ಕನ್ನಡ ಸುದ್ದಿ  /  ಕರ್ನಾಟಕ  /  Dakshin Kannada News :ಬಂಟ್ವಾಳದ ಆಸ್ಪತ್ರೆಯಲ್ಲೇ ಕುಸಿದುಬಿದ್ದು ಬಿಜೆಪಿ ಕಾರ್ಯಕರ್ತ ಸಾವು

Dakshin Kannada News :ಬಂಟ್ವಾಳದ ಆಸ್ಪತ್ರೆಯಲ್ಲೇ ಕುಸಿದುಬಿದ್ದು ಬಿಜೆಪಿ ಕಾರ್ಯಕರ್ತ ಸಾವು

BJP Activist dies ಅನಾರೋಗ್ಯದ ಕಾರಣದಿಂದ ಚಿಕಿತ್ಸೆ ಪಡೆಯಲೆಂದು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತ ಪ್ರಕಾಶ್‌ ಎಂಬುವವರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮಂಗಳೂರು: ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಆಸ್ಪತ್ರೆಯಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಟ್ರೆಂಡಿಂಗ್​ ಸುದ್ದಿ

ಬಡಗಬೆಳ್ಳೂರು ಶಾಲಾ ಬಳಿ ನಿವಾಸಿ ಬಿಜೆಪಿಯ ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು (42) ಮೃತಪಟ್ಟವರು.

ಅವರು ಅವಿವಾಹಿತರಾಗಿದ್ದರು. ಜ್ವರ ಗುಣಮುಖರಾಗದ ಹಿನ್ನೆಲೆಯಲ್ಲಿ ಔಷಧಕ್ಕಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದು, ವೈದ್ಯರು ಪರೀಕ್ಷೆ ಮಾಡುವ ಮುನ್ನವೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪರೀಕ್ಷೆಗೆ ಮುನ್ನವೇ ಅವರು ಮೃತಪಟ್ಟಿರುವ ಕಾರಣದಿಂದ ಸ್ಪಷ್ಟವಾಗಿ ಯಾವ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿಲ್ಲ. ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರಾಗಿದ್ದ ಅವರು ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿ, ಯುವನಾಯಕರಾಗಿ ಬಂಟ್ವಾಳ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದರು. ಜತೆಗೆ ಇತರ ಸಂಘಟನೆ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೇರಿದಂತೆ ಹಲವು ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

ಇಬ್ಬರು ಹಗಲುಗಳ್ಳರ ಬಂಧನ, ಲಕ್ಷಾಂತರ ರೂ ಸೊತ್ತು ವಶಕ್ಕೆ

ಬಂಟ್ವಾಳ ‌ನಗರ ಠಾಣೆಯ ಪೋಲೀಸರು ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧಿಸಿ ,ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ಧಾರೆ.ಮಂಗಳೂರು,ಬೆಂಗ್ರೆ ಭದ್ರಪಳ್ಳಿ, ಮಸೀದಿ ಬಳಿ, ಕಸಬಾ ಬೇಂದ್ರೆ ನಿವಾಸಿ ಫರಾಜ್ (27 ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು, ನಿವಾಸಿ ತೌಸಿಫ್ ಅಹಮ್ಮದ್ (34) ಬಂಧಿತ ಆರೋಪಿಗಳು.

ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ 3000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000 ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಯಾವ ಕಳವು ಪ್ರಕರಣ?

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್‌ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರ್‌ನ್ನು ಸೆ. 1ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಗೋಡ್ರೆಜ್‌ಗಳ ಬಾಗಿಲುಗಳನ್ನು ಮುರಿದು ಒಟ್ಟು 115 ಗ್ರಾಂ ತೂಕದ ಸುಮಾರು 5,36,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಪಾಯಿ ಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು‌.

ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಕಳವಾದ ಸೊತ್ತುಗಳನ್ನು ಪತ್ತೆಮಾಡಿಕೊಡಬೇಕಾಗಿ ಕೋರಿ ಮೈಕಲ್ ಡಿಸೋಜಾ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದಲ್ಲಿ ಎಸ್.ಐ.ರಾಮಕೃಷ್ಣ ಅವರ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು.

ಕೆಲವೊಂದು ಸಂಶಯಗಳ ಮೇಲೆ ಕಳ್ಳರ ಜಾಲನ್ನು ಹಿಡಿದು ರಾಮಕೃಷ್ಣ ಅವರ ತಂಡ ಕಳ್ಳರ ಪತ್ತೆಗಾಗಿ ಶ್ರಮವಹಿಸಿ ಕೊನೆಗೂ ಕಳವು ಆರೋಪಿಗಳ ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಳ್ಳರು ತನಿಖೆಯ ವೇಳೆ ಬಾಯಿಬಿಟ್ಟಂತೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್‌.ಪಿ.ಸಿ.ಬಿ‌ರಿಷ್ಯಂತ್ ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

( ವರದಿ: ಹರೀಶ್‌ ಮಾಂಬಾಡಿ ಮಂಗಳೂರು)

ಟಿ20 ವರ್ಲ್ಡ್‌ಕಪ್ 2024