Darshan Updates: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  Darshan Updates: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಕೆ

Darshan Updates: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಕೆ

Darshan Thoogudeepa case: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಇರುವ ನಟ ದರ್ಶನ್‌ ಅವರಿಗೆ ನೀಡಿರುವ ಜಾಮೀನು ರದ್ದತಿ ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.ವರದಿ: ಎಚ್.ಮಾರುತಿ.ಬೆಂಗಳೂರು

ನಟ ದರ್ಶನ್‌ ಜಾಮೀನು ರದ್ದತಿ ಕೋರಿ ಮೇಲ್ಮನವಿ ಸಲ್ಲಿಕೆಯಾಗಿದೆ.
ನಟ ದರ್ಶನ್‌ ಜಾಮೀನು ರದ್ದತಿ ಕೋರಿ ಮೇಲ್ಮನವಿ ಸಲ್ಲಿಕೆಯಾಗಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಈ ಅರ್ಜಿ ಡಿಸೆಂಬರ್‌ 6 ಅಥವಾ ಡಿ.9 ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ದರ್ಶನ್ ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದರು. ಅಲ್ಲಿ ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದಡಿಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ಜೈಲಿನಲ್ಲಿದ್ದ ಅವಧಿಯಲ್ಲಿ ದರ್ಶನ್ ಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ವೈದ್ಯಕೀಯ ಚಿಕಿತ್ಸೆಗೆ ಜಾಮೀನು ನೀಡುವಂತೆ ದರ್ಶನ್ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ ಆರೋಗ್ಯದ ಚಿಕಿತ್ಸೆಗಾಗಿಯೇ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಸಿಕ್ಕ ನಂತರದರ್ಶನ್‌ ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಧ್ಯಂತರ ಜಾಮೀನು ಅವದಿಯೂ ಕೊನೆಯಾಗುತ್ತಾ ಬಂದಿದೆ.ಈ ಮಧ್ಯೆ ಹೈಕೋರ್ಟ್‌ ನಲ್ಲಿ ದರ್ಶನ್‌ ಅವರ ಸ್ನೇಹಿತೆ ಪವಿತ್ರಾಗೌಡ ಮೊದಲಾದ ಆರೋಪಿಗಳ ರೆಗ್ಯುಲರ್‌ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.

ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿತ್ತು. ಅನುಮತಿ ಸಿಕ್ಕ ಬೆನ್ನಲ್ಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ.

ವ್ಹೀಲಿಂಗ್‌ ನಡೆಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ; 11 ಪುಂಡರ ಬಂಧನ

ಬೆಂಗಳೂರಿನ ವಿವಿಧ ಭಾಗಗಳಲ್ಲಿ ವ್ಹೀಲಿಂಗ್‌ ನಡೆಸುತ್ತಿದ್ದ ಪುಂಡರ ವಿರುದ್ಧ ವಿಶೇ಼ಷ ಕಾರ್ಯಾಚರಣೆ ನಡೆಸಿದ ಸಂಚಾರ ವಿಭಾಗದ ಪೊಲೀಸರು ಒಂದೇ ದಿನದಲ್ಲಿ 11 ಮಂದಿಯನ್ನು ಬಂಧಿಸಿದ್ದಾರೆ.

ಮೇಲ್ಸೇತುವೆ,ರಿಂಗ್‌ ರಸ್ತೆ ಮೊದಲಾದ ಬಡಾವಣೆಗಳಲ್ಲಿ ವ್ಹೀಲಿಂಗ್ ನಡೆಸುತ್ತಾ ಇತರೆ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಸಂಚಾರ ಪೊಲೀಸರಿಗೆ ಸಾಮಾಜಿಕ ಜಾಲತಾಣ ಹಾಗೂ ನೇರವಾಗಿ ದೂರುಗಳು ಬಂದಿದ್ದವು. ಈ ದೂರುಗಳನ್ನು ಆಧರಿಸಿ ಸಂಚಾರ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಡಿಸೆಂಬರ್. 2ರ ಮುಂಜಾನೆಯಿಂದ ಡಿ.3ರ ಸಂಜೆವರೆಗೆ ನಗರದ ಎಲ್ಲಾ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ವ್ಹೀಲಿಂಗ್ ಮಾಡುತ್ತಿದ್ದ 11ಮಂದಿಯನ್ನು ಬಂಧಿಸಿ, 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರ ವಿರುದ್ಧ 12 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಪೂರ್ವ ವಿಭಾಗದ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ 406 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಮತ್ತು 2 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಏಕಮುಖ ಸಂಚಾರ, ನಿಷೇಧಿತ ಸ್ಥಳದಲ್ಲಿ ವಾಹನ ನಿಲುಗಡೆ, ದ್ವಿಚಕ್ರ ವಾಹನದಲ್ಲಿ ಮೂವರ ಸವಾರಿ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ 406 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇವರಿಂದ ಎರಡು ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಎಚ್.ಮಾರುತಿ

Whats_app_banner