ಕನ್ನಡ ಸುದ್ದಿ  /  Karnataka  /  Earthquake: Dakshina Kannada Kodagu Earthquake Study, Measures To Prevent Landslides Coastal Erosion

Earthquake: ದ.ಕ. , ಕೊಡಗು ಭೂಕಂಪ ಅಧ್ಯಯನಕ್ಕೆ ಸೂಚನೆ, ಭೂಕುಸಿತ, ಕಡಲ್ಕೊರೆತ ತಡೆಗೆ ಕ್ರಮ

ದಕ್ಷಿಣ ಕನ್ನಡ, ಕೊಡಗು ಭಾಗದಲ್ಲಿನ ಭೂಕಂಪದ ಅಧ್ಯಯನಕ್ಕೆ ಸೂಚನೆ ನೀಡಲಾಗಿದೆ. ಶೀಘ್ರವೇ ಅಂತಿಮ ವರದಿ ಸಲ್ಲಿಕೆ ಮಾಡುವಂತೆಯೂ ಹೇಳಲಾಗಿದೆ. ಅದೇ ರೀತಿ, ಕಡಲ್‌ ಕೊರೆತ, ಭೂಕುಸಿತ ತಡೆಗೆ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಇಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಮರವಂತೆ ಕಡಲ ಕಿನಾರೆಗೆ ಭೇಟಿ ನೀಡಿ ಕಡಲು ಕೊರೆತದ ಸ್ಥಳ ಪರಿಶೀಲನೆ ನಡೆಸಿದರು. ಈ ಕುರಿತು ಸ್ಥಳೀಯ ನಿವಾಸಿಗಳು ಹಾಗೂ ಮೀನುಗಾರರ ಜೊತೆ ಸಮಾಲೋಚನೆ ನಡೆಸಿ ಅವರಿಂದ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಘುಪತಿ ಭಟ್, ಸುಕುಮಾರ ಶೆಟ್ಟಿ ಮತ್ತು ಇತರರು ಉಪಸ್ಥಿರಿದ್ದರು.

ಉಡುಪಿ: ಕೊಡಗು ಹಾಗೂ ಕರಾವಳಿಯಲ್ಲಿ ವಿಶೇಷ ಸಮಸ್ಯೆಗಳಿವೆ. ಭೂಕಂಪನ ದ ಅಧ್ಯಯನ ಮಾಡಲು ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ, ಬೆಂಗಳೂರು ಮೈಸೂರು ವಿವಿ ಇಂದ ಸುದೀರ್ಘ ಅಧ್ಯಯನ ಮಾಡಿ, ಪರಿಹಾರ ಸೂಚಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪರಿಹಾರವಾಗಿ ರೆಟ್ರೋ ಫಿಟ್ಟಿಂಗ್ ಮಾಡಲು ಸಲಹೆ ನೀಡಿದ್ದಾರೆ. ಅದರ ಅಂತಿಮ ವರದಿ ನೀಡಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದರು.

ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಮೃತ ವಿವಿ ಯವರು ಕೊಡಗು ಭಾಗದಲ್ಲಿ ಕೆಲಸ ಪ್ರಾರಂಭಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಪಶ್ಚಿಮ ಘಟ್ಟಗಳಲ್ಲಿಯೂ ಅಧ್ಯಯನ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ವರದಿಯಲ್ಲಿ ಹೇಳಿರುವ ಪರಿಹಾರಗಳ ಅನುಷ್ಠಾನಕ್ಕೆ ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದರು.

ಕಡಲ ಕೊರೆತ ತಡೆಗೆ ಕ್ರಮ

ಹಲವಾರು ವರ್ಷಗಳಿಂದ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರೂ, ಕಡಲ ಕೊರೆತ ನಿಂತಿಲ್ಲ. ಎಡಿಬಿ ಯೋಜನೆಯಡಿ 300 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. 330 ಕಿಮೀ ಕಡಲ ತೀರದುದ್ದಕ್ಕೂ ಮಾಡಬೇಕಾದರೆ ಎಡಿಬಿ ಕೆಲಸದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ ವೇವ್ ಬ್ರೇಕರ್ ಎಂಬ ಹೊಸ ತಂತ್ರಜ್ಞಾನವನ್ನು ಬಳಕೆ ಮಾಡುವ ಸಲುವಾಗಿ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮಂಗಳೂರಿನ ಉಳ್ಳಾ ಲ ಭಾಗದಲ್ಲಿ ಪ್ರಾಯೋಗಿಕವಾಗಿ ಕೈಗೊಳ್ಳಲಾಗುವುದು. ಅದು ಯಶಸ್ವಿಯಾದರೆ ಇಡೀ ಕರಾವಳಿ ಭಾಗದಲ್ಲಿ ಅನುಷ್ಠಾನಕ್ಕೆ ತರುವ ಚಿಂತನೆ ನಮ್ಮದು.

