SSLC Question Papers: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಯಾರಿಗೆ 2025ರ ಮಾದರಿ ಪ್ರಶ್ನೆ ಪತ್ರಿಕೆಗಳು, ಪಿಡಿಎಫ್‌ ಡೌನ್‌ಲೋಡ್‌ ಮಾಡಿ
ಕನ್ನಡ ಸುದ್ದಿ  /  ಕರ್ನಾಟಕ  /  Sslc Question Papers: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಯಾರಿಗೆ 2025ರ ಮಾದರಿ ಪ್ರಶ್ನೆ ಪತ್ರಿಕೆಗಳು, ಪಿಡಿಎಫ್‌ ಡೌನ್‌ಲೋಡ್‌ ಮಾಡಿ

SSLC Question Papers: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಯಾರಿಗೆ 2025ರ ಮಾದರಿ ಪ್ರಶ್ನೆ ಪತ್ರಿಕೆಗಳು, ಪಿಡಿಎಫ್‌ ಡೌನ್‌ಲೋಡ್‌ ಮಾಡಿ

2025 Sslc Examination Model Question Papers: ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಸಿದ್ಧತೆ ನಡೆಸುವವರಿಗೆ ಅನುಕೂಲವಾಗುವಂತೆ 2025ರ ಮಾದರಿ ಪ್ರಶ್ನೆಪತ್ರಿಕೆಗಳನ್ನು ನೀಡಲಾಗಿದೆ. ಈ ಪಿಡಿಎಫ್‌ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಯಾರಿಗೆ 2025ರ ಮಾದರಿ ಪ್ರಶ್ನೆ ಪತ್ರಿಕೆಗಳು
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಯಾರಿಗೆ 2025ರ ಮಾದರಿ ಪ್ರಶ್ನೆ ಪತ್ರಿಕೆಗಳು

2025 Sslc Examination Model Question Papers: ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಸಿದ್ಧತೆ ನಡೆಸುವವರಿಗೆ ಅನುಕೂಲವಾಗುವಂತೆ 2025ರ ಮಾದರಿ ಪ್ರಶ್ನೆಪತ್ರಿಕೆಗಳನ್ನು ನೀಡಲಾಗಿದೆ. ಈ ಪಿಡಿಎಫ್‌ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನೀಡಿರುವ ಹಳೆಯ ಮತ್ತು ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್‌ಲೋಡ್‌ ಮಾಡಿಕೊಂಡು ಮುಂಬರುವ ವಾರ್ಷಿಕ ಪರೀಕ್ಷೆಗೆ ಸಿದ್ಧತೆ ನಡೆಸಬಹುದು. ಯಾವುದೇ ಪರೀಕ್ಷೆಯಲ್ಲಿ ಯಶಸ್ಸು ಪಡೆಯಲು ಹಳೆಯ ಪತ್ರಿಕೆಗಳನ್ನು ಅವಲೋಕಿಸುವುದು ಅತ್ಯಂತ ಅಗತ್ಯ. ಕೆಲವೊಮ್ಮೆ ಕೆಲವು ಪ್ರಶ್ನೆಗಳು ಪುನಾರವರ್ತನೆಯಾಗುತ್ತವೆ. ಕೆಲವು ಹಳೆಯ ಪ್ರಶ್ನೆಪತ್ರಿಕೆಗಳನ್ನು ನಿಗದಿತ ಸಮಯದೊಳಗೆ ಬರೆಯಲು ಪ್ರ್ಯಾಕ್ಟೀಸ್‌ ಮಾಡಬಹುದು. ಇದರಿಂದ ಪರೀಕ್ಷೆಯಲ್ಲಿ ಯಾವ ಪ್ರಶ್ನೆಗೆ ಎಷ್ಟು ಸಮಯ ನೀಡಬೇಕು ಎಂದು ತಿಳಿಯುತ್ತದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯಲು ಸಹಾಯವಾಗುವಂತೆ 2025ರ ಮಾದರಿ ಪ್ರಶ್ನೆಪತ್ರಿಕೆಗಳ ಒಂದಿಷ್ಟು ಪಿಡಿಎಫ್‌ಗಳನ್ನು ಇಲ್ಲಿ ನೀಡಲಾಗಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ 2025ರ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ಮಾರ್ಚ್‌ ಮತ್ತು ಏಪ್ರಿಲ್‌ ತಿಂಗಳ ನಡುವೆ ನಡೆಯುವ ಈ ಪರೀಕ್ಷೆಗೆ ಸಿದ್ಧತೆ ನಡೆಸಲು ವಿದ್ಯಾರ್ಥಿಗಳಿಗೆ ಹೆಚ್ಚು ಸಮಯ ಬಾಕಿ ಉಳಿದಿಲ್ಲ. ಎಸ್‌ಎಸ್‌ಎಲ್‌ಸಿ ಹಳೆಯ ಪ್ರಶ್ನೆಪತ್ರಿಕೆಗಳನ್ನು ಅವಲೋಕಿಸಿಕೊಂಡು ಪರೀಕ್ಷೆಗೆ ಸಿದ್ಧತೆ ನಡೆಸಲು ಇದು ಪ್ರಮುಖ ಸಮಯವಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಲು ಪ್ರಥಮ ಭಾಷೆ ಕನ್ನಡ, ಹಿಂದಿ, ಇಂಗ್ಲಿಷ್‌, ದ್ವಿತೀಯ ಭಾಷೆ ಇಂಗ್ಲಿಷ್‌, ಕನ್ನಡ, ತೃತೀಯ ಭಾಷೆ ಹಂದಿ, ಕನ್ನಡ, ಕೊಂಕಣಿ, ತುಳು ಇತ್ಯಾದಿ ಪ್ರಶ್ನೆಪತ್ರಿಕಗಳ ಪಿಡಿಎಫ್‌ ಇಲ್ಲಿ ನೀಡಲಾಗಿದೆ. ಇದರೊಂದಿಗೆ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಇತ್ಯಾದಿ ವಿಷಯಗಳ ಪ್ರಶ್ನೆಪತ್ರಿಕೆಗಳ ಪಿಡಿಎಫ್‌ಗಳನ್ನು ಇಲ್ಲಿ ನೀಡಲಾಗಿದೆ. ಕೆಲವೊಂದು ಪ್ರಶ್ನೆಪತ್ರಿಕೆಗಳ ಪಿಡಿಎಫ್‌ಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ವೆಬ್‌ಸೈಟ್‌ನ ಲಿಂಕ್‌ಗಳನ್ನು ನೀಡಲಾಗಿದೆ.

2025 ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆಪತ್ರಿಕೆ ಪಿಡಿಎಫ್‌ಗಳು

ಎಲ್ಲಾ ಪಿಡಿಎಫ್‌ಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್‌ ಮಾಡಿ

 

Whats_app_banner