ಕನ್ನಡ ಸುದ್ದಿ  /  ಕರ್ನಾಟಕ  /  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ; ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ; ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ

ಏಪ್ರಿಲ್ 29 ರಿಂದ ಮೇ 16ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ವೇಳೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ( Secondary PUC Supplementary Exam 2024) ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಇಲಾಖೆ ಸಿಹಿ ಸುದ್ದಿ ನೀಡಿವೆ. ಏಪ್ರಿಲ್ 29 ರಿಂದ ಮೇ 16ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಉಚಿತ ಬಸ್ ಪ್ರಯಾಣಕ್ಕೆ (Free Bus Service) ಅವಕಾಶ ಕಲ್ಪಿಸಿವೆ. ಪರೀಕ್ಷೆ ಇರುವ ದಿನಗಳಂದು ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಗಳ ವರೆಗೆ ಉಚಿತವಾಗಿ ಕೆಎಸ್‌ಆರ್‌ಟಿಸಿ ಅಥವಾ ಬಿಎಂಟಿಸಿ ಬಸ್‌ಗಳನ್ನು ಪ್ರಯಾಣಿಸಬಹುದು.

ಉಚಿತ ಬಸ್ ಪ್ರಯಾಣದ ವೇಳೆ ಪರೀಕ್ಷೆ ಪ್ರವೇಶ ಪತ್ರ ಮತ್ತು ಕಾಲೇಜು ಗುರುತಿನ ಚೀಟಿಯನ್ನು ತೋರಿಸಬೇಕು. ಕಳೆದ ವರ್ಷ ಮಾಡಿಸಿರುವ ಬಸ್ ಪಾಸ್ ಮುಗಿದಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ಯಾವೆಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂಬುದನ್ನು ನೋಡುವುದಾದರೆ ಹೊರವಲಯದ ಬಸ್‌ಗಳು, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷ ಸಾರಿಗೆ ಸಂಸ್ಥೆ ಪತ್ರ ಬರೆದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಮಂಡಳಿಯ ಕೋರಿಕೆ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆಗೆ ಅನುಮತಿ ನೀಡಿ ಈ ಸಂಬಂಧ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ತಿಳುವಳಿಕೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ. ಇದೇ ವೇಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕೋರಿಕೆ ಸ್ಥಳದಲ್ಲಿ ಬಸ್ ನಿಲುಗಡೆಗೂ ಸೂಚಿಸಿದ್ದು, ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುತವಾಗಿ ವರ್ತಿಸುವಂತೆಯು ಹೇಳಲಾಗಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಏಪ್ರಿಲ್ 29 ರಿಂದ ಮೇ 16, 2024 ರವರೆಗೆ ನಡೆಯಲಿದೆ. ಪರೀಕ್ಷೆಗಳು ಎರಡು ಪಾಳಿಗಳಲ್ಲಿ ನಡೆಯಲಿದ್ದು, ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 2.15 ರಿಂದ 4.30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು kseab.karnataka.gov.in ಡೈರೆಕ್ಟ್ ಲಿಂಕ್ ಬಳಸಬಹುದು.

ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಹಂತಗಳು

  • kseab.karnataka.gov.in ನಲ್ಲಿ ಕೆಎಸ್ಇಎಬಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ರ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಲು ಲಿಂಕ್ ಅನ್ನು ಮುಖಪುಟದಲ್ಲಿ ಹುಡುಕಿ ಮತ್ತು ಕ್ಲಿಕ್ ಮಾಡಿ
  • ಹೊಸ ಪುಟವು ತೆರೆದುಕೊಳ್ಳುತ್ತದೆ. ಅಲ್ಲಿ ಅಭ್ಯರ್ಥಿಯು ಲಾಗಿನ್ ವಿವರಗಳನ್ನು ಸಲ್ಲಿಸಿದ ನಂತರ ತಮ್ಮ ಲಾಗಿನ್ ವಿವರಗಳನ್ನು ಸಲ್ಲಿಸಬೇಕಾಗುತ್ತದೆ
  • ನೀವು ಪರದೆಯ ಮೇಲೆ ಪ್ರವೇಶ ಪತ್ರವನ್ನು ವೀಕ್ಷಿಸಬಹುದು
  • ವಿವರಗಳನ್ನು ಪರಿಶೀಲಿಸಿ ನಂತರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಿ

IPL_Entry_Point