Dasara Holidays 2024: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ; ಯಾವಾಗಿಂದ ರಜೆ ಆರಂಭ, ಎಷ್ಟು ದಿನ?-dasara holidays 2024 in karnataka dussehra holidays announced for school children when does the holiday start prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Dasara Holidays 2024: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ; ಯಾವಾಗಿಂದ ರಜೆ ಆರಂಭ, ಎಷ್ಟು ದಿನ?

Dasara Holidays 2024: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ; ಯಾವಾಗಿಂದ ರಜೆ ಆರಂಭ, ಎಷ್ಟು ದಿನ?

Dasara Holidays 2024 in Karnataka: ನಾಡ ಹಬ್ಬ ದಸರಾ ಹಬ್ಬಕ್ಕೆ ಅದ್ಧೂರಿ ಸಿದ್ದತೆ ರಾಜ್ಯ ಸರ್ಕಾರ ನಡೆಸುತ್ತಿದೆ. ಇದರ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ
ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಕರ್ನಾಟಕದ ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದಸರಾ ರಜೆ (Dasara Holidays 2024 in karnataka) ಘೋಷಿಸಿದೆ. ನಾಡ ಹಬ್ಬ ದಸರಾ ಹಬ್ಬಕ್ಕೆ ಅದ್ಧೂರಿ ಸಿದ್ದತೆ ನಡೆಸುತ್ತಿರುವ ರಾಜ್ಯ ಸರ್ಕಾರ, ಅಕ್ಟೋಬರ್​ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ. ಈ ಹಿಂದೆ ಮಂಗಳೂರಿನ ಭಾಗದಲ್ಲಿ ವಿದ್ಯಾರ್ಥಿಗಳ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಯಿತು. ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇರಲಿದೆ. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳು ರಜೆಯ ಮಜಾ ಕಳೆಯಲಿದ್ದಾರೆ.

ಅಕ್ಟೋಬರ್​ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್​​ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ಮಕ್ಕಳು ಊರುಗಳಿಗೆ ಹೊರಡಲು ತಯಾರಿ

ಗ್ರಾಮದಿಂದ ವಲಸೆ ಬಂದು ನಗರಗಳಲ್ಲಿ ವಾಸಿಸುತ್ತಿರುವ ಪೋಷಕರು ಮಕ್ಕಳನ್ನು ತಮ್ಮ ಮಕ್ಕಳನ್ನು ಊರುಗಳಿಗೆ ಕಳುಹಿಸಲು ಸಜ್ಜಾಗಿದ್ದಾರೆ. ಮಕ್ಕಳು ಸಹ ತಮ್ಮ ತಾತ ಮತ್ತು ಅಜ್ಜಿ ಇರುವ ಊರಿಗೆ ಹಾಗೂ ನೆಂಟರ ಊರುಗಳಿಗೆ ಹೋಗಲು ತಯಾರಿ ನಡೆಸಿದ್ದಾರೆ. ಇನ್ನು ಕೆಲವು ಪೋಷಕರು ತಮ್ಮ ಮಕ್ಕಳೊಂದಿಗೆ ಪ್ರವಾಸ ಕೈಗೊಳ್ಳಲು ಚಿಂತನೆ ನಡೆಸಿದ್ದಾರೆ. ಏಕೆಂದರೆ ಶಾಲಾ ಅವಧಿಯಲ್ಲಿ ಮಕ್ಕಳನ್ನು ಸುತ್ತಾಟಕ್ಕೆ ಕರೆದೊಯ್ಯಲು ಸಾಧ್ಯವಾಗದ ಕಾರಣ ರಜೆಗಾಗಿ ಕಾಯುತ್ತಿದ್ದಾರೆ.

ದಸರಾ ರಜೆಯ ದಿನಗಳನ್ನು ಫೋಷಕರು ಪರಿಗಣಿಸಿ, ಮಕ್ಕಳ ಕಲಿಕೆಗೆ, ಪಠ್ಯೇತರ ಚಟವಟಿಕೆಗಳಲ್ಲಿ ತೊಡಗಿಕೊಳ್ಳಲು ಇದೊಂದು ಉತ್ತಮ ಅವಕಾಶ ಎಂದೇ ಹೇಳಬಹುದು. ನಗರ ಪ್ರದೇಶಗಳ ಫೋಷಕರು ತಮ್ಮ ಮಕ್ಕಳಿಗೆ ಇಷ್ಟವಾದ ಪ್ರವಾಸ ಕೈಗೊಳ್ಳಬಹುದು. ಅಥವಾ ಕ್ರೀಡೆಗಳು ಸೇರಿದಂತೆ ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವ್ಯವಸ್ಥೆ ಮಾಡಬಹುದು. ಆದರೆ ಈ ರಜೆಗಳ ಅವಧಿಯಲ್ಲಿ ಮಕ್ಕಳಿಗೆ ಮಾನಸಿಕ ಹೆಚ್ಚು ಆರೋಗ್ಯವಾಗಿ ನೋಡಿಕೊಳ್ಳುವುದು ಉತ್ತಮ.

mysore-dasara_Entry_Point