Morarji Desai Hostel: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಶಾಲೆ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
2025-26ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಉಚಿತ ಸೇವೆಯಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ.

ಬೆಂಗಳೂರು: ರಾಜ್ಯದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯ ಅಧಿಸೂಚನೆ ಹೊರಡಿಸಿದ್ದು, ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 31 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಮಾರ್ಚ್ 2025
ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ (ತಾತ್ಕಾಲಿಕ): 13 ಏಪ್ರಿಲ್ 2025
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ: 10 ಮೇ 2025
ದಾಖಲಾತಿ ಪ್ರಕ್ರಿಯೆ ಪ್ರಾರಂಭದ ದಿನಾಂಕ: 20 ಮೇ 2025 ರಿಂದ 31 ಮೇ 2025
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8277799990, 080-22535902
ಮೀಸಲಾತಿ ವಿವರ
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಸೌಲಭ್ಯದ ಒಟ್ಟು 148 ಶಾಲೆಗಳಲ್ಲಿ, 11,330 ಸ್ಥಾನಗಳು ಲಭ್ಯವಿದೆ. ಇದರಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧ, ಸಿಖ್ ಮತ್ತು ಪಾರ್ಸಿಗಳಿಗೆ ಶೇ. 75 ಮತ್ತು ಎಸ್‌ಸಿ, ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಶೇ. 25 ಮೀಸಲಾತಿ ದೊರೆಯಲಿದೆ.
ಇದನ್ನೂ ಓದಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025ಕ್ಕೆ ಅರ್ಜಿ ಆಹ್ವಾನ, ಪುಸ್ತಕ ಸಲ್ಲಿಸಲು ಫೆ. 28 ಕೊನೆ ದಿನ
ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, SATS ಸಂಖ್ಯೆ, ಆಧಾರ್ ಸಂಖ್ಯೆ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವಿಶೇಷ ವರ್ಗದ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಫೋಟೊ ಅಗತ್ಯವಾಗಿ ಬೇಕು. ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in/ ಮೂಲಕ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದು. ಇದು ಉಚಿತ ಸೇವೆಯಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, ಶಾಲೆ ಅಥವಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿ, ಅಧಿಸೂಚನೆ ಮತ್ತು ಇತರ ವಿವರಗಳಿಗಾಗಿ ಇಲಾಖೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ - ಕರ್ನಾಟಕ ಸರ್ಕಾರ https://dom.karnataka.gov.in/ ವೆಬ್‌ಸೈಟ್ ಗೆ ಭೇಟಿ ನೀಡಬಹುದು.
