ಗಣೇಶ ಹಬ್ಬ-ಈದ್ ಮಿಲಾದ್ ಹಬ್ಬಕ್ಕೆ ಸಿದ್ಧತೆ ಜೋರು: ಈ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಕನ್ನಡ ಸುದ್ದಿ  /  ಕರ್ನಾಟಕ  /  ಗಣೇಶ ಹಬ್ಬ-ಈದ್ ಮಿಲಾದ್ ಹಬ್ಬಕ್ಕೆ ಸಿದ್ಧತೆ ಜೋರು: ಈ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಗಣೇಶ ಹಬ್ಬ-ಈದ್ ಮಿಲಾದ್ ಹಬ್ಬಕ್ಕೆ ಸಿದ್ಧತೆ ಜೋರು: ಈ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ,ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯಪಾನ,ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಧಾರವಾಡ: ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಈ ನಿಷೇಧ ಆಜ್ಞೆ ಇರಲಿದೆ.

ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಸೆಪ್ಟೆಂಬರ್ 10ರ ರಾತ್ರಿ 11.59 ಗಂಟೆಯಿಂದ ಸೆ.12 ರ ಬೆಳಿಗ್ಗೆ 6 ಗಂಟೆಯವರೆಗೆ ಮತ್ತು ಸೆ.12 ರ ರಾತ್ರಿ 11.59 ರಿಂದ ಸೆ.14 ರ ಬೆಳಿಗ್ಗೆ 6 ಗಂಟೆಯವರಗೆ ಹಾಗೂ ಸೆ.14 ರ ರಾತ್ರಿ 11.59 ಗಂಟೆಯಿಂದ ಸೆ. 18 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮದ್ಯದ ಅಂಗಡಿಗಳು, ಬಾರ್ ಆಂಡ್ ರೆಸ್ಟೋರೆಂಟ್, ಕ್ಲಬ್ ಇತ್ಯಾದಿಗಳನ್ನು ನಿಷೇಧಾಜ್ಞೆ ಜಾರಿಯಲ್ಲಿರುವವರೆಗೆ ಮುಚ್ಚಿಸತಕ್ಕದ್ದು ಎಂದು ಆದೇಶ ಹೊರಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ವಲಯದಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳು, ಕರ್ನಾಟಕ ಅಬಕಾರಿ ಕಾಯ್ದೆ- 1965ರ ಕಲಂ 21(2) ರ ಅನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮಕೈಗೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಧಾರವಾಡ ಅಬಕಾರಿ ಉಪ ಆಯುಕ್ತರು, ಧಾರವಾಡ ಆರಕ್ಷಕ ಅಧೀಕ್ಷಕರು ಹಾಗೂ ಧಾರವಾಡ ಜಿಲ್ಲೆಯ ಹೆಚ್ಚುವರಿ ಅಬಕಾರಿ ಅಧೀಕ್ಷಕರು ಮತ್ತು ಹುಬ್ಬಳ್ಳಿ ಅಬಕಾರಿ ಉಪ ಅಧೀಕ್ಷಕರು (ವಿಚಕ್ಷಕ ದಳ) ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶದಲ್ಲಿ ವಿವರಿಸಿದ್ದಾರೆ.

ನಾಡಿನೆಲ್ಲೆಡೆ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ

ನಾಡಿನೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಿಂದೂ ಧರ್ಮಿಯರ ಅತಿ ದೊಡ್ಡ ಹಬ್ಬವೆಂದೇ ಹೇಳಲಾಗುವ ಚೌತಿ ಹಬ್ಬವನ್ನು ಭಕ್ತರು ಸಂಭ್ರಮದಿಂದ ಬರಮಾಡಿಕೊಳ್ಳುತ್ತಿದ್ದಾರೆ. ಮನೆಗಳಲ್ಲಿ ಹಬ್ಬದ ಸಂಭ್ರಮ ಜೋರಾಗಿದೆ. ಗಣೇಶನಿಗೆ ಪ್ರಿಯವಾದ ಮೋದಕವನ್ನು ತಯಾರಿಸಿ, ಗಣೇಶನ ಪೂಜೆಗೆ ಸಕಲ ಸಿದ್ಧತೆ ಕೈಗೊಂಡಿದ್ದಾರೆ.

ಮನೆಗಳಲ್ಲಿ ಮಾತ್ರವಲ್ಲ ಸಾರ್ವಜನಿಕ ಗಣೇಶೋತ್ಸವವನ್ನೂ ಅಷ್ಟೇ ಅದ್ಧೂರಿಯಾಗಿ ಮಾಡಲು ಭಕ್ತರು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ಪೆಂಡಾಲು ನಿರ್ಮಾಣ, ದೀಪಾಲಂಕಾರ ಸೇರಿದಂತೆ ಗಣೇಶನ ಹಬ್ಬಕ್ಕೆ ಸಿದ್ಧತೆ ಜೋರಾಗಿಯೇ ಸಾಗುತ್ತಿದೆ. ಈ ನಡುವೆ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸರು ಕೂಡ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡಲು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

Whats_app_banner