ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೀರಾ, 10ನೇ ತರಗತಿ ಮಾದರಿ ಪ್ರಶ್ನೆಪತ್ರಿಕೆ ಡೌನ್‌ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ
Karnataka SSLC exam 2025: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ದತೆ ನಡೆಸಿದ್ದೀರಾ, ಹಾಗಾದರೆ 10ನೇ ತರಗತಿ ಮಾದರಿ ಪ್ರಶ್ನೆ ಪತ್ರಿಕೆಗಾಗಿ ಅಲ್ಲಿ ಇಲ್ಲಿ ಹುಡುಕಾಡಬೇಡಿ. 10ನೇ ತರಗತಿ ಮಾದರಿ ಪ್ರಶ್ನೆಪತ್ರಿಕೆ ಡೌನ್‌ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ. ಡೌನ್‌ಲೋಡ್ ಮಾಡುವ ಹಂತಗಳ ವಿವರವೂ ಇದೆ.
Karnataka SSLC exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 20 ರಿಂದ ನಡೆಯುವ ಸಾಧ್ಯತೆ ಇದ್ದು, ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ, ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025ಕ್ಕೆ ಸಂಬಂಧಿಸಿದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿ ಬಿಡುಗಡೆ ಮಾಡಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ಕೆಎಸ್‌ಇಎಬಿಯ ಅಧಿಕೃತ ವೆಬ್‌ಸೈಟ್ “kseab.karnataka.gov.in”ಗೆ ತೆರಳಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025; ಮಾದರಿ ಪ್ರಶ್ನೆ ಪತ್ರಿಕೆ ಡೌನ್‌ಲೋಡ್ ಮಾಡುವುದು ಹೀಗೆ
ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಎನ್‌ಎಸ್‌ಕ್ಯೂಎಫ್ ವಿಷಯ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಲು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.
1) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ)ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. - kseab.karnataka.gov.in
2) ಪುಟ ತೆರೆದ ಬಳಿಕ ಅದರಲ್ಲಿರುವ “ಡಾಕ್ಯುಮೆಂಟ್ಸ್” ಸೆಕ್ಷನ್‌ನಲ್ಲಿ “Question papers” ಮೇಲೆ ಕ್ಲಿಕ್ ಮಾಡಬೇಕು.
3) ಆಗ “Question papers” ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ “2025 SSLC Examination Model Question Papers” ಮೇಲೆ ಕ್ಲಿಕ್ ಮಾಡಬೇಕು
4) “2025 SSLC Examination Model Question Papers” ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಎಲ್ಲ ವಿಷಯಗಳ ಪ್ರಶ್ನೆ ಪತ್ರಿಕೆಗಳ ಪಿಡಿಎಫ್ ಪ್ರತಿ ಲಭ್ಯವಿದೆ.
5) ಬೇಕಾದ ವಿಷಯದ ಪ್ರಶ್ನೆ ಪತ್ರಿಕೆ ಮೇಲೇ ಕ್ಲಿಕ್ ಮಾಡಿದರೆ ಆ ಪ್ರಶ್ನೆ ಪತ್ರಿಕೆಯ ಪಿಡಿಎಫ್ ತೆರೆದುಕೊಳ್ಳುತ್ತದೆ. ಅದನ್ನು ಡೌನ್‌ಲೋಡ್ ಮಾಡಿಟ್ಟುಕೊಂಡರೆ ಮತ್ತೆ ಬಳಸಿಕೊಳ್ಳಬಹುದು
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025- ತಾತ್ಕಾಲಿಕ ವೇಳಾಪಟ್ಟಿ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. 10 ನೇ ತರಗತಿಯ ಬೋರ್ಡ್ ಪರೀಕ್ಷೆಯು ಮಾರ್ಚ್ 20 ರಂದು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 2, 2025 ರಂದು ಮುಕ್ತಾಯಗೊಳ್ಳುತ್ತದೆ. ಎಲ್ಲಾ ದಿನಗಳಲ್ಲಿ ಪರೀಕ್ಷೆಯು ಒಂದೇ ಪಾಳಿಯಲ್ಲಿ ನಡೆಯುತ್ತದೆ - ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ. 1ನೇ ಭಾಷೆ, ಕೋರ್ ವಿಷಯಗಳು ಮತ್ತು ಜೆಟಿಎಸ್ ವಿಷಯಗಳ ಪರೀಕ್ಷೆಯು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು 2 ನೇ ಮತ್ತು ತೃತೀಯ ಭಾಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ಎಂಎಸ್‌ಕ್ಯೂಎಫ್ ವಿಷಯಗಳ ಪರೀಕ್ಷೆಯು ಬೆಳಿಗ್ಗೆ 10 ರಿಂದ 12.15 ರವರೆಗೆ ನಡೆಯಲಿದೆ. ಜೆಟಿಎಸ್ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಯನ್ನು ಏಪ್ರಿಲ್ 3, 2025 ರಂದು ತಮ್ಮ ಶಾಲೆಗಳಲ್ಲಿ ನಡೆಸಲಾಗುವುದು. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು ಕೆಎಸ್‌ಇಎಬಿಯ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಬಹುದು.