ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ; ಸಿದ್ದರಾಮಯ್ಯ ಸಹಮತ
ಕನ್ನಡ ಸುದ್ದಿ  /  ಕರ್ನಾಟಕ  /  ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ; ಸಿದ್ದರಾಮಯ್ಯ ಸಹಮತ

ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ; ಸಿದ್ದರಾಮಯ್ಯ ಸಹಮತ

ರೇಷ್ಮೆನಾಡು ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಕೆ ಶಿವಕುಮಾರ್‌ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ. ಇದಕ್ಕೆ ಮುಖ್ಯಮಂತ್ರಿ ಕೂಡಾ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆಶಿ ತಿಳಿಸಿದ್ದಾರೆ.

ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ
ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಿಎಂಗೆ ಮನವಿ (X)

ಶೀಘ್ರದಲ್ಲೇ ರೇಷ್ಮೆನಾಡು ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South district)ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜುಲೈ 9ರ ಮಂಗಳವಾರ ಶಿವಕುಮಾರ್ ನೇತೃತ್ವದಲ್ಲಿ ರಾಮನಗರ ಜಿಲ್ಲೆಯ ಶಾಸಕರ ನಿಯೋಗ ಸಿಎಂಗೆ ಪ್ರಸ್ತಾವನೆ ಸಲ್ಲಿಸಿದೆ.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಮಾಜಿ ಸಂಸದ ಡಿಕೆ ಸುರೇಶ್‌ ಹಾಗೂ ಹಾಗೂ ಶಾಸಕ ಇಕ್ಬಾಲ್‌ ಹುಸೇನ್‌ ಸೇರಿದಂತೆ ಶಾಸಕರ ನಿಯೋಗವು ವಿಧಾನಸೌಧದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾದರು. ಈ ವೇಳೆ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South district) ಮಾಡಬೇಕೆಂಬ ಮನವಿಯನ್ನು ಸಲ್ಲಿಸಿ. ಈ ಮನವಿಗೆ ಸಿಎಂ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.

ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲಿಯೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ರೂಪಿಸಲಾಯ್ತು. ರೇಷ್ಮೆಗೆ ಹೆಸರುವಾಸಿಯಾಗಿರುವ ಜಿಲ್ಲೆಯು ರಾಮನಗರವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಈಗ ರಾಮನಗರ ಎಂಬ ಬದಲಿಗೆ ಅದನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ.‌

ಡಿಕೆ ಶಿವಕುಮಾರ್‌ ಟ್ವೀಟ್

ಈ ವಿಚಾರವಾಗಿ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ. ಚರ್ಚೆಯ ಬಳಿಕ ಹೆಸರು ಬದಲಾವಣೆ ಆಗಲಿದೆ. ಮುಂದೆಯೂ ಜಿಲ್ಲೆಗೆ ರಾಮನಗರವೇ ಜಿಲ್ಲಾ ಕೇಂದ್ರವಾಗಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಬೆಂಗಳೂರು ದಕ್ಷಿಣ ಜಿಲ್ಲೆ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕಾರಣವಿಲ್ಲದೆ ಹೆಸರು ಬದಲಾವಣೆಗೆ ಹೊರಟಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Whats_app_banner