Breaking News:ದಕ್ಷಿಣ ಕನ್ನಡ - ಕಡಬದ ಕುಂತೂರಿನಲ್ಲಿ ಶಾಲೆ ಛಾವಣಿ, ಗೋಡೆ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ-dakshina kannada news heavy rain in dakshina kannada school roof wall collapse 4 students injured hsm ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Breaking News:ದಕ್ಷಿಣ ಕನ್ನಡ - ಕಡಬದ ಕುಂತೂರಿನಲ್ಲಿ ಶಾಲೆ ಛಾವಣಿ, ಗೋಡೆ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Breaking News:ದಕ್ಷಿಣ ಕನ್ನಡ - ಕಡಬದ ಕುಂತೂರಿನಲ್ಲಿ ಶಾಲೆ ಛಾವಣಿ, ಗೋಡೆ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Dakshina Kannda Rains ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಶಾಲೆ ಛಾವಣಿ ಹಾಗೂ ಗೋಡೆ ಕುಸಿದು ನಾಲ್ಕು ಮಕ್ಕಳಿಗೆ ಗಾಯವಾಗಿದೆ.ವರದಿ: ಹರೀಶ ಮಾಂಬಾಡಿ. ಮಂಗಳೂರು

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲೆ ಛಾವಣಿ ಹಾಗೂ ಗೋಡೆಗಳು.
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲೆ ಛಾವಣಿ ಹಾಗೂ ಗೋಡೆಗಳು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಎಂಬಲ್ಲಿ ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮಂಗಳವಾರ ಬೆಳಗ್ಗಿನಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗಾಳಿ ಮಳೆಯಾಗುತ್ತಿದೆ. ಮಧ್ಯಾಹ್ನ ಕುಂತೂರಿನಲ್ಲಿ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಈ ಘಟನೆ ನಡೆದಿದೆ.

ಕುಂತೂರು‌ ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ನಾಲ್ವರು ಮಕ್ಕಳು ಗಾಯಗೊಂಡರು. ಅವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಲಕ್ಷಾಂತರ ರೂ.‌ ನಷ್ಟ ಸಂಭವಿಸಿದೆ. ಕಟ್ಟಡದ ಬಳಿ ಜೆಸಿಬಿಯಲ್ಲಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದ್ದು, ಆದ್ದರಿಂದಾಗಿ ಮೊದಲೇ ಶಿಥಿಲಗೊಂಡಿದ್ದ ಕಟ್ಟಡ ಕುಸಿದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕುಂತೂರು ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಹಳೆಯ ಕಟ್ಟಡದ ಒಂದು ಗೊಡೆ ಕುಸಿದು ಬಿದ್ದಿದೆ. ಈ ವೇಳೆ ತರಗತಿಯಲ್ಲಿದ್ದ ನಾಲ್ಕು ಮಕ್ಕಳಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ತರಗತಿಯ ಹೆಚ್ಚಿನ ಮಕ್ಕಳು ಆಟದ ಮೈದಾನದಲ್ಲಿದ್ದ ಕಾರಣ ಭಾರೀ ದೊಡ್ಡ ಅನಾಹುತವೊಂದು ತಪ್ಪಿದೆ.

ಈ ಹಳೆಯ ಅಪಾಯಕಾರಿ ಕಟ್ಟಡವನ್ನು ತೆರವುಗೊಳಿಸಬೇಕೆಂದು ಗ್ರಾಮಸ್ಥರು ಹಲವು ಭಾರೀ ಪ್ರತಿಭಟನೆ ನಡೆಸಿದ್ದರು. ಆದರೂ ಅಪಾಯಕಾರಿ ಕಟ್ಟಡದಲ್ಲೇ ಮಕ್ಕಳಿಗೆ ತರಗತಿ ನಡೆಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಸ್ಥಳದಲ್ಲಿ ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ವರದಿ: ಹರೀಶ ಮಾಂಬಾಡಿ.ಮಂಗಳೂರು