ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ರಾಜ್ಯ ಮಟ್ಟದ ಪ್ರಶಸ್ತಿಗೆ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನ-dharwad news applications invited for hoysala and keladi chennamma shaurya award state level awards jra ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ರಾಜ್ಯ ಮಟ್ಟದ ಪ್ರಶಸ್ತಿಗೆ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನ

ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ರಾಜ್ಯ ಮಟ್ಟದ ಪ್ರಶಸ್ತಿಗೆ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನ

ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ; ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನ
ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ; ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಂಘ-ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ, ಬಾಲಕರಿಗೆ ಹೊಯ್ಸಳ ಶೌರ್ಯ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳು ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬೇಕಾದವರ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಕೆ ವಿಧಾನ ಕುರಿತ ಮಾಹಿತಿ ಇಲ್ಲಿದೆ. ಇದೇ ಸೆಪ್ಟೆಂಬರ್ 20ರ ಒಳಗೆ ಅರ್ಜಿ ಸಲ್ಲಿಸಬೇಕು.

ಸಂಘ-ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25000 ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತದೆ. ನವೆಂಬರ್‌ 14ರ ಮಕ್ಕಳ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳು ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದು.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ

6ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲಾಗುತ್ತದೆ. ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ತಲಾ ರೂಪಾಯಿ 10,000 ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಲಾಗುವುದು.

ಶೌರ್ಯ ಮೆರೆದ ಘಟನೆಯು 2023ರ ಅಕ್ಟೋಬರ್ 1ರಿಂದ 2024ರ ಜುಲೈ 31ರೊಳಗೆ ನಡೆದಿರಬೇಕು. 2006ರ ಆಗಸ್ಟ್ 1 ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹರು ಅರ್ಜಿ ನಮೂನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ 20ರ ಒಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447850ಗೆ ಸಂಪರ್ಕಿಸಬಹುದು.

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ 2024-25ನೆ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್‍ಸೆಟ್ (ಗರಿಷ್ಠ 10 ಎಚ್‍ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 25, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.