ಕನ್ನಡ ಸುದ್ದಿ  /  Karnataka  /  Crocodile Tears Of Congress Leaders Over Internal Reservation Says Karnataka Home Minister Araga Gyanendra

Araga Gyanendra: ಒಳ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶಿಕಾರಿಪುರಕ್ಕೆ ಭೇಟಿ ನೀಡಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ (ಪೋಟೋ-ಫೈಲ್)
ಗೃಹ ಸಚಿವ ಆರಗ ಜ್ಞಾನೇಂದ್ರ (ಪೋಟೋ-ಫೈಲ್)

ಶಿಕಾರಿಪುರ (ಶಿವಮೊಗ್ಗ): ವಿಧಾನಸಭೆ ಚುವನಾಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಸರ್ಕಾರದ ಕಳೆದ ಶುಕ್ರವಾರ ಮೀಸಲಾತಿ ಪರಿಷ್ಕರಣೆ ಮಾಡಿತ್ತು. ಕೆಲವು ಸಮುದಾಯಗಳು ಈ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿದ್ದು, ಇದೇ ವಿಚಾರವಾಗಿ ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪಗಳ ಮೂಲಕ ವಾಕ್ಸಮರಕ್ಕೆ ಇಳಿದಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಪುರ ಪಟ್ಟಣದಲ್ಲಿ ನಿನ್ನೆ (ಮಾರ್ಚ್ 27) ಸ್ಥಳೀಯ ಬಂಜಾರಾ ಸಮುದಾಯದ ಪ್ರತಿಭಟನಾಕಾರರು ನಡೆಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಕಲ್ಲುತೂರಾಟ ನಡೆಸಿ ಕಿಟಕಿ ಗಾಜುಗಳಿಗೆ ಹಾನಿ ಮಾಡಿದ್ದರು.

ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು, ಶಿಕಾರಿಪುರಕ್ಕೆ ತೆರಳಿ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಿದ್ದಾರೆ. ಈ ವೇಳೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ, ಸ್ಥಳೀಯ ಅಧಿಕಾರಿಗಳೂ ಉಪಸ್ಥಿತ ರಿದ್ದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಿಕಾರಿಪುರ ಪಟ್ಟಣದಲ್ಲಿ, ಪರಿಸ್ಥಿತಿ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಪ್ರತಿಭಟನೆಗೆ ಸಂಬಂಧಿಸಿದಂತೆ, ಉತ್ತರಿಸಿದ ಸಚಿವರು, ಸರ್ಕಾರ, ಪರಿಶಿಷ್ಠ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅನುಷ್ಠಾನ ಮಾಡಿಲ್ಲ. ಈ ಕುರಿತು ವಿರೋಧ ಪಕ್ಷದ ನಾಯಕರು ಅಪಪ್ರಚಾರ ನಡೆಸಿ, ರಾಜಕೀಯ ಬೇಳೆ ಬೇಯಿಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಠ ಜಾತಿ, ಪಂಗಡಗಳ ಮಧ್ಯೆ ಒಡಕು ಮೂಡಿಸಲು ಯತ್ನ

ಚುನಾವಣೆಯ ಹೊಸ್ತಿಲಲ್ಲಿ, ಕಾಂಗ್ರೆಸ್ ನಾಯಕರು, ಪರಿಶಿಷ್ಠ ಜಾತಿ ಪಂಗಡಗಳ ಮಧ್ಯೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ, ಯಾವುದೇ ಕ್ರಮಕ್ಕೆ ಮುಂದಾಗದೆ, ನ್ಯಾಯ ಒದಗಿಸಲು ವಿಫಲರಾದ, ವಿರೋಧಿ ಪಕ್ಷದ ನಾಯಕರು, ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ ಸಿಎಂ ಬೊಮ್ಮಾಯಿ ಅವರು ಮುಕ್ತವಾಗಿ ಚರ್ಚೆ ನಡೆಸಲು ಸಿದ್ದರಿದ್ದು, ಯಾವುದೇ ಕಾರಣಕ್ಕೂ ಯಾರೇ ಆಗಲಿ, ಕಾನೂನನ್ನು ಕೈಗೆ ತೆಗೆದುಕೊಳ್ಳ ಬಾರದು ಎಂದು ತಿಳಿಸಿದ್ದಾರೆ.

ಕಳೆದ ಶುಕ್ರವಾರ (ಮಾರ್ಚ್ 24) ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಾಗೂ ವೀರಶೈವ ಲಿಂಗಾಯತರ 2D ಮತ್ತು ಒಕ್ಕಲಿಗರ 2C ಪ್ರವರ್ಗಕ್ಕೆ ಮೀಸಲಾತಿ ನೀಡಿ ಒಪ್ಪಿಗೆ ನೀಡಲಾಗಿದೆ.

2Bನಲ್ಲಿ ಇದ್ದ ಮುಸ್ಲಿಂ ಮೀಸಲಾತಿಗೆ ಕತ್ತರಿ ಹಾಕಲಾಗಿತ್ತು. ಇದನ್ನು 2D ಮತ್ತು 2Cಗೆ ಮರು ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ. ಆ ಮೂಲಕ ಒಕ್ಕಲಿಗರಿಗೆ 2Cಯಡಿ ಶೇ.6, ವೀರಶೈವ ಲಿಂಗಾಯತರಿಗೆ 2Dಯಡಿ ಶೇ. 7 ಮೀಸಲಾತಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ.

ಮತ್ತೊಂದೆಡೆ ಪರಿಶಿಷ್ಟ ಸಮುದಾಯವನ್ನು ನಾಲ್ಕು ಗುಂಪುಗಳನ್ನಾಗಿ ವರ್ಗೀಕರಿಸಲಾಗಿದೆ. ಎಸ್​ಸಿ ಎಡ, ಎಸ್​ಸಿ ಬಲ, ಸ್ಪರ್ಶಿಯರು, ಇತರರೆಂದು ನಾಲ್ಕು ವರ್ಗಗಳಾಗಿ ವಿಂಗಡಿಸಿ. ಎಡಕ್ಕೆ ಶೇ. 6, ಬಲಕ್ಕೆ ಶೇ. 5.5, ಸ್ಪರ್ಶಿಯರಿಗೆ ಶೇ. 4.5, ಇತರರಿಗೆ ಶೇ. 1 ರಷ್ಟು ಒಳ ಮೀಸಲಾತಿ ನೀಡಲು ಒಪ್ಪಿಗೆ ನೀಡಲಾಗಿದೆ. ಸ್ಪರ್ಶ್ಯ ಜಾತಿಗಳಾದ ಲಂಬಾಣಿ, ಬೋವಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿಯ ಗುಂಪಿನಿಂದ ಹೊರಗಿಡಬೇಕೆಂಬ ಬೇಡಿಕೆಯನ್ನು ಆಯೋಗ ತಿರಸ್ಕರಿಸಿತ್ತು. ಸದ್ಯ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮೀಸಲಾತಿ ಪರಿಷ್ಕರಣೆಗೆ ವಿರೋಧ ವ್ಯಕ್ತವಾಗಿದೆ.

IPL_Entry_Point