Education Guide: ಕರ್ನಾಟಕದಲ್ಲಿರುವ ಪ್ರಮುಖ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಯಾವುವು? ಇಲ್ಲಿದೆ ಪಟ್ಟಿ
Top government engineering colleges: ಸಿಇಟಿ ಪರೀಕ್ಷೆಗಳೆಲ್ಲ ಮುಗಿದ ಬಳಿಕ ದೇಶಾದ್ಯಂತ ವಿದ್ಯಾರ್ಥಿಗಳು ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜುಗಳಿಗಾಗಿ ಹುಡುಕಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಯಾವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದಬಹುದು? ಯಾವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಿವೆ ಎಂದು ಹುಡುಕುವವರಿಗೆ ಇಲ್ಲಿ ಕಾಲೇಜುಗಳ ಪಟ್ಟಿ ನೀಡಲಾಗಿದೆ.
ಸಿಇಟಿ ಪರೀಕ್ಷೆಗಳೆಲ್ಲ ಮುಗಿದ ಬಳಿಕ ದೇಶಾದ್ಯಂತ ವಿದ್ಯಾರ್ಥಿಗಳು ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜುಗಳಿಗಾಗಿ ಹುಡುಕಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಯಾವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದಬಹುದು? ಯಾವುದು ಬೆಸ್ಟ್? ಎಲ್ಲಿ ಫೀಸ್ ಕಡಿಮೆ ಎಂದೆಲ್ಲ ವಿದ್ಯಾರ್ಥಿಗಳು ಹುಡುಕುತ್ತಿದ್ದಾರೆ. ಸಾಕಷ್ಟು ವಿದ್ಯಾರ್ಥಿಗಳಿಗೆ ಖಾಸಗಿ ಎಂಜಿನಿಯರಿಂಗ್ ಕಾಲೇಜಿಗಳಲ್ಲಿ ಓದುವ ಶಕ್ತಿ ಇರುವುದಿಲ್ಲ. ಇಂತಹ ಸಮಯದಲ್ಲಿ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುವುದು ಉತ್ತಮ ಎಂದು ಸಾಕಷ್ಟು ವಿದ್ಯಾರ್ಥಿಗಳು ಅತ್ಯುತ್ತಮವಾದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕದಲ್ಲಿ ಹತ್ತು ಹಲವು ಪ್ರಮುಖ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಿವೆ. ಖಾಸಗಿ ಕಾಲೇಜುಗಳಿಗಿಂತ ಉತ್ತಮವಾಗಿ ಶಿಕ್ಷಣ ನೀಡುವ ಸರಕಾರಿ ಕಾಲೇಜುಗಳಿವೆ. ಕರ್ನಾಟಕದಲ್ಲಿರುವ ಕೆಲವು ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಕುರಿತು ಸಾಕಷ್ಟು ಜನರಿಗೆ ಮಾಹಿತಿ ಇಲ್ಲದೆಯೂ ಇರಬಹುದು. ಎನ್‌ಐಟಿ ಸೇರಿದಂತೆ ಹಲವು ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳು ಕರ್ನಾಟಕದಲ್ಲಿವೆ. ಹೀಗಾಗಿ, ಇಲ್ಲಿ ಕರ್ನಾಟಕದಲ್ಲಿರುವ ಪ್ರಮುಖ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಲಿಸ್ಟ್ ನೀಡಲಾಗಿದೆ.
ಕರ್ನಾಟಕದ ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿ
- ಎಸ್‌ಕೆಎಸ್‌ಜೆಟಿಐ, ಬೆಂಗಳೂರು
- ಎಸ್‌ಕೆಎಸ್‌ಜೆಟಿಐ, ಬೆಂಗಳೂರು (ಸಂಜೆ ಕಾಲೇಜು)
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಹೂವಿನಹಡಗಲಿ, ಬಳ್ಳಾರಿ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಚಾಮರಾಜನಗರ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಹಾಸನ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಹಾವೇರಿ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಕುಶಾಲನಗರ, ಕೊಡಗು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಕೆ.ಆರ್.ಪೇಟೆ ಮಂಡ್ಯ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಯಚೂರು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಕಾರವಾರ, ಉತ್ತರ ಕನ್ನಡ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಗಂಗಾವತಿ, ಕೊಪ್ಪಳ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ತಳಕಲ್, ಕೊಪ್ಪಳ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಹಾಸನ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಚಳ್ಳೇಕೆರೆ ಚಿತ್ರದುರ್ಗ
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಬೀದರ್
ಯೂನಿವರ್ಸಿಟಿ ಕಾಲೇಜುಗಳು
- ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಂಗಳೂರು
- ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಇವಿನಿಂಗ್), ಬೆಂಗಳೂರು
- ಯೂನಿವರ್ಸಿಟಿ ಬಿಡಿಟಿ ಕಾಲೇಜ್ ಆಫ್ ಇಂಜಿನಿಯರಿಂಗ್, ದಾವಣಗೆರೆ
ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳು
- ಬಿ.ಎಂ.ಎಸ್. ಕಾಲೇಜ್ ಆಫ್ ಇಂಜಿನಿಯರಿಂಗ್, ಬೆಂಗಳೂರು
- ಡಾ. ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು
- ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು, ಬಾಗಲಕೋಟೆ
- ಬಿ.ವಿ.ಬಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜು, ಹುಬ್ಬಳ್ಳಿ
- ಪಿಡಿಎ ಕಾಲೇಜ್ ಆಫ್ ಎಂಜಿನಿಯರಿಂಗ್, ಗುಲ್ಬರ್ಗ
- ಮಲ್ನಾಡ್ ಕಾಲೇಜ್ ಆಫ್ ಇಂಜಿನಿಯರಿಂಗ್, ಹಾಸನ
- P.E.S ಕಾಲೇಜ್ ಆಫ್ ಇಂಜಿನಿಯರಿಂಗ್, ಮಂಡ್ಯ
- ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್, ಮೈಸೂರು
- ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಮೈಸೂರು
ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಕುರಿತು ಮಾಹಿತಿ ಹುಡುಕುವವರಿಗೆ ಅನುಕೂಲವಾಗಲಿ ಎಂದು ಈ ಪಟ್ಟಿ ನೀಡಲಾಗಿದೆ. ಇವುಗಳಲ್ಲಿ ಯಾವುದು ಉತ್ತಮ? ಎಲ್ಲಿ ಎಷ್ಟು ಶುಲ್ಕವಿದೆ ಇತ್ಯಾದಿಗಳನ್ನು ಖುದ್ದಾಗಿ ರಿಸರ್ಚ್ ಮಾಡಿಕೊಳ್ಳಿ. ಕರ್ನಾಟಕದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯನ್ನು ಕರ್ನಾಟಕ ಸರಕಾರದ ವೆಬ್‌ಸೈಟ್‌ನಲ್ಲಿಯೂ ಪಡೆದುಕೊಳ್ಳಬಹುದು. ಇದಕ್ಕಾಗಿ ಕರ್ನಾಟಕ ಸರಕಾರದ ಡಿಪಾರ್ಟ್‌ಮೆಂಟ್ ಆಫ್ ಟೆಕ್ನಿಕಲ್ ಎಜುಕೇಷನ್ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