ಉನ್ನತ ಮಟ್ಟದ ಶಾಶ್ವತ ಸಮಿತಿ ರಚಿಸಲಾಗುವುದು. ಸಂಪೂರ್ಣ ಕರಾವಳಿಯ ಡಿಪಿಆರ್ ಸಿದ್ಧಪಡಿಸಿ ಬಾಹ್ಯ ಏಜೆನ್ಸಿಯ ಹಣಕಾಸಿನ ನೆರವಿನಿಂದ ಕೈಗೊಳ್ಳುವ ತೀರ್ಮಾನ ಮಾಡಲಾಗುವುದು. ಡಿಪಿಆರ್ ಗೆ ಅಗತ್ಯ ವಿರುವ ಅನುದಾನ ಕೂಡಲೇ ಬಿಡುಗಡೆ ಮಾಡಲಾಗುವುದು. ಅದರ ವಿಸ್ತೃತ ಅಧ್ಯಯನ ವಾದ ನಂತರ ಹಣಕಾಸಿನ ವ್ಯವಸ್ಥೆಗೆ ತೀರ್ಮಾನ ಮಾಡಲಾಗುವುದು.

ಕಡಲ ಕೊರೆತ ತಕ್ಷಣ ನಿಲ್ಲಿಸಲು ಜಿಲ್ಲಾಡಳಿತಕ್ಕೆ ಕೂಡಲೇ ಮೂರು ಜಿಲ್ಲೆಗಳಿಗೆ ಹಣವನ್ನು ಎಸ್ ಡಿ ಆರ್ ಎಫ್ ಅಡಿ ಒದಗಿಸಲಾಗುವುದು. ತಾತ್ಕಾಲಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದು ಎಂದರು. ಶಾಶ್ವತ ಪರಿಹಾರಕ್ಕೆ 2-3 ತಿಂಗಳಲ್ಲಿ ಯೋಜನೆ ರೂಪಿಸಲಾಗುವುದು.

ಪ್ರತಿ ವರ್ಷ ಆಗುವ ಕಡಲ ಕೊರೆತ ತಡೆಯಲು ಜಿಲ್ಲಾಧಿಕಾರಿಗಳ ಹಂತದಲ್ಲಿ ಕೆಲವು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಬೇಕು ಎಂದು ಸೂಚನೆ ನೀಡಿದೆ. ವಿಶೇಷ ಅನುದಾನವನ್ನು ಇದಕ್ಕಾಗಿ ಒದಗಿಸಲಾಗುವುದು. ಸಣ್ಣ ಪ್ರಮಾಣದ ಕೆಲಸಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗುವುದು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಮರವಂತೆ ಕಡಲ ಕಿನಾರೆಗೆ ಭೇಟಿ ನೀಡಿ ಕಡಲು ಕೊರೆತದ ಸ್ಥಳ ಪರಿಶೀಲನೆ ನಡೆಸಿದರು. ಈ ಕುರಿತು ಸ್ಥಳೀಯ ನಿವಾಸಿಗಳು ಹಾಗೂ ಮೀನುಗಾರರ ಜೊತೆ ಸಮಾಲೋಚನೆ ನಡೆಸಿ ಅವರಿಂದ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಘುಪತಿ ಭಟ್, ಸುಕುಮಾರ ಶೆಟ್ಟಿ ಮತ್ತು ಇತರರು ಉಪಸ್ಥಿರಿದ್ದರು.

ಉತ್ತರ ಕರ್ನಾಟಕ ಪ್ರವಾಸ ಮುಂದಿನ ವಾರ

ಮುಂದಿನ ವಾರದಲ್ಲಿ ಕಾರವಾರ, ಬೆಳಗಾವಿ, ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಪ್ರವಾಸ ಮಾಡಲಿದ್ದು ಅಲ್ಲಿಯೂ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿ, ದೀರ್ಘಕಾಲದ ಮತ್ತು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.

IPL_Entry_Point