Grama panchayat recruitment: ದಕ್ಷಿಣ ಕನ್ನಡ ಗ್ರಾಮ ಪಂಚಾಯಿತಿಯಲ್ಲಿ ಭರ್ಜರಿ ನೇಮಕ, ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಒಂಬತ್ತು ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಒಂಬತ್ತು ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದು. ಈ ಹಿಂದಿನ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನಾಂಕವಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಡಿಸೆಂಬರ್ 5, 2022ರವರೆಗೆ ಅವಕಾಶ ನೀಡಲಾಗಿದೆ.
ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ (Grama panchayat recruitment 2022 Karnataka) ವಾಸಿಸುವ ಅಭ್ಯರ್ಥಿಗಳು ಆಯಾ ಗ್ರಾಮಪಂಚಾಯತ್ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಖಾಲಿ ಹುದ್ದೆ ಮತ್ತು ಇತರ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿಕೊಳ್ಳುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಲು ಮಾತ್ರ ಅವಕಾಶವಿದ್ದು, ಬೇರೆ ಯಾವುದೇ ವಿಧಾನದ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪರಿಷ್ಕೃತ ದಿನಾಂಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಸೆಪ್ಟೆಂಬರ್ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 5, 2022
ಯಾವೆಲ್ಲ ಹುದ್ದೆಗಳಿವೆ?
ಕರವಸೂಲಿಗಾರ (ಬಿಲ್ ಕಲೆಕ್ಟರ್)-1, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್- 2, ವಾಟರ್ ಅಪರೇಟರ್ (ಪಂಪು ಚಾಲಕ)- 33, ಅಟೆಂಡೆಂಟ್ (ಜವಾನ)- 21, ಕ್ಲೀನರ್ (ಸ್ವಚ್ಚತಾಗಾರ)- 56 ಸೇರಿದಂತೆ ಒಟ್ಟು 113 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ/ಎಸ್‌ಟಿ/ಪ್ರವರ್ಗ-೧ ಅಭ್ಯರ್ಥಿಗಳು 200 ರೂ. ಮತ್ತು ಅಂಗವಿಕಲ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್‌ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿ ಸಲ್ಲಿಸಲು ಲಿಂಕ್: zpdk.karnataka.gov.in
ವಿದ್ಯಾರ್ಹತೆ ಏನು?
ಕರವಸೂಲಿಗಾರ/ ಬಿಲ್ ಕಲೆಕ್ಟರ್ ಹುದ್ದೆಗೆ ಕನ್ನಡವನ್ನು ಒಂದು ಭಾಷೆಯಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ಅನ್ನು ಕೇಂದ್ರ/ರಾಜ್ಯದ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಕನಿಷ್ಠ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ಕನ್ನಡವನ್ನು ಒಂದು ಭಾಷೆಯಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ಅನ್ನು ಕೇಂದ್ರ/ರಾಜ್ಯದ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಕನಿಷ್ಠ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ವಾಟರ್ ಆಪರೇಟರ್ (ಪಂಪ್ ಚಾಲಕ) ಹುದ್ದೆಗೆ ಕನ್ನಡವನ್ನು ಒಂದು ಭಾಷೆಯಾಗಿ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಜವಾನ, ಸ್ವಚ್ಚತಾಗಾರರು ಹುದ್ದೆಗೂ ಇದೇ ವಿದ್ಯಾರ್ಹತೆ ಬಯಸಲಾಗಿದೆ.
ಈ ಹುದ್ದೆಗಳ ಕುರಿತು ಸಂಪೂರ್ಣ ವಿವರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