ಕನ್ನಡ ಸುದ್ದಿ / ಕರ್ನಾಟಕ /
ಶಹಾಪುರ ಸಮೀಪ ಭೀಕರ ರಸ್ತೆ ಅಪಘಾತ; ಬೊಲೆರೋ- ಕೆಕೆಎಸ್‌ಆರ್‌ಟಿಸಿ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರ ದುರ್ಮರಣ
Shahapur Accident: ಶಹಾಪುರ ತಾಲೂಕು ಮದ್ದರಕಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದರು.

ಶಹಾಪುರ ಸಮೀಪ ಭೀಕರ ರಸ್ತೆ ಅಪಘಾತಕ್ಕೀಡಾದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಮತ್ತು ಬೊಲೆರೋ ವಾಹನ. (Special Arrangement)
Shahapur Accident: ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.
ಮೃತರನ್ನು ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50), ತಂಗಮ್ಮ (50) ಎಂದು ಗುರುತಿಸಲಾಗಿದೆ. ಬೊಲೆರೋ ವಾಹನದಲ್ಲಿ ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬೊಲೆರೋ ವಾಹನದಲ್ಲಿದ್ದ ಇತರರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
