ಕನ್ನಡ ಸುದ್ದಿ / ಕರ್ನಾಟಕ /
ಹರೇಕಳ ಹಾಜಬ್ಬರನ್ನು ಮೊದಲ ಬಾರಿಗೆ ಪರಿಚಯಿಸಿದ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಆರೋಗ್ಯ ಸ್ಥಿತಿ ಗಂಭೀರ
ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ಕನ್ನಡನಾಡಿಗೆ ಪರಿಚಯಿಸಿದ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಆರೋಗ್ಯ ಸ್ಥಿತಿ ಗಂಭೀರ
ಮಂಗಳೂರು: ಹಿರಿಯ ಪತ್ರಕರ್ತರಾದ ಗುರುವಪ್ಪ ಬಾಳೆಪುಣಿ ಗಂಭೀರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ಕನ್ನಡನಾಡಿಗೆ ಪರಿಚಯಿಸಿದ ಕೀರ್ತಿ ಇವರದ್ದು.
ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರರಾಗಿದ್ದ ಅವರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿಯೂ ಗುರುತಿಸಿಕೊಂಡಿದ್ದರು. ಸುದೀರ್ಘ 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ ಅನುಭವ ಇವರದ್ದು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.
ಪತ್ರಿಕೋದ್ಯಮದಲ್ಲಿ ಅಪಾರ ಅನುಭವ ಹೊಂದಿದ್ದ ಅವರಿಗೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.
