PUC Supplementary Result: ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ಜಾಲತಾಣದಲ್ಲಿ ಫಲಿತಾಂಶ ವೀಕ್ಷಣೆ ಸೇರಿ ಸಂಪೂರ್ಣ ಮಾಹಿತಿ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು (ಜೂನ್ 20, ಮಂಗಳವಾರ) ಪ್ರಕಟವಾಗಲಿದೆ.
https://karresults.nic.in ಜಾಲತಾಣದಲ್ಲಿ ಬೆಳಗ್ಗೆ 11 ಗಂಟೆಗೆ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಮೇ 23 ರಿಂದ ಜೂನ್ 3ರವರೆಗೆ ನಡೆದಿದ್ದವು.
ಪದವಿ ಮತ್ತು ಇತರೆ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿರುವುದರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಫಲಿತಾಂಶದ ಕಾತುರ ಹೆಚ್ಚಾಗಿದೆ.
ಫಲಿತಾಂಶ ನೋಡುವುದು ಹೇಗೆ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಾಲತಾಣ https://karresults.nic.in ಈ ಲಿಂಕ್ ಕ್ಲಿಕ್ ಮಾಡಿದರೆ ಎರಡು ಆಯ್ಕೆಗಳು ಬರುತ್ತವೆ.
- ಕರ್ನಾಟಕ ಪರೀಕ್ಷಾ ಪ್ರಾಧಿಕಾರ/Karnataka Examination Authority - CET ಪರೀಕ್ಷೆ ಫಲಿತಾಂಶ ಪ್ರಕಟಣೆ /CET Examination Results announced on 15th June 2023
- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ/ Karnataka School Examination and Assessment Board - ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಣೆ / II PUC Annual Exam Result announced on 21/04/2023
ಎರಡು ಆಯ್ಕೆ ಪೈಕಿ ಎರಡನೇ ಆಯ್ಕೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಣೆ / II PUC Annual Exam Result announced on 21/04/2023 ಮೇಲೆ ಕ್ಲಿಕ್ ಮಾಡಿ ಆ ನಂತರ ರಿಜಿಸ್ಟಟರ್ ನಂಬರ್ ನಮೂದಿಸಿ. ಬಳಿಕ ಯಾವ ವಿಷಯ ಎಂಬುದನ್ನು ನಮೂದಿಸಿ Submit ಬಳಿ ಕ್ಲಿಕ್ ಮಾಡಿ.