ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ; ಮೈಸೂರು ಜಿಲ್ಲೆಯಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ!
ಕನ್ನಡ ಸುದ್ದಿ  /  ಕರ್ನಾಟಕ  /  ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ; ಮೈಸೂರು ಜಿಲ್ಲೆಯಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ; ಮೈಸೂರು ಜಿಲ್ಲೆಯಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ!

Male Mahadeshwara Hills: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಅಕ್ಟೋಬರ್​ 29ರಿಂದ ಐದು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ; ಮೈಸೂರು ಜಿಲ್ಲೆಯಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ!
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ; ಮೈಸೂರು ಜಿಲ್ಲೆಯಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ!

ಹನೂರು (ಚಾಮರಾಜನಗರ): ಮಲೆ ಮಹದೇಶ್ವರ ಬೆಟ್ಟದಲ್ಲೀಗ (Male Mahadeshwara Hills) ದೀಪಾವಳಿ ಜಾತ್ರಾ ಮಹೋತ್ಸವದ (Deepavali Jatra Mahotsav) ಸಂಭ್ರಮ. ಇಂದಿನಿಂದ (ಅಕ್ಟೋಬರ್ 29ರಿಂದ) ಐದು ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರವು ವಿದ್ಯುತ್ ದೀಪಾಲಂಕಾದಿಂದ ಕಂಗೊಳಿಸುತ್ತಿದ್ದು, ಮಾದಪ್ಪನ ಸನ್ನಿಧಿ ಜಗಮಗಿಸುತ್ತಿದೆ. ಇಂದು ಮುಂಜಾನೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದು, ಮುಂಜಾನೆ ಎಣ್ಣೆ ಮಜ್ಜನ, ರುದ್ರಾಭಿಷೇಕ, ಬಿಲ್ವಾಭಿಷೇಕ, ಮಹಾ ಮಂಗಳಾರತಿ ನೆರವೇರಿಸಲಾಗಿದೆ.

5 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಅಕ್ಟೋಬರ್ 28ರಿಂದಲೇ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದು ಬರುತ್ತಿದೆ. ದೂರದ ಊರುಗಳಿಂದ ಬರುವಂತಹ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಲ್ಲಿ ಕುಡಿಯುವ ನೀರಿನ ಘಟಕ, ಶೌಚಾಲಯ, ದಿನದ 24 ಗಂಟೆ ನಿರಂತರ ದಾಸೋಹ, ಪ್ರಸಾದ ವಿನಿಯೋಗ, ದರ್ಶನಕ್ಕೆ ವಿಶೇಷ ವ್ಯವಸ್ಥೆ, ಪಾದಯಾತ್ರೆ ಮೂಲಕ ಬರುವ ಭಕ್ತಾಧಿಗಳಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದಿನಿಂದ 5 ದಿನಗಳ ಕಾಲ ದ್ವಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. 350 ಕ್ಕೂ ಹೆಚ್ಚು ಕೆಎಸ್ಆರ್​​ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಶಕ್ತಿ ಯೋಜನೆ ಹಿನ್ನೆಲೆ, ಫ್ರೀ ಬಸ್​ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಭದ್ರತೆಗಾಗಿ 1000 ಕ್ಕೂ ಹೆಚ್ಚು ಪೋಲಿಸರ ನಿಯೋಜನೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ, ಮಲೆ ಮಹದೇಶ್ವರ ಪ್ರಾಧಿಕಾರದ ವತಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಹೆಚ್​​ಡಿ ಕೋಟೆ ತಾಲೂಕಿನ ಹೌಸಿಂಗ್ ಬೋರ್ಡ್ ಬಳಿ ಘಟನೆ ನಡೆದಿದೆ. ಮಾಜಿ ಶಾಸಕ ದಿವಂಗತ ಎನ್ ನಾಗರಾಜು ಅವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಒಂದು ತಿಂಗಳ ಒಳಗೆ ಒಂದೇ ಸ್ಥಳದಲ್ಲಿ ಬೋನಿಗೆ ಬಿದ್ದ ಐದನೇ ಗಂಡು ಚಿರತೆ ಇದಾಗಿದೆ. ಸುಮಾರು 1 ವರ್ಷದಿಂದ ಈ ಭಾಗದಲ್ಲಿ ಚಿರತೆಗಳ ಕಾಟ ಹೆಚ್ಚಾಗಿತ್ತು. ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಬೋನು ಇರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಲ ದಿನಗಳ ಹಿಂದೆ ಹುಲಿ ಸಹ ಕಾಣಿಸಿಕೊಂಡಿತ್ತು.

ಸೆರೆ ಸಿಕ್ಕ ಚಿರತೆಯನ್ನು ನೋಡಲು ಜನರು ಮುಗಿ ಬಿದ್ದಿದ್ದರು. ಜನರನ್ನು ನೋಡಿ ಆಕ್ರೋಶಗೊಂಡ ಚಿರತೆ ಆರ್ಭಟಿಸಿತು. ಬೋನಿನ‌ ಒಳಗಿನಿಂದಲೇ ಜನರ ಮೇಲೆ ದಾಳಿಗೆ ಯತ್ನ ನಡೆಸಿತು. ಆದರೆ, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತಿಸಿದರು. ಸೆರೆ ಸಿಕ್ಕ ಎಲ್ಲಾ ಚಿರತೆಗಳು ಆರಿರಿಂದ ಏಳು ವರ್ಷ ಪ್ರಾಯದ ಗಂಡು ಚಿರತೆಗಳೇ ಆಗಿವೆ. ಇನ್ನಷ್ಟು ಚಿರತೆಗಳು ಇರಬಹುದು ಎಂದು ರೈತರು ಶಂಕೆ ವ್ಯಕ್ತಪಡಿಸಿದ್ದಾರೆ. ಮತ್ತೆ ಬೋನು ಇಡಲು ಒತ್ತಾಯಿಸಿದ್ದಾರೆ.

Whats_app_banner