ಕನ್ನಡ ಸುದ್ದಿ  /  ಕರ್ನಾಟಕ  /  Crack On Metro Track: ನಮ್ಮ ಮೆಟ್ರೋ ಹಳಿ ಮೇಲೆ ಬಿರುಕು: ದುರಸ್ತಿ ಕಾರ್ಯ ನಡೆಸಿದ ಬಿಎಂಆರ್‌ಸಿಎಲ್‌

Crack on metro track: ನಮ್ಮ ಮೆಟ್ರೋ ಹಳಿ ಮೇಲೆ ಬಿರುಕು: ದುರಸ್ತಿ ಕಾರ್ಯ ನಡೆಸಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ದೊಡ್ಡ ಅನಾಹುತ ನಡೆಯುವುದು ತಪ್ಪಿದಂತಾಗಿದೆ. ಕಳೆದ ಕೆಲ ದಿನಗಳ ಹಿಂದೆ ಎಲೆಕ್ಟ್ರಿಕ್ ಲೈನ್‌ ಬಿರುಕುಬಿಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್‌ ಸಿಬ್ಬಂದಿ ಟ್ರ್ಯಾಕ್‌ ದುರಸ್ತಿ ಮಾಡಿದ್ದಾರೆ.

ಮ್ಮ ಮೆಟ್ರೋ ಹಳಿ ಮೇಲೆ ಬಿರುಕು
ಮ್ಮ ಮೆಟ್ರೋ ಹಳಿ ಮೇಲೆ ಬಿರುಕು

ಬೆಂಗಳೂರು: ಸಿಲಿಕಾನ್‌ ಸಿಟಿಯ ನಮ್ಮ ಮೆಟ್ರೋದಲ್ಲಿ ದೊಡ್ಡ ಅನಾಹುತ ನಡೆಯುವುದು ತಪ್ಪಿದಂತಾಗಿದೆ. ಕಳೆದ ಕೆಲ ದಿನಗಳ ಹಿಂದೆ ಎಲೆಕ್ಟ್ರಿಕ್ ಲೈನ್‌ ಬಿರುಕುಬಿಟ್ಟ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಟ್ರೆಂಡಿಂಗ್​ ಸುದ್ದಿ

ಮೆಜೆಸ್ಟಿಕ್‌ನಿಂದ ಕೆಂಗೇರಿ ಕಡೆಗೆ ಸಾಗುವ ನೇರಳೆ ಮಾರ್ಗದ ಮೈಸೂರು ರಸ್ತೆಯ ಬಳಿಯ ಮೆಟ್ರೋ ಟ್ರ್ಯಾಕ್​ನಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಪಟ್ಟಣಗೆರೆ ಮೆಟ್ರೋ ಸ್ಟೇಷನ್​ನಿಂದ ಕೂಗಳತೆ ದೂರದ ಹಳಿಯಲ್ಲಿ ಬಿರುಕು ಮೂಡಿತ್ತು. ಟ್ರ್ಯಾಕ್ ಹಾಕಿದ ಕೇವಲ ಮೂರೇ ವರ್ಷದೊಳಗೆ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ಮೆಟ್ರೋ ಪೈಲೆಟ್ ಹಾಗೂ ಸಿಬ್ಬಂದಿ ಗಮನಿಸಿದ್ದಾರೆ. ಟ್ರ್ಯಾಕ್ ಸೌಂಡ್, ಸ್ಪೀಡ್​​ನಲ್ಲಿ ಬದಲಾವಣೆ ಆಗಿತ್ತು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ಹಳಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್‌ ಸಿಬ್ಬಂದಿ ಟ್ರ್ಯಾಕ್‌ ದುರಸ್ತಿ ಮಾಡಿದ್ದಾರೆ. ಈ ಸಮಯದಲ್ಲಿ ಇಡೀ ದಿನ ಮತ್ತೊಂದು ಟ್ರ್ಯಾಕ್ ನಲ್ಲಿ ಮೆಟ್ರೋ ರೈಲು ಓಡಾಟ ಮಾಡುವಂತೆ ವ್ಯವಸ್ಥೆ ಮಾಡಲಾಗಿತ್ತು. ಟ್ರ್ಯಾಕ್ ಸರಿಪಡಿಸಿದ ನಂತರ ಎರಡು ಹಳಿಯಲ್ಲಿ‌ ಎಂದಿನಂತೆ ಮೆಟ್ರೋ ರೈಲು ಆಪರೇಷನ್‌ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರ ಗಮನಕ್ಕೆ ತರದೇ ದುರಸ್ಥಿ:

ಸಾರ್ವಜನಿಕರ ಗಮನಕ್ಕೆ ತರದೇ ಬಿಎಂಆರ್‌ಸಿಎಲ್‌ ದುರಸ್ತಿ ಮಾಡಿದೆ. ಇದೇ ಟ್ರ್ಯಾಕ್‌ಲ್ಲಿ ಮೆಟ್ರೋ ರೈಲು ಸಂಚಾರ ಮಾಡಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂದು ಹೆಸರು ಹೇಳಲಿಚ್ಛಿಸದ ನಿಗಮದ ಸಿಬ್ಬಂದಿ ತಿಳಿಸಿದ್ದಾರೆ.

'ಪಿಂಕ್ ಲೈನ್' ಮಾರ್ಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ

ಬಿಎಂಆರ್‌ಸಿಎಲ್ ಸಂಸ್ಥೆ ನಮ್ಮ ಮೆಟ್ರೊ ಹಂತ 2ರ ಪಿಂಕ್ ಲೈನ್​​​ ಮಾರ್ಗದಲ್ಲಿ ನಾಗವಾರದಲ್ಲಿ ರಿಸೀವಿಂಗ್ ಸಬ್ ಸ್ಟೇಷನ್ ನಿರ್ಮಿಸುತ್ತಿದ್ದು, ಇದಕ್ಕಾಗಿ 45 ಸಾವಿರ ಚದರ ಅಡಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಡಿಸೆಂಬರ್​ನಿಂದ ಆರಂಭಿಸಿದ್ದು, ಬಹುತೇಕ ಪೂರ್ಣಗೊಂಡಿದೆ. 2024ರಲ್ಲಿ ಪಿಂಕ್ ಲೈನ್ ಸಾರ್ವಜನಿಕ ಬಳಕೆಗೆ ಮುಕ್ತವಾಗುವ ನಿರೀಕ್ಷೆ ಇದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಮೆಜೆಸ್ಟಿಕ್‌ ಮೆಟ್ರೊ ರೈಲು ನಿಲ್ದಾಣಕ್ಕೆ ಇನ್ನೂ ನಾಲ್ಕು ಮಹಡಿ ಸೇರ್ಪಡೆ

ಮೆಜೆಸ್ಟಿಕ್‌ಲ್ಲಿರುವ ಕೆಂಪೇಗೌಡ ಮೆಟ್ರೊ ನಿಲ್ದಾಣ ಇನ್ನಷ್ಟು ಆಕರ್ಷಕವಾಗಲಿದೆ. ಮೆಜೆಸ್ಟಿಕ್‌ ಮೆಟ್ರೊ ನಿಲ್ದಾಣದ ಮೇಲೆ ಇನ್ನೂ ಹೊಸ ನಾಲ್ಕು ಮಹಡಿಗಳನ್ನು ನಿರ್ಮಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಲ್ಲಿ ನಾಲ್ಕು ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಬೆಂಗಳೂರಿನಲ್ಲಿ 55 ಕಿ.ಮೀ. ಮೆಟ್ರೊ ಲೈನ್‌ ಹೊಂದಿರುವ ಬಿಎಂಆರ್‌ಸಿಎಲ್‌ ಇದೀಗ ಮೆಜೆಸ್ಟಿಕ್‌ ಮೆಟ್ರೊ ನಿಲ್ದಾಣಕ್ಕೆ ನಾಲ್ಕು ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಲಿದೆ. ಈ ಮೂಲಕ ವಾಣಿಜ್ಯ ಆದಾಯ ಹೆಚ್ಚಿಸಿಕೊಳ್ಳಲು ಉದ್ದೇಶಿಸಿದೆ. ಹೊಸ ನಾಲ್ಕು ಮಹಡಿಗಳಲ್ಲಿ ಆಫೀಸ್‌ ಸ್ಥಳಾವಕಾಶ, ಮಾಲ್‌ಗಳು, ಥಿಯೇಟರ್‌ಗಳು, ವಾಣಿಜ್ಯ ಮಳಿಗೆಗಳು ಇರಲಿವೆ. ಈ ಮೂಲಕ ಆದಾಯ ಬಾಚಿಕೊಳ್ಳಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

ಟಿ20 ವರ್ಲ್ಡ್‌ಕಪ್ 2024