ಕನ್ನಡ ಸುದ್ದಿ / ಕರ್ನಾಟಕ /
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ; ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದಾರುಣ ಸಾವು
ಹುಬ್ಬಳ್ಳಿ ಸಮೀಪದ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಹುಬ್ಬಳ್ಳಿ ಸಮೀಪ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ಸಮೀಪದ ಭೀಕರ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನವರು ಎಂದು ಗುರುತಿಸಲಾಗಿದೆ.
ವಿಠಲ್ (55), ಶಶಿಕಲಾ (40), ಶ್ವೇತಾ (29), ಅಂಜಲಿ (26) ಹಾಗೂ ಸಂದೀಪ್ (26) ಮೃತ ದುರ್ದೈವಿಗಳು. ವ್ಯಾಪಾರಕ್ಕಾಗಿ ಶಿವಮೊಗ್ಗದಿಂದ ಬಾಗಲಕೋಟೆಗೆ ತೆರೆಳುತ್ತಿದ್ದಾಗ ಅಪಘಾತಕ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.