Employment News: ಪ್ರವಾಸೋದ್ಯಮ ವಲಯದಲ್ಲಿ ಉದ್ಯೊಗಾವಕಾಶ; ಕೊಡಗಿನ ಕುಶಾಲನಗರದಲ್ಲಿ ನಾಳೆ ಉದ್ಯೋಗ ಮೇಳ
Employment News: ಕೊಡಗಿನ ಪ್ರಮುಖ ವಹಿವಾಟು ಕೇಂದ್ರವಾಗಿರುವ ಕುಶಾಲನಗರ ಪಟ್ಟಣದಲ್ಲಿ ಏಪ್ರಿಲ್ 16ರ ಬುಧವಾರ ಉದ್ಯೊಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

Employment News: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025ರ ಏಪ್ರಿಲ್ 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಆಟೋ ಲೈವ್, ಕಾಡಕೊಳ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಕೂರ್ಗ್ ಜಂಗಲ್ ಕ್ಯಾಂಪ್ ರೆಸಾರ್ಟ್, ಕುಶಾಲನಗರ, ಮುತ್ತೂಟ್ ಪೈನಾನ್ಸ್, ಮೈಸೂರು, ಕಾವೇರಿ ಹೊಂಡಾ, ಕುಶಾಲನಗರ, ಪ್ಯಾಲೇಸ್ ಟಯೋಟ ಕಾರ್ ಶೋ ರೂಂ, ಕುಶಾಲನಗರ ಹಾಗೂ ಪರ್ಪಲ್ ಪಾಮ್ಸ್ ರೆಸಾರ್ಟ್, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು.
ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್-8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ಕೊಡಗಿನಲ್ಲಿ ಪರಿಸರ ಪ್ರವಾಸೋದ್ಯಮ ಸಾಕಷ್ಟು ಬೆಳೆದಿದೆ. ಹೋಂ ಸ್ಟೇ, ರೆಸಾರ್ಟ್, ಚಾರಣ, ಆನೆ ಶಿಬಿರ ಸಹಿತ ಹಲವು ಪ್ರವಾಸಿ ಚಟುವಟಿಕೆಗಳಿಗೆ. ಇಲ್ಲಿ ಉದ್ಯೋಗವೂ ಸೃಷ್ಟಿಯಾಗುತ್ತಿದೆ. ಪರಿಸರ ಪ್ರವಾಸೋದ್ಯಮ ವಲಯದ ಉದ್ಯೋಗ ದಾತರೂ ಮೇಳಕ್ಕೆ ಬರಲಿದ್ದಾರೆ. ಇದಲ್ಲದೇ ಇತರೆ ವಲಯದಲ್ಲೂ ಉದ್ಯೋಗಕ್ಕೆ ಅವಕಾಶವಿದೆ. ಕುಶಾನಗರ ಪಟ್ಟಣವು ಮೈಸೂರು, ಹಾಸನ ಜಿಲ್ಲೆಯ ಹಲವು ತಾಲ್ಲೂಕುಗಳೊಂದಿಗೆ ವಹಿವಾಟು ಸಂಪರ್ಕ ಇರುವ ಪ್ರಮುಖ ಕೇಂದ್ರ. ಇಲ್ಲಿನ ಉದ್ಯೋಗ ಮೇಳಕ್ಕೆ ಕೊಡಗು, ಹಾಸನ, ಮೈಸೂರು ಜಿಲ್ಲೆಯವರೂ ಭಾಗಿಯಾಗಬಹುದು.
