ಕನ್ನಡ ಸುದ್ದಿ  /  ಕರ್ನಾಟಕ  /  Dakshin Kannada News: ಮಳೆಗಾಲದ ದುರಂತಕ್ಕೆ ದಕ್ಷಿಣ ಕನ್ನಡದಲ್ಲಿ ಮನೆ ಗೋಡೆ ಕುಸಿದು ನಾಲ್ವರ ದಾರುಣ ಅಂತ್ಯ

Dakshin Kannada News: ಮಳೆಗಾಲದ ದುರಂತಕ್ಕೆ ದಕ್ಷಿಣ ಕನ್ನಡದಲ್ಲಿ ಮನೆ ಗೋಡೆ ಕುಸಿದು ನಾಲ್ವರ ದಾರುಣ ಅಂತ್ಯ

Rain News ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಮಳೆಗೆ ಮನೆಯ ಗೋಡೆ ಕುಸಿದು ನಾಲ್ವರು ಮೃತಪಟ್ಟಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಭಾರೀ ಮಳೆಗೆ ಈ ಬಾರಿ ಮೊದಲ ಅನಾಹುತ ಬುಧವಾರ ಬೆಳಿಗ್ಗೆ ನಡೆದಿದೆ. ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರದಲ್ಲಿ ಮಂಗಳವಾರ ನಸುಕಿನ ಜಾವ ನಡೆದ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದು ಕಂಪೌಂಡ್ ಗೋಡೆ ಮನೆಯ ಗೋಡೆ ಮೇಲೆ ಉರುಳಿ ಈ ಸಾವು ಸಂಭವಿಸಿದೆ. ಮನೆಯೊಳಗೆ ವಾಸ್ತವ್ಯವಿದ್ದ ರಿಹಾನ ಮಂಝಿಲ್ ಮನೆಯ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತಪಟ್ಟಿದ್ದಾರೆ.

ರಾತ್ರಿ ಊಟ ಮುಗಿಸಿ ಮಲಗಿದವರು ಬೆಳಗ್ಗೆ ಶವವಾದರು

ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ನಿರ್ವಹಣೆ ಕಾರ್ಯ ನಿರ್ವಹಿಸುತ್ತಿದ್ದರು.ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಹೊತ್ತಿಗೆ ಶವವಾಗಿದ್ದಾರೆ.

ಧಾರಾಕಾರ ಮಳೆ ಸುರಿದ ಪರಿಣಾಮ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರ ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ.

ಟ್ರೆಂಡಿಂಗ್​ ಸುದ್ದಿ

ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಯಾಸಿರ್ ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದೆಯಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು, ಯಾವುದೇ ಪ್ರಾಣಾಪಾಯವಾಗಿರಲಿಲ್ಲ ಎನ್ನಲಾಗಿದೆ.

ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ.

ದೊಡ್ಡಮಗಳು ರಶೀನಾಳನ್ನು ಕೇರಳ ಕಡೆಗೆ ವಿವಾಹ ಮಾಡಿಕೊಡಲಾಗಿದ್ದು, ಬಕ್ರೀದ್ ಗೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು. ತನಿಖೆ ಮುಂದುವರಿದಿದೆ.

ವರದಿ: ಹರೀಶ ಮಾಂಬಾಡಿ, ಮಂಗಳೂರು