ಕನ್ನಡ ಸುದ್ದಿ  /  Karnataka  /  Dakshin Kannada News Auto Driver Who Was Fined For Traffic Rules Violation Went To Set Ablaze Police Vehicle Booked Hsm

Mangalore News: ದಂಡ ಹಾಕಿದ್ದಕ್ಕೆ ಆಕ್ಷೇಪ, ಪೊಲೀಸ್ ಜೀಪಿಗೆ ಬೆಂಕಿ ಹಚ್ಚಲು ಮುಂದಾದ ಚಾಲಕ Video

ಮಂಗಳೂರು ಸಮೀಪದ ಬಿಸಿ ರೋಡಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ದೂ ಅಲ್ಲದೇ ವಾಹನಕ್ಕೆ ಬೆಂಕಿ ಹಚ್ಚುವುದಾಗಿ ಹೇಳಿದ ಆಟೋರಿಕ್ಷಾ ಚಾಲಕನ ವಿರುದ್ದ ಪ್ರಕರಣ ದಾಖಲಾಗಿದೆ.ವರದಿ: ಹರೀಶ್‌ ಮಾಂಬಾಡಿ. ಮಂಗಳೂರು

ಆಟೋರಿಕ್ಷಾ ಚಾಲಕನ ವಿರುದ್ದ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆಟೋರಿಕ್ಷಾ ಚಾಲಕನ ವಿರುದ್ದ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು: ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಿಸಿರೋಡಿನ ‌ಕೈಕಂಬ ಎಂಬಲ್ಲಿ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಚಾಲಕನನ್ನು ವಿರುದ್ಧ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದಯ,ಸದ್ಯ ತಲೆಮರೆಸಿಕೊಂಡಿದ್ದಾನೆ.

ಟ್ರಾಫಿಕ್ ಎಸ್‌ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್ ( ಡ್ರೆಸ್ ಕೋಡ್) ಹಾಕದೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿ , ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದರು.

ಇದೇ ಕಾರಣದಿಂದ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟುಹಾಕುವುದಾಗಿ ಬೆದರಿಸಿದ. ಬಳಿಕ ಎಸ್ ಐ ಹಾಗೂ ಜೀಪ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ನೀಡಲು ಮುಂದಾದ. ಈ ವೇಳೆ ಸ್ಥಳೀಯರು ನ್ಯಾಯಾಲಯದಲ್ಲಿ ನೀನು ಕೇಳಿಕೋ. ಇದಕ್ಕೆ ಗದ್ದಲ ಮಾಡಬೇಡ ಎಂದು ತಿಳಿ ಹೇಳಿದರು. ಆದರೂ ಆದಕ್ಕೆ ಒಪ್ಪದೇ ಬೆಂಕಿ ಹಚ್ಚಲು ಮುಂದಾದ. ಕೊನೆಗೆ ಎಸ್.ಐ.ಅವರು ಆತನ ಮೇಲೆ ದೂರು ನೀಡಿದ್ದಾರೆ. ಇದೀಗ ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವರದಿ: ಹರೀಶ್‌ ಮಾಂಬಾಡಿ. ಮಂಗಳೂರು