ಕನ್ನಡ ಸುದ್ದಿ  /  Karnataka  /  Double Engine Double Speed Development In Karnataka We Will Win 150 Seats In The State And Come Back To Power Says Arun Singh

Arun Singh on Assembly Elections 2023: ಡಬಲ್‌ ಎಂಜಿನ್‌, ಡಬಲ್‌ ವೇಗದ ಅಭಿವೃದ್ಧಿ; 150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ

ಡಬಲ್‌ ಎಂಜಿನ್‌, ಡಬಲ್‌ ವೇಗದ ಅಭಿವೃದ್ಧಿ ಬಗ್ಗೆ ರಾಜ್ಯದ ಜನತೆಗೆ ನಂಬಿಕೆ ಇದೆ. 150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಗೆಲುವಿನ ಲೆಕ್ಕಾಚಾರಗಳು ಆರಂಭವಾಗಿವೆ. ರಾಜ್ಯ ಕಾಂಗ್ರೆಸ್ ನಾಯಕರು ತಾವು 130ಕ್ಕೂ ಅಧಿಕ ಸ್ಥಾನ ಗೆಲ್ತೇವೆ ಎಂದು ಹೇಳುತ್ತಿದ್ದಾರೆ. ಇತ್ತ ಬಿಜೆಪಿ ನಾಯಕರೂ ಕೂಡ 130 ಕ್ಷೇತ್ರಗಳಲ್ಲಿ ಜಯ ಪಡೆಯಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಇನ್ನ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇವತ್ತು ಒಂದು ಹೆಜ್ಜೆ ಮುಂದೆ ಹೋಗಿ 150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಮಾತುಗಳನ್ನಾಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ವಿಜಯ ಸಂಕಲ್ಪ ಅಭಿಯಾನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದ ಜನತೆಗೆ ಡಬಲ್‌ ಎಂಜಿನ್‌ ಸರ್ಕಾರದ ಅಗತ್ಯತೆ ಮತ್ತು ಅಭಿವೃದ್ಧಿ ಕೆಲಸಗಳ ವೇಗದ ಬಗ್ಗೆ ನಂಬಿಕೆ ಇದೆ. ಪ್ರಧಾನಿ ನರೇಂದ್ರ ಮೋದಿ ನಾಯತಕತ್ವ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ, ಸಮಯ ವ್ಯರ್ಥ ಮಾಡಿದ್ದೇ ಕಾಂಗ್ರೆಸ್ ಸಾಧನೆ

ಅಧಿಕಾರಕಾರದಲ್ಲಿದ್ದಾಗ ಕಾಂಗ್ರೆಸ್‌ ಭ್ರಷ್ಟಾಚಾರ, ಸಮಯ ವ್ಯರ್ಥ ಮಾಡಿದ್ದೇ ಸಾಧನೆ. ಕೇವಲ ಚಿಕ್ಕಬಳ್ಳಾಪುರ ಒಂದು ಜಿಲ್ಲೆಗೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಅನ್ನುವ ಬಗ್ಗೆ ಮಾತನಾಡಲಿ. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಈ ಒಂದು ಜಿಲ್ಲೆಯಲ್ಲೇ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. 3,124 ಜನಕ್ಕೆ ಪಿಎಂ ಆವಾಸ್‌ ಯೋಜನೆ ಅಡಿ ಮನೆಗಳು ಸಿಕ್ಕಿವೆ. ಪಿಎಂ ಕಿಸಾನ್‌ ಯೋಜನೆಯಡಿ 1 ಲಕ್ಷ 19 ಸಾವಿರಕ್ಕೂ ಅಧಿಕ ಜನರ ಅವರ ಅಕೌಂಟ್‌ಗೆ ಪ್ರತಿ ವರ್ಷ 10 ಸಾವಿರ ರೂ. ನೇರ ಪಾವತಿಯಾಗುತ್ತಿದೆ. ಪಿಎಂ ಮಾತೃತ್ವ ಬಂಧನ ಯೋಜನೆಯ ಲಾಭ 72,000 ಜನರಿಗೆ ಸಿಗುತ್ತಿದೆ. ಈ ಜಿಲ್ಲೆಯ 52,160 ಹಿರಿಯರಿಗೆ ಮಾಶಾಸನ ಸಿಗುತ್ತಿದೆ ಎಂದರು.

ಸಿದ್ದು ಅಧಿಕಾರ ಮಾಡುತ್ತಿದ್ದಾಗ ಮತ್ತು ಯುಪಿಎ ಅಧಿಕಾರದಲ್ಲಿದ್ದಾಗ ಜನರಿಗೆ ಕುಡಿಯಲು ನೀರು ಕೂಡ ಕೊಡುತ್ತಿರಲಿಲ್ಲ. ಆದರೆ ಜಲಜೀವನ್‌ ಮಿಷನ್‌ ಯೋಜನೆ ಮೂಲಕ ಚಿಕ್ಕಬಳ್ಳಾಪುರದಲ್ಲಿ 54,866 ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳೀಯ ಶಾಸಕ ಸುಧಾಕರ್‌ ಈ ಎಲ್ಲಾ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಶ್ರಮಿಸಿದ್ದಾರೆ.

