ಕರ್ನಾಟಕ ಎಂಜಿನಿಯರಿಂಗ್ ಕಾಲೇಜು ವೃತ್ತಿಪರ ಕೋರ್ಸ್‌ಗಳ ಶುಲ್ಕ ಶೇ 10 ಹೆಚ್ಚಳ; ಹಾಲಿ ಮತ್ತು ಪರಿಷ್ಕೃತ ಶುಲ್ಕ ವಿವರ ಹೀಗಿದೆ
ಕರ್ನಾಟಕ ಎಂಜಿನಿಯರಿಂಗ್ ಕಾಲೇಜು ವೃತ್ತಿಪರ ಕೋರ್ಸ್‌ಗಳ ಶುಲ್ಕ ಶೇ 10 ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಕಳೆದ ವರ್ಷ ಶೇ. 7 ರಷ್ಟು ಹೆಚ್ಚಳವಾಗಿತ್ತು. ಹಾಗಾದರೆ ವಿದ್ಯಾರ್ಥಿಗಳು ಎಷ್ಟು ಶುಲ್ಕ ಪಾವತಿಸಬೇಕು, ಹಾಲಿ ಮತ್ತು ಪರಿಷ್ಕೃತ ಶುಲ್ಕ ವಿವರ ಹೀಗಿದೆ ನೋಡಿ (ವರದಿ- ಎಚ್. ಮಾರುತಿ, ಬೆಂಗಳೂರು)

ಬೆಂಗಳೂರು: 2024-25 ನೇ ಸಾಲಿನ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ. 10 ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ.
ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ನಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಶುಕ್ರವಾರ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ಕಳೆದ ವರ್ಷ ಅಂದರೆ 2023-24ರಲ್ಲಿ ಶೇ. 7 ರಷ್ಟು ಮಾತ್ರ ಹೆಚ್ಚಿಸಲಾಗಿತ್ತು. ಆದ್ದರಿಂದ ಈ ವರ್ಷ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 15ರಷ್ಟು ಹೆಚ್ಚಳ ಮಾಡುವಂತೆ ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರದ ಮುಂದೆ ಬೇಡಿಕೆ ಇಟ್ಟಿತ್ತು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಎರಡು ವರ್ಷಗಳ ಅವಧಿಗೆ ಶೇ. 10ರಷ್ಟು ಶುಲ್ಕ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಶೇ. 10ರಷ್ಟು ಶುಲ್ಕ ಹೆಚ್ಚಳಕ್ಕೆ ತಡೆ ನೀಡಿ, ಶೇ. 7 ರಷ್ಟು ಹೆಚ್ಚಳಕ್ಕೆ ಮಾತ್ರ ಅನುಮತಿ ನೀಡಿತ್ತು. ಆದ್ದರಿಂದ ಈ ಬಾರಿ ಶೇ.15 ರಷ್ಟು ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರವನ್ನು ಆಗ್ರಹಪಡಿಸಿತ್ತು.
ವೈದ್ಯಕೀಯ ಶಿಕ್ಷಣ ಕೋರ್ಸ್ ಶುಲ್ಕ ನಿಗದಿ ತಡ
ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳಿಗೆ ಶುಲ್ಕ ನಿಗದಿ ಪಡಿಸಲು ಸಮಯವಿದ್ದು ನಿಗದಿತ ಅವಧಿಯೊಳಗೆ ಶುಲ್ಕ ನಿಗದಿಪಡಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ, ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್, ಕೆ ಇ ಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಮುಖ್ಯಸ್ಥರಾದ ರಾಧಾಕೃಷ್ಣ, ಎಂ. ಆರ್. ಜಯರಾಂ ಮೊದಲಾದವರು ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಶಿಕ್ಷಣ ಶುಲ್ಕ ಪರಿಷ್ಕರಣೆ
ಪರಿಷ್ಕೃತ ಎಂಜಿನಿಯರಿಂಗ್ ಶಿಕ್ಷಣ ಶುಲ್ಕ
ಸರ್ಕಾರಿ ಕೋಟಾ | ||
ಸೀಟು | ಈಗಿನ ಶುಲ್ಕ (ರೂಪಾಯಿ) | ಪರಿಷ್ಕೃತ ಶುಲ್ಕ (ರೂಪಾಯಿ) |
ಟೈಪ್ 1 | 69,214 | 76,135 |
ಟೈಪ್ 2 | 76,905 | 84,595 |
ಕಾಮೆಡ್ ಕೆ - ಕೋಟಾ | ||
ಸೀಟು | ಈಗಿನ ಶುಲ್ಕ (ರೂಪಾಯಿ) | ಪರಿಷ್ಕೃತ ಶುಲ್ಕ (ರೂಪಾಯಿ) |
ಟೈಪ್ 1 | 1.69 ಲಕ್ಷ | 1.86 ಲಕ್ಷ |
ಟೈಪ್ 2 | 2.37 ಲಕ್ಷ | 2.64 ಲಕ್ಷ |
ಕಳೆದ ವರ್ಷ ಸಿಇಟಿ ಅಡಿಯಲ್ಲಿ ಲಭ್ಯವಾದ ಸೀಟು ಗಳಿಗೆ ಖಾಸಗಿ ಕಾಲೇಜುಗಳಲ್ಲಿ (ಟೈಪ್ 1) 96,574 ರೂಪಾಯಿ ಮತ್ತು ಟೈಪ್ 2 ಕಾಲೇಜುಗಳಿಗೆ 1,04,265 ರೂಪಾಯಿ ನಿಗದಿಯಾಗಿತ್ತು. ಇದಲ್ಲದೆ, 2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ರೂಪಾಯಿ 38,200, ಅಲ್ಪಸಂಖ್ಯಾತ ಕಾಲೇಜುಗಳು ಸೇರಿದಂತೆ ಅನುದಾನ ರಹಿತ ಕಾಲೇಜುಗಳಲ್ಲಿ 98,984 ರೂಪಾಯಿ ಖಾಸಗಿ ಮತ್ತು ಡೀಮ್ ವಿಶ್ವವಿದ್ಯಾಲಯಗಳಲ್ಲಿ 1,91,796 ರೂಪಾಯಿ ನಿಗದಿಪಡಿಸಲಾಗಿತ್ತು.
(ವರದಿ- ಎಚ್. ಮಾರುತಿ, ಬೆಂಗಳೂರು)
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
