Breaking News: ಅಕ್ರಮ ಆಸ್ತಿ ಗಳಿಕೆ, ಸುಪ್ರೀಂಕೋರ್ಟ್ ನಿಂದ ಡಿಕೆಶಿ ವಿರುದ್ದದ ಪ್ರಕರಣ ರದ್ದು
DK Shivakumar ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ದ ಇಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ದೆಹಲಿ: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಲೋಕಸಭೆ ಚುನಾವಣೆ ವೇಳೆ ನಿರಾಳರಾಗಿದ್ದಾರೆ. ಅವರ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಆದಾಯ ತೆರಿಗೆ ಇಲಾಖೆ 2017ರಲ್ಲಿ ಡಿಕೆ ಶಿವಕುಮಾರ್ ಹಾಗೂ ಬೆಂಬಲಿಗರ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿತ್ತು. ಆಗ 300 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿತ್ತು.ಆದಾಯಕ್ಕಿಂತಲ್ಲೂ ಹೆಚ್ಚಿನ ಆಸ್ತಿಯನ್ನು ಸಂಪಾದಿಸಿದ್ದಾರೆ ಎನ್ನುವ ಕುರಿತು 2018 ರಲ್ಲಿ ಪ್ರಕರಣ ದಾಖಲಾಗಿತ್ತು.
ಕೇಂದ್ರ ಜಾರಿ ನಿರ್ದೇಶನಾಲಯ( ED) ಡಿಕೆಶಿವಕುಮಾರ್ ವಿರುದ್ದ ದಾಖಲಿಸಿದ್ದ ಪ್ರಕರಣದಲ್ಲಿ 2019ರಲ್ಲಿ ಅವರನ್ನು ಬಂಧಿಸಲಾಗಿತ್ತು. ಆನಂತರ ನೂರು ದಿನ ದೆಹಲಿಯ ಕಾರಾಗೃಹದಲ್ಲೂ ಡಿಕೆಶಿ ಇದ್ದರು. ಆನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು. ಈ ಕುರಿತಾದ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.
ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಡಿಕೆ ಶಿವಕುಮಾರ್ ಮೊರೆ ಹೋಗಿದ್ದರೂ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯವನ್ನು ಅರ್ಜಿಯನ್ನು ವಜಾಗೊಳಿಸಿತು.
ರಾಜಕೀಯ ಕಾರಣಗಳಿಗೆ ಬಿಜೆಪಿ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪ್ರಕರಣ ದಾಖಲಿಸಿ ತೊಂದರೆ ಕೊಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದರು.
