ಕನ್ನಡ ಸುದ್ದಿ  /  ಕರ್ನಾಟಕ  /  Bjp On Siddaramaiah: ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ್ರಾ ಸಿದ್ದರಾಮಯ್ಯ? ಮಾಜಿ ಸಿಎಂ ವಿರುದ್ಧ ಬಿಜೆಪಿ ಆಕ್ರೋಶ

BJP on Siddaramaiah: ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ್ರಾ ಸಿದ್ದರಾಮಯ್ಯ? ಮಾಜಿ ಸಿಎಂ ವಿರುದ್ಧ ಬಿಜೆಪಿ ಆಕ್ರೋಶ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿರುವುದು, ಅವರಿಗೆ ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜ ಒಡೆಯುವುದೇ ಮುಖ್ಯ ಎನ್ನುವುದನ್ನು ತೋರಿಸುತ್ತದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸರಣಿ ಟ್ವೀಟ್ ಮಾಡಿದ ಬಿಜೆಪಿ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸರಣಿ ಟ್ವೀಟ್ ಮಾಡಿದ ಬಿಜೆಪಿ

ಬೆಂಗಳೂರು: ಸಂವಿಧಾನ ದಿನಾಚರಣೆಯಂದೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ವಂದೇ ಮಾತರಂ ಹಾಡಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿರುವ ವಿಡಿಯೋವನ್ನು ಕೆಲ ಮಾಧ್ಯಮಗಳು ಬಿತ್ತರಿಸಿವೆ. ಇದೇ ವಿಚಾರವನ್ನು ಮುಂದಿಟ್ಟಿರುವ ರಾಜ್ಯ ಬಿಜೆಪಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಟ್ರೆಂಡಿಂಗ್​ ಸುದ್ದಿ

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿರುವುದು, ಅವರಿಗೆ ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜ ಒಡೆಯುವುದೇ ಮುಖ್ಯ ಎನ್ನುವುದನ್ನು ತೋರಿಸುತ್ತದೆ ಎಂದಿದೆ.

ಮತ್ತೊಂದು ಟ್ವೀಟ್ ನಲ್ಲಿ, ಈ ದೇಶದಲ್ಲಿ ಎಲ್ಲ ಧರ್ಮೀಯರು ಮುಕ್ತ ಮನಸಿನಿಂದ ಒಪ್ಪಿಕೊಂಡಿರುವ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವುದು ಅವರ ಜಿಹಾದಿ ಮನಸ್ಥಿತಿ ತೋರಿಸುತ್ತದೆ. ಬ್ರಿಟಿಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದರು, ಈಗ ಅದೇ ಸಾಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ ಎಂದು ಕಿಡಿಕಾರಿದೆ.

ಮಾನ್ಯ ಸಿದ್ದರಾಮಯ್ಯ ಅವರು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು ಎಂದು ಭಾರತೀಯ ಜನತಾ ಪಾರ್ಟಿ ಆಗ್ರಹಿಸಿದೆ.

ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ಮೊದಲು ವಂದೇ ಮಾತರಂ ಎಂದಿದ್ದಾರೆ.

ತಕ್ಷಣ ಸಿದ್ದರಾಮಯ್ಯ ವಂದೇ ಮಾತರಂ ಬೇಡ ಎಂದಿದ್ದಾರಂತೆ. ತಾವಾಡಿದ ಮಾತು ವಿವಾದಕ್ಕೆ ಕಾರಣವಾಗಬಹುದು ಎಂಬುದನ್ನು ಅರಿತ ಸಿದ್ದರಾಮಯ್ಯ ಕೆಲ ಹೊತ್ತಿನ ಬಳಿಕ ಹಾಡೋದಾದ್ರೆ ವಂದೇ ಮಾತರಂ ಹಾಡ್ರಪ್ಪ ಎಂದಿದ್ದರಂತೆ.

IPL_Entry_Point