ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025; ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಎಐ ಕ್ಯಾಮೆರಾ ಕಣ್ಗಾವಲು
ಕನ್ನಡ ಸುದ್ದಿ  /  ಕರ್ನಾಟಕ  /  ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025; ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಎಐ ಕ್ಯಾಮೆರಾ ಕಣ್ಗಾವಲು

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025; ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಎಐ ಕ್ಯಾಮೆರಾ ಕಣ್ಗಾವಲು

SSLC exams: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಯಲು ಈ ವರ್ಷದಿಂದಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ತಂತ್ರಜ್ಞಾನ ಆಧಾರಿತ ಸಿಸಿಕ್ಯಾಮರಾಗಳನ್ನು ಅಳವಡಿಸಲು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಮುಂದಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025; ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಎಐ ಕ್ಯಾಮೆರಾ ಕಣ್ಗಾವಲು ಇರಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025; ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಎಐ ಕ್ಯಾಮೆರಾ ಕಣ್ಗಾವಲು ಇರಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. (Mint)

ಬೆಂಗಳೂರು: ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ನಕಲು ಹಾಗೂ ಅಕ್ರಮ ತಡೆಯಲು ಈ ವರ್ಷದಿಂದಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ತಂತ್ರಜ್ಞಾನ ಆಧಾರಿತ ಸಿಸಿಕ್ಯಾಮರಾಗಳನ್ನು ಅಳವಡಿಸಲು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಮುಂದಾಗಿದೆ. ಕಳೆದ ವರ್ಷ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ ಕಾಸ್ಟಿಂಗ್ ವ್ಯವಸ್ಥೆ ಪರಿಚಯಿಸಿದ್ದ ಇಲಾಖೆ ಈ ಬಾರಿ ಮತ್ತೊಂದು ಹೆಜ್ಜೆಯನ್ನು ಮುಂದಿಟ್ಟು ರಾಜ್ಯಾದ್ಯಂತ ಸೂಕ್ಷ್ಮ ಹಾಗೂ ಅತೀಸೂಕ್ಷ್ಮ ಎಂದು ಗುರುತಿಸಲಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಅಳವಡಿಸಿರುವ ಸಿಸಿ ಕ್ಯಾಮೆರಾ ಅಳವಡಿಸಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ; ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಎಐ ಕ್ಯಾಮೆರಾ ಕಣ್ಗಾವಲು

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಕರ್ನಾಟಕದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಅಳವಡಿಸುವುದಿಲ್ಲ. ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಗುರುತಿಸಿದ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಹಾಗೂ ಬೆಂಗಳೂರು ನಗರದ ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಸಿಸಿಟಿವಿಗಳನ್ನು ಅಳವಡಿಸಲು ನಿರ್ಧರಿಸಿದೆ. ಪೈಲೆಟ್ ಪ್ರಾಜೆಕ್ಟ್ ಯೋಜನೆ ಪ್ರಕಾರ, ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಸಿಸಿಟಿವಿಗಳನ್ನು ಅಳವಡಿಸಲು ಯೋಜನೆ ರೂಪಿಸಿದೆ. ಇದಕ್ಕಾಗಿ ಮೈಕ್ರೋಸಾಫ್ಟ್ ಕಂಪನಿ ಜತೆ ಒಪ್ಪಂದ ಮಾಡಿಕೊಂಡಿದೆ. ಮೈಕ್ರೋ ಸಾಫ್ಟ್ ಕಂಪನಿ ಇದಕ್ಕಾಗಿ ಹೊಂದಾಣಿಕೆಯಾಗುವ ತಂತ್ರಾಂಶವನ್ನು ತಯಾರಿಸಿಕೊಡಲಿದೆ. ಈ ತಂತ್ರಾಂಶವನ್ನು ಬಳಸಿಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಅಕ್ರಮ ಹಾಗೂ ನಕಲನ್ನು ಪರಿಣಾಮಕಾರಿಯಾಗಿ ತಡೆಯಬಹುದು ಎಂದು ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ನಿರ್ದೇಶಕ ಎಚ್‌. ಎನ್.ಗೋಪಾಲಕೃಷ್ಣ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025ರ ವೇಳಾಪಟ್ಟಿ

ಮಾರ್ಚ್ 21, 2025 (ಶುಕ್ರವಾರ): ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ (NCERT), ಸಂಸ್ಕೃತ (ಪ್ರಥಮ ಭಾಷೆ)

ಮಾರ್ಚ್ 24, 2025 (ಸೋಮವಾರ): ಗಣಿತ, ಸಮಾಜಶಾಸ್ತ್ರ

ಮಾರ್ಚ್ 26, 2025 (ಬುಧವಾರ): ಇಂಗ್ಲೀಷ್, ಕನ್ನಡ (ದ್ವಿತೀಯ ಭಾಷೆ).

ಮಾರ್ಚ್ 29, 2025 (ಶನಿವಾರ): ಸಮಾಜ ವಿಜ್ಞಾನ

ಏಪ್ರಿಲ್ 01, 2025 (ಮಂಗಳವಾರ): ಎಲಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್​-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಪ್ರೋಗ್ರಾಮಿಂಗ್ ಇನ್ ANSI ‘C’, ಅರ್ಥಶಾಸ್ತ್ರ

ಏಪ್ರಿಲ್ 02, 2025 (ಬುಧವಾರ): ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.

ಏಪ್ರಿಲ್ 04, 2025 (ಶುಕ್ರವಾರ): ಹಿಂದಿ (NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (ತೃತೀಯ ಭಾಷೆ)

ಏಪ್ರಿಲ್ 04, 2025 (ಶುಕ್ರವಾರ): ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್​ನೆಸ್​, ಅಪರೆಲ್ ಮೇಡ್ ಅಪ್ಸ್ & ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ & ಹಾರ್ಡ್​​ವೇರ್ (NSQF ವಿಷಯಗಳು)

ಎಐ ಸಿಸಿ ಕ್ಯಾಮೆರಾ ನಿರ್ವಹಣೆಗೆ ಸಿಬ್ಬಂದಿ ನೇಮಕ

ಕರ್ನಾಟಕ 10ನೇ ತರಗತಿ ಪರೀಕ್ಷೆಗಳನ್ನು ಸುಸೂತ್ರವಾಗಿ ಅಕ್ರಮ ಮುಕ್ತವಾಗಿ ನಡೆಸಲು ರಾಜ್ಯ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಪ್ರಯತ್ನಿಸುತ್ತಿದೆ. ಇದಕ್ಕೆ ಪೂರಕವಾಗಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ ಸಿಸಿ ಕ್ಯಾಮರಾಗಳನ್ನು ನಿರ್ವಹಣೆ ಮಾಡಲು ಮಂಡಳಿ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದೆ. ಇದನ್ನು ನಿರ್ವಹಣೆ ಮಾಡಲು ಅಧಿಕ ಸಿಬ್ಬಂದಿ ಅಗತ್ಯವಾಗಿದೆ. ಹೀಗಾಗಿ ಹೆಚ್ಚು ವೆಚ್ಚವಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳನ್ನು ಕೇಂದ್ರದ ಒಂದು ಕೊಠಡಿಯ ಕಂಪ್ಯೂಟರ್‌ಗೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಕಂಪ್ಯೂಟರ್ ಪರದೆಯಲ್ಲಿ ಎಲ್ಲ ಕೊಠಡಿಗಳ ಉತ್ತಮ ಗುಣಮಟ್ಟದ ವಿಡಿಯೋ ಬಿತ್ತರವಾಗುತ್ತದೆ. ಇದನ್ನು ಸಿಬ್ಬಂದಿಗಳು ವೀಕ್ಷಣೆ ಮಾಡುತ್ತಿರುತ್ತಾರೆ. ಇದರಿಂದ ನಕಲು ಹಾಗೂ ಅಕ್ರಮ ನಡೆಯಲು ಸಾಧ್ಯವಿಲ್ಲ ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

Whats_app_banner