ಧಾರವಾಡ: ಲೋಕೂರ ಗ್ರಾಮದಲ್ಲಿ ಯುವಕ, ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ
ಕನ್ನಡ ಸುದ್ದಿ  /  ಕರ್ನಾಟಕ  /  ಧಾರವಾಡ: ಲೋಕೂರ ಗ್ರಾಮದಲ್ಲಿ ಯುವಕ, ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ

ಧಾರವಾಡ: ಲೋಕೂರ ಗ್ರಾಮದಲ್ಲಿ ಯುವಕ, ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ

ಧಾರವಾಡ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕೂರ ಗ್ರಾಮದಲ್ಲಿ ಯುವಕ, ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ ಮಾಡಿಕೊಂಡಿರುವ ಕಳವಳಕಾರಿ ಘಟನೆ ನಡೆದಿದೆ. ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ.

ಧಾರವಾಡ: ಲೋಕೂರ ಗ್ರಾಮದಲ್ಲಿ ಯುವಕ, ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ. ಆತ್ಮಹತ್ಯೆ ತಡೆಗೆ ಸಂಬಂಧಿಸಿದ ಚಿತ್ರವನ್ನು ಸಾಂಕೇತಿಕ ಚಿತ್ರವಾಗಿ ಬಳಸಲಾಗಿದೆ.
ಧಾರವಾಡ: ಲೋಕೂರ ಗ್ರಾಮದಲ್ಲಿ ಯುವಕ, ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ. ಆತ್ಮಹತ್ಯೆ ತಡೆಗೆ ಸಂಬಂಧಿಸಿದ ಚಿತ್ರವನ್ನು ಸಾಂಕೇತಿಕ ಚಿತ್ರವಾಗಿ ಬಳಸಲಾಗಿದೆ. (Canva)

ಧಾರವಾಡ: ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ಆತ್ಮಹತ್ಯೆ ಆಲೋಚನೆ ಇರುವಂಥವರು ಸಿಕ್ಕರೆ ಅವರನ್ನು ಅಂತಹ ಆಲೋಚನೆಗಳಿಂದ ಹೊರ ತರಬೇಕಾದ್ದು ಅವಶ್ಯ ಎಂದು ವೈದ್ಯಕೀಯ ಪರಿಣತರು ಆಗ್ಗಾಗೆ ಹೇಳುತ್ತಲೇ ಇರುತ್ತಾರೆ. ಆದಾಗ್ಯೂ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕೂರ ಗ್ರಾಮದಲ್ಲಿ ಯುವಕ ಹಾಗೂ ದೇವರ ಹುಬ್ಬಳ್ಳಿ ಗ್ರಾಮದ ಮಾನಸಿಕ ಅಸ್ವಸ್ಥನೊಬ್ಬ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ನಡೆದಿದೆ.

ಲೋಕೂರ ಗ್ರಾಮದಲ್ಲಿ ಯುವಕ ಆತ್ಮಹತ್ಯೆ

ಧಾರವಾಡ: ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲೋಕೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರ್‍ಯಾವಪ್ಪ ಚನಬಸಪ್ಪ ಗಾಂಜಿಯವರ (35) ಆತ್ಮಹತ್ಯೆ ಮಾಡಿಕೊಂಡ ಯುವಕ. ಪತ್ನಿ ತವರಿಗೆ ಹೋಗಿದ್ದರಿಂದ ಮನನೊಂದಿದ್ದ ಈತನು ರವಿವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿದ್ದನು. ತೀವ್ರ ಅಸ್ವಸ್ಥನಾದ ಅವನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಉಸಿರೆಳೆದಿದ್ದಾನೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ದೇವರ ಹುಬ್ಬಳ್ಳಿ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ

ಮಾನಸಿಕವಾಗಿ ಅಸ್ವಸ್ಥನಾಗಿದ್ದ ವ್ಯಕ್ತಿಯೋರ್ವ ನೇಣು ಹಾಕಿಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಲ್ಲಪ್ಪ ನಾಗಪ್ಪ ಹಡಪದ(64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮಾನಸಿಕವಾಗಿ ಅಸ್ವಸ್ಥನಾಗಿದ್ದ ಈತನು ರವಿವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿದ್ದ ನು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ಗಮನಿಸಿ: ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ

ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಮಾನಸಿಕ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner