Breaking News: ದ್ವಿತೀಯ ಪಿಯುಸಿ ಪರೀಕ್ಷೆ 3 ಫಲಿತಾಂಶ ಪ್ರಕಟ, ಶೇ. 23. 73 ಉತ್ತೀರ್ಣ, ಹೀಗೆ ವಿವರ ಪಡೆದುಕೊಳ್ಳಿ
Puc Exam 3 Results ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 3 ಫಲಿತಾಂಶವನ್ನು ಪ್ರಕಟಿಸಿದೆ.
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸಿದ್ದ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಪ್ರಕಟಿಸಿದ್ದು, ಶೇ. 23. 73 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 3 ಅನ್ನು 2024ರ ಜೂನ್ 24ರಿಂದ ಜುಲೈ 5ರವರೆಗೆ ನಡೆಸಲಾಗಿತ್ತು. ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಕೇಂದ್ರಗಳಲ್ಲಿ ಪರೀಕ್ಷೆ ನಡೆದು ಮೌಲ್ಯಮಾಪನವೂ ಕಳೆದ ವಾರವೇ ಆರಂಭಗೊಂಡಿತ್ತು. ಈಗ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು nic ವೆಬ್‌ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದು. https://karresults.nic.in ಅಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ( KSEAB) ಅಧ್ಯಕ್ಷೆಯೂ ಆಗಿರುವ ಐಎಎಸ್ ಅಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.
ಈ ಪರೀಕ್ಷೆಯ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ಮೂರು ಪರೀಕ್ಷೆಗಳಲ್ಲಿ ವಿಷಯವಾರು ಗಳಿಸಿದ ಅತಿ ಹೆಚ್ಚು ಅಂಕಗಳನ್ನು ಪರಿಗಣಿಒಸಿ ಅಂತಿಮ ಫಲಿತಾಂಶವನ್ನು ವೆಬ್‌ಸೈಟ್ ಮೂಲಕ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಫಲಿತಾಂಶ ನೋಡುವುದು ಹೇಗೆ?
kseab.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
https://karresults.nic.in ಅನ್ನು ಕ್ಲಿಕ್ ಮಾಡಿ.
ಹೋಮ್ ಪೇಜ್‌ನಲ್ಲಿ ಪಿಯುಸ ಪೂರಕ ಫಲಿತಾಂಶದ ಲಿಂಕ್ ಕ್ಲಿಕ್ ಮಾಡಿ
ಸ್ಕ್ರೀನ್‌ನಲ್ಲಿ ಹೊಸ ಪುಟ ಕಾಣಿಸುತ್ತದೆ
ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕ ಸೇರಿದಂತೆ ಅಲ್ಲಿ ಕೇಳಲಾಗುವ ಮಾಹಿತಿಯನ್ನು ನಮೂದಿಸಿ
ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಕಾಣುತ್ತದೆ
ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಅಥವಾ ಪ್ರಿಂಟ್ ಔಟ್ ತೆಗೆದುಕೊಳ್ಳಿ