ಬೆಂಗಳೂರು: ಮತ್ತೆ ಕೋವಿಡ್ ಸಂಕಷ್ಟ ಶುರು, ಹೊಸಕೋಟೆಯ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು ನಗರದ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದ ಹೊಸಕೋಟೆಯ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರು ಸುತ್ತಮುತ್ತ ಕೋವಿಡ್ ಸಂಕಷ್ಟ ಮತ್ತೆ ಕಾಣಿಸಿಕೊಂಡಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಶುರುವಾಗಿದೆ.

ಬೆಂಗಳೂರು: ಹೊಸಕೋಟೆ ಮೂಲದ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರು ಸುತ್ತಮುತ್ತ ಕೋವಿಡ್ ಸಂಕಷ್ಟ ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರು ನಗರದ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದ ಮಗುವಿಗೆ ಕೊರೊನಾ ಸೋಂಕು ಇರುವುದನ್ನು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.
ಹೊಸಕೋಟೆಯ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಮಗುವಿಗೆ ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಾಣಿ ವಿಲಾಸ ಆಸ್ಪತ್ರೆ ವೈದ್ಯರು ತಪಾಸಣೆ ನಡೆಸಿದಾಗ, ಮಗುವಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.
ಹೊಸಕೋಟೆ ಮೂಲದ 9 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಕೋವಿಡ್ ಮೇಲೆ ನಿಗಾವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದು, ಕೇಂದ್ರ ಸರ್ಕಾರದಿಂದ ಯಾವುದೇ ಹೊಸ ಮಾರ್ಗಸೂಚಿ ಬಂದಿಲ್ಲ. ಆದಾಗ್ಯೂ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಳ
ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಮೇ 21ರ ಪ್ರಕಾರ, 257 ಸಕ್ರಿಯ ಪ್ರಕರಣ ಇರುವುದಾಗಿ ಸರ್ಕಾರ ತಿಳಿಸಿತ್ತು. ಕೇರಳದಲ್ಲಿ 186 ಕೇಸ್ ಪತ್ತೆಯಾಗಿದದ್ದು, 95 ಸಕ್ರಿಯ ಪ್ರಕರಣ ಇದೆ. ಕರ್ನಾಟಕದಲ್ಲಿ 33 ಕೇಸ್‌ಗಳಿದ್ದು 16 ಸಕ್ರಿಯ ಪ್ರಕರಣಗಳಿವೆ. ಆಂಧ್ರದಲ್ಲಿ ಗುರುವಾರ 19 ಸಕ್ರಿಯ ಕೇಸ್‌ಗಳಿದ್ದರೆ, ಗುಜರಾತ್‌ನಲ್ಲಿ 15 ಕೇಸ್‌ಗಳಿರುವುದಾಗಿ ಸರ್ಕಾರ ತಿಳಿಸಿತ್ತು.