Mangalore Crime: ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ, ದಕ್ಷಿಣ ಕನ್ನಡದ ಬೆಳಾಲು ಗ್ರಾಮದ ಸ್ನೇಹಿಮಯಿ ಶಿಕ್ಷಕನ ದುರಂತ ಅಂತ್ಯ
ಕನ್ನಡ ಸುದ್ದಿ  /  ಕರ್ನಾಟಕ  /  Mangalore Crime: ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ, ದಕ್ಷಿಣ ಕನ್ನಡದ ಬೆಳಾಲು ಗ್ರಾಮದ ಸ್ನೇಹಿಮಯಿ ಶಿಕ್ಷಕನ ದುರಂತ ಅಂತ್ಯ

Mangalore Crime: ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ, ದಕ್ಷಿಣ ಕನ್ನಡದ ಬೆಳಾಲು ಗ್ರಾಮದ ಸ್ನೇಹಿಮಯಿ ಶಿಕ್ಷಕನ ದುರಂತ ಅಂತ್ಯ

Dharmsthala Crime ದಕ್ಷಿಣ ಕನ್ನಡದ ಧರ್ಮಸ್ಥಳ ಸಮೀಪದ ಬೆಳಾಲುವಿನಲ್ಲಿ ನಿವೃತ್ತ ಶಿಕ್ಷಕರೊಬ್ಬರನ್ನು ಅವರ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಲಾಗಿದೆ.ವರದಿ:ಹರೀಶ ಮಾಂಬಾಡಿ, ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರನ್ನು ಅವರ ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರನ್ನು ಅವರ ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಎಂಬಲ್ಲಿ ನಿವೃತ್ತ ಶಿಕ್ಷಕರೊಬ್ಬರನ್ನು ಮನೆಯ ಅಂಗಳದಲ್ಲೇ ಹತ್ಯೆ ಮಾಡಲಾಗಿದೆ. ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯಿಂದಾಗಿ ಪರಿಸರದಲ್ಲಿ ಆತಂಕ ಉಂಟುಮಾಡಿದೆ. ಎಸ್.ಪಿ.ಬಿ ಕಾಂಪೌಟ್ ನಿವಾಸಿ ಎಸ್.ಪಿ.ಬಾಲಕೃಷ್ಣ ಭಟ್ (73) ಎಂಬವರೇ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಮಧ್ಯಾಹ್ನದ ಬಳಿಕ ಕೊಲೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮನೆಯ ಅಂಗಳದಲ್ಲಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದ್ದು ಮೃತದೇಹ ಅಂಗಳದಲ್ಲಿಯೇ ಬಿದ್ದುಕೊಂಡಿದೆ. ಕೊಲೆಗಾರರು ಯಾರು ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ, ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್ ಕದ್ರಿ ಅವರು ಸ್ಥಳಕ್ಕೆ ತರಳಿ ಪರಿಶೀಲನೆ ನಡೆಸಿದ್ದು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಎಲ್ಲರೊಡನೂ ಸ್ನೇಹಮಯಿಯಾಗಿದ್ದ ಮಾಸ್ಟರ್

ಮೃತರಿಗೆ ಇಬ್ಬರು ಗಂಡುಮಕ್ಕಳು ಹಾಗೂ ಒಬ್ಬಳು ಹೆಣ್ಣು ಮಗಳಿದ್ದಾರೆ, ಒಬ್ಬ ಮಗ ಬೆಂಗಳೂರಿನಲ್ಲಿ ಇದ್ದು ಮಗಳನ್ನು ವಿವಾಹ ಮಾಡಿ ಕೊಡಲಾಗಿದೆ. ಇನ್ನೊಬ್ಬ ಮಗ ತಂದೆಯೊಂದಿಗೆ ಇದ್ದ ಇದ್ದ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಷ್ಟೇ ಇನ್ನಷ್ಟು ಮಾಹಿತಿಗಳು ತಿಳಿದು ಬರಬೇಕಾಗಿದೆ ಎಲ್ಲರೊಡನೂ ಸ್ನೇಹಮಯಿಯಾಗಿದ್ದ ಶಿಕ್ಷಕರ ಕೊಲೆ ಆತಂಕಕ್ಕೀಡುಮಾಡಿದೆ. ಯಾವುದೇ ದ್ವೇಷ ಯಾರೊಡನೆಯೂ ಇಲ್ಲದೆ ಇರುವಾಗ ಈ ಕೃತ್ಯವನ್ನು ಯಾರು ಮಾಡಿದರು ಎಂಬ ಪ್ರಶ್ನೆ ಎಲ್ಲರಲ್ಲೂ ಹುಟ್ಟಿಕೊಂಡಿದೆ. ಸದ್ಯ ಮನೆಯವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಐವನ್ ಡಿಸೋಜ ವಿರುದ್ಧ ಬಂಟ್ವಾಳದಲ್ಲಿ ದೂರು

ಮಂಗಳೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ದೂರು ನೀಡಲಾಗಿದೆ. ಮೂಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ಮಂಗಳೂರು ಪಾಲಿಕೆಯ ಮುಂಭಾಗ ಕಾಂಗ್ರೆಸ್ ನಡೆಸುತ್ತಿರುದ್ದ ಪ್ರತಿಭಟನೆ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ರಾಜ್ಯಪಾಲರ ವಿರುದ್ಧ ನೀಡಿದ ಹೇಳಿಕೆಗಳು ಪ್ರಚೋದನಕಾರಿಯಾಗಿವೆ ಎಂದು ಆಪಾದಿಸಿರುವ ಯುವಮೋರ್ಚಾ, ಬಂಟ್ವಾಳ ನಗರ ಪೊಲೀಸರು ದೂರು ನೀಢಿದೆ. ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿ ಬೆಟ್ಟು ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಐವನ್ ಡಿಸೋಜ ಅವರ ವಿರುದ್ಧ ದೂರು ನೀಡಿದ್ದಾರೆ. ಯುವಮೋರ್ಚಾ ಬಂಟ್ವಾಳ ಅಧ್ಯಕ್ಷ ದಿನೇಶ್ ದಂಬೆದಾರು, ಸುರೇಶ್ ಕೋಟ್ಯಾನ್, ಪ್ರಮುಖರಾದ ಯಶೋಧರ್ ಕರ್ಬೇಟ್ಟು. ಕಾರ್ತಿಕ್ ಬಳ್ಳಾಲ್, ಹರೀಶ್ ಶೆಟ್ಟಿ, ಮನೋಜ್ ಶೆಟ್ಟಿ, ಹರಿಪ್ರಸಾದ್ ಭಂಡಾರಿಬೆಟ್ಟು, ಸಂಪತ್ ಕುಮಾರ್ ಕಡೇಶ್ವಾಲ್ಯ ಪುರುಷೋತ್ತಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಅಪರಿಚಿತ ಮಹಿಳೆಯ ಶವ ನೇತ್ರಾವತಿಯಲ್ಲಿ ಪತ್ತೆ

ಅಪರಿಚಿತ ಮಹಿಳೆಯ ಶವವೊಂದು ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಆ.20 ರಂದು ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಶಂಭೂರು ಗ್ರಾಮದಲ್ಲಿರುವ ಎ.ಎಮ್.ಆರ್.ಪವರ್ ಲಿ.ಡ್ಯಾಂನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತದೇಹವನ್ನು ನೋಡಿ ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ್ದಾರೆ.

ಡ್ಯಾಂ ನ 6 ನೇ ಗೇಟ್ ನ ಬಳಿ ಸುಮಾರು 40-55 ವರ್ಷದ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ‌ಮೃತಪಟ್ಟಿರಬಹುದು ಎಂದು‌ ಪೋಲೀಸರಿಗೆ ಮೇಲ್ನೋಟಕ್ಕೆ ಕಂಡುಬಂದಿದೆ. ಅಪರಿಚಿತ ಮಹಿಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನ್ನಪ್ಪಿರಬಹುದೇ ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬುದು ಇನ್ನೂ ತಿಳಿದುಬರಬೇಕಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ವಾರೀಸದಾರರಿದ್ದಲ್ಲಿ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ತಿಳಿಸಿದ್ದಾರೆ.

(ವರದಿ: ಹರೀಶ ಮಾಂಬಾಡಿ, ಮಂಗಳೂರು)

Whats_app_banner