರಜೆ ನಿಮಿತ್ತ ಹಲವು ಸ್ಪೆಷಲ್ ರೈಲುಗಳು - ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ

3) ಲೋಕಸಭಾ ಚುನಾವಣೆ; ಸೊಂಟದಲ್ಲಿ ಗನ್‌ ಇಟ್ಕೊಂಡು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ ರಿಯಾಜ್‌, ಗನ್ ಇಟ್ಟುಕೊಳ್ಳಲು ವಿಶೇಷ ಅನುಮತಿ- ವಿವರ ವರದಿ ಇಲ್ಲಿದೆ

4) ಪಂದ್ಯದ ಮೊದಲ ಎಸೆತದಲ್ಲೇ ಔಟಾಗಿ ಕಳಪೆ ದಾಖಲೆಗೆ ಕಾರಣರಾದ ಫಿಲ್ ಸಾಲ್ಟ್; ಸಿಎಸ್‌ಕೆ ಪರ ತುಷಾರ್ ದೇಶಪಾಂಡೆ ರೆಕಾರ್ಡ್ - ವಿವರ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Whats_app_banner