ಧಾರವಾಡ ಡಿಸಿ ದಿವ್ಯ ಪ್ರಭುಗೆ ಕಂದಾಯ ಇಲಾಖೆಯ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ; ಮತ್ತೊಂದು ಪ್ರಶಸ್ತಿ ಯಾರಿಗೆ?
Dharwad DC Divya Prabhu: ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಕಂದಾಯ ಇಲಾಖೆಯಿಂದ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ದೊರೆತಿದೆ. ಹಾಗೂ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ ಪ್ರಶಸ್ತಿ ರಾಕೇಶ್ ತಂಗಡಗಿ ಅವರಿಗೆ ಸಿಕ್ಕಿದೆ.
ಧಾರವಾಡ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿದ ಮತ್ತು ಧಾರವಾಡ ಜಿಲ್ಲಾಧಿಕಾರಿಯಾಗಿ ಜನಸ್ನೇಹಿ ಆಡಳಿತ ನೀಡಿರುವ ದಿವ್ಯ ಪ್ರಭು ಜಿಆರ್ಜೆ ಅವರು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ 2023-24ನೇ ಸಾಲಿಗೆ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ರಾಕೇಶ್ ತಂಗಡಗಿ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ: ಧಾರವಾಡ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ರಾಕೇಶ್ ತಂಗಡಗಿ ಅವರಿಗೆ 2023-24 ನೇ ಸಾಲಿಗೆ ವರ್ಷದ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ ಪ್ರಶಸ್ತಿ ದೊರೆತಿದೆ. ಜಿಲ್ಲಾಧಿಕಾರಿ ದಿವ್ಯ ಮತ್ತು ಗ್ರಾಮ ಆಡಳಿತಾಧಿಕಾರಿ ರಾಕೇಶ್ ತಂಗಡಗಿ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಸೆಪ್ಟೆಂಬರ್ 27 ರ ಶುಕ್ರವಾರ ಅಂದರೆ ನಾಳೆ ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಬಗ್ಗೆ ಕಂದಾಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಪ್ರಶಸ್ತಿ ಪುರಸ್ಕೃತ ಜಿಲ್ಲಾಧಿಕಾರಿ ಮತ್ತು ಗ್ರಾಮ ಆಡಳಿತ ಅಧಿಕಾರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ.