ದಕ್ಷಿಣ ಕನ್ನಡದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ
ಕನ್ನಡ ಸುದ್ದಿ  /  ಕರ್ನಾಟಕ  /  ದಕ್ಷಿಣ ಕನ್ನಡದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

ದಕ್ಷಿಣ ಕನ್ನಡದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಗ್ರಾಮಪಂಚಾಯಿತಿ ಉಪಾಧ್ಯಕ್ಷನನ್ನು ಅಮಾನತು ಮಾಡಲಾಗಿದೆ.ವರದಿ: ಹರೀಶ ಮಾಂಬಾಡಿ,ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಪಂ ಉಪಾಧ್ಯಕ್ಷನನ್ನು ಅಮಾನತು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಪಂ ಉಪಾಧ್ಯಕ್ಷನನ್ನು ಅಮಾನತು ಮಾಡಲಾಗಿದೆ.

ಮಂಗಳೂರು: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯ ಜೊತೆ ಅಸಭ್ಯ ವರ್ತನೆ ತೋರಿದ ಗ್ರಾಮ ಪಂಚಾಯತಿ ಉಪಾಧ್ಯಕ್ಷನೊಬ್ಬನ ವಿರುದ್ಧ ಮಹಿಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ತಕ್ಷಣ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಡ್ಕಿದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಕೊಡೆಂಚರಪಾಲು ಪ್ರಕರಣದ ಆರೋಪಿ. ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದ ಂತೆ ಮಹಿಳೆಗೂ ಪದ್ಮನಾಭ ಅವರಿಗೂ ವಿವಾದ ಇತ್ತು. ರಸ್ರೆಯ ಗೇಟಿಗೆ ಬೀಗ ಹಾಕಿದ್ದನ್ನು ವಿಚಾರಿಸಲು ಬಂದ ಮಹಿಳೆ ಮುಂದೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ (ಈ ಬಗ್ಗೆ ವೀಡಿಯೋ ವೈರಲ್ ಆಗಿದೆ.) ಎನ್ನಲಾಗಿದೆ. ಮಹಿಳೆ ಪದ್ಮನಾಭ ಸಪಲ್ಯ ಅವರ ವಿರುದ್ಧ ವಿಟ್ಲ ಪೊಲೀಸರಿಗೆ ದೂರು ನೀಡಿದರು.

ಘಟನೆಯ ಮಾಹಿತಿ ಪಡೆದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ತಕ್ಷಣದಿಂದ ಜಾರಿಗೆ ಬರುವಂತೆ ಪದ್ಮನಾಭ ಸಪಲ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಲ್ಲದೇ ಕೂಡಲೇ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ

ನೆಲ್ಯಾಡಿಯಲ್ಲಿ ಯುವಕನ ಬರ್ಬರ ಹತ್ಯೆ

ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಯುವಕನೊಬ್ಬನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಶರತ್(35) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಮೃತ ಶರತ್ನ ಚಿಕ್ಕಪ್ಪನ ಮನೆಯ ಅಂಗಳದಲ್ಲೇ ನಡೆದಿದೆ ಎಂದು ತಿಳಿದುಬಂದಿದೆ. ಮೃತನ ಬಳಿ ಚಾಕು ಬಿದ್ದಿರುವುದು ಪತ್ತೆಯಾಗಿದೆ

ಘಟನೆಯ ಮಾಹಿತಿ ತಿಳಿದ ಕೂಡಲೇ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುತ್ತೂರಿನಲ್ಲಿ ಕೆಎಸ್ಸಾರ್ಟಿಸಿ ಬಸ್ – ಬೈಕ್ ಡಿಕ್ಕಿ, ಓರ್ವ ಸಾವು

ಪುತ್ತೂರಿನಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭಾನುವಾರ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ.

ಕಬಕದ ಕೂವೆತ್ತಿಲ ಸಮೀಪ, ಸರಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಸ್, ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಗಾಯಾಳುಗಳ ಪೈಕಿ ಓರ್ವ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೈಕ್ ಸವಾರರಿಬ್ಬರೂ ಬಂಟ್ವಾಳ ತಾಲೂಕಿನ ನರಿಕೊಂಬಿನವರು ಎಂದು ತಿಳಿದುಬಂದಿದ್ದು, ಅಪಘಾತದ ಪರಿಣಾಮ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.

ನಸುಕಿನ ಜಾವ ನಡೆದ ಘಟನೆ: ಮದುವೆಗೆ ತೆರಳುತ್ತಿದ್ದ ಕಾರು ಅಪಘಾತ

ಮಾಣಿ ಮೈಸೂರು ಹೆದ್ದಾರಿಯ ಕಲ್ಲರ್ಪೆ ಕಾರ್ಪಾಡಿ ದ್ವಾರದ ಬಳಿ ಭಾನುವಾರ ಬೆಳಗ್ಗೆ ನಡೆದ ಘಟನೆಯಲ್ಲಿ ಮೂರು ಕಾರುಗಳು ಮತ್ತು ಒಂದು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿವೆ.

ನಾಯಿಯೊಂದು ಅಡ್ಡಬಂದ ಕಾರಣ, ಅದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದಾಗ ಈ ಸರಣಿ ಅಪಘಾತ ಸಂಭವಿಸಿದೆ. ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಓಮ್ನಿ ಹಾಗೂ ಇನ್ನೆರಡು ಕಾರುಗಳು ಒಂದು ದ್ವಿಚಕ್ರ ವಾಹನ ಜಖಂಗೊಂಡವು.

ವರದಿ: ಹರೀಶ ಮಾಂಬಾಡಿ,ಮಂಗಳೂರು

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.