ಮೆಡಿಕಲ್‌ ಕಾಲೇಜು ಹಿಂದೆ ಆಡಳಿತ ಮಾಡಿದ ಸರ್ಕಾರಳು ಈ ಜಿಲ್ಲೆಗೆ ಕೊಟ್ಟಿರಲಿಲ್ಲ. ಆದರೆ ಶಾಸಕ ಸುಧಾಕರ್‌ ಅವರು ಸತತ ಪ್ರಯತ್ನ ಮಾಡಿ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮೂಲಕ ಇಲ್ಲಿಗೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿಸಿದ್ದರು. ಅದರ ಕಟ್ಟಡ ಕೂಡ ಸಿದ್ಧವಾಗಿದೆ. ಕೆಲವೇ ದಿನಗಳಲ್ಲಿ ಇದರ ಉದ್ಘಾಟನೆಯೂ ನಡೆಯುಲಿದೆ. ಉಜ್ವಲಾ ಯೋಜನೆಯಡಿ ಗ್ಯಾಸ್‌ ಕನೆಕ್ಷನ್‌ ನೀಡಲಾಗಿದೆ. ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸುವ ಯೋಜನೆಯಡಿ ಈ ಒಂದು ಜಿಲ್ಲೆಯಲ್ಲಿ 6,314ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್‌ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಬಳಿ ನಾಯಕರೂ ಇಲ್ಲ, ಕೆಲಸವೂ ಇಲ್ಲ

ಕೋವಿಡ್‌ ಸಮಯದಲ್ಲಿ ಉಚಿತ ಪಡಿತರ ವಿತರಿಸಿ ಬಡವರ ಸಂಕಷ್ಟದ ಕಾಲದಲ್ಲಿ ಸರ್ಕಾರ ಮಿಡಿದಿದೆ. ರಾಜ್ಯ ಸರ್ಕಾರ ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಪ್‌ ನೀಡುತ್ತಿದೆ. ಸಿದ್ದರಾಮಯ್ಯ ಅವರೇ ಇದು ನಮ್ಮ ಸರ್ಕಾರದ ಸಾಧನೆ. ನಮ್ಮಲ್ಲಿ ನಾಯಕರು ಇದ್ದಾರೆ. ಹೇಳಿ ಕೊಳ್ಳಲು ನಾವು ಮಾಡಿದ ಕೆಲಸವಿದೆ. ಕಾರ್ಯಕರ್ತರ ಸೈನ್ಯವಿದೆ. ಈ ಮೂಲಕ 150 ಸೀಟುಗಳನ್ನು ಗೆಲ್ಲುವುದು ಖಚಿತ. ಕಾಂಗ್ರೆಸ್‌ ಬಳಿ ನಾಯಕರೂ ಇಲ್ಲ. ಕೆಲಸವೂ ಇಲ್ಲ. ಹೀಗಾಗಿ ರಾಜ್ಯದಲ್ಲಿ ಅವರು ಗೆಲ್ಲುವುದು ಇಲ್ಲ ಎಂದು ಭವಿಷ್ಯ ನುಡಿದರು.

ಪಿಎಫ್‌ಐ ನೆಟ್ ವರ್ಕ್ ಬೆಳೆಸಿದ್ದು ದೊಡ್ಡ ಸಾಧನೆ

ರಾಜ್ಯದಲ್ಲಿ ಚುನಾವಣೆಯ ಬಳಿಕ ಕಾಂಗ್ರೆಸ್‌ 130-140 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸು. ಯಾಕೆಂದರೆ ಅವರು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಅನ್ನುವ ಬಗ್ಗೆ ಜನರಿಗೆ ಅರಿವಿದೆ. ಕಾಂಗ್ರೆಸ್‌ ಆಡಳಿತದ ಸಮಯದಲ್ಲಿ ಪಿಎಫ್‌ಐ ನೆಟ್ ವರ್ಕ್ ಬೆಳೆಸಿದ್ದು ದೊಡ್ಡ ಸಾಧನೆ . 32 ಹಿಂದೂಗಳನ್ನು ಕೊಲೆ ಮಾಡಲಾಗಿತ್ತು. ಹಲವು ಭ್ರಷ್ಟಾಚಾರಗಳನ್ನು ಮಾಡಿದ್ದೇ ದೊಡ್ಡ ಸಾಧನೆ ಎಂದು ಕಿಡಿಕಾರಿದರು.