ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕಾಸರಗೋಡು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ (pti)

ಮಂಗಳೂರು: ಕರಾವಳಿಯಾದ್ಯಂತ ಭಾರಿ ಮಳೆ ಮುಂದುರಿದಿದೆ. ಹಲವೆಡೆ ಭೂಕುಸಿತ ಹಾಗೂ ಆತಂಕದ ವಾತಾವರಣ ಇರುವ ಹಿನ್ನೆಲೆಯಲ್ಲಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳಿಗೆ ಆಗಸ್ಟ್ 2ರಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಕಾಲೇಜುಗಳು, ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳು, ಸಿಬಿಎಸ್ಇ ಶಾಲೆಗಳು, ಐಸಿಎಸ್‌ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದ್ರಸಾಗಳಿಗೆ ಇಂದು (ಶುಕ್ರವಾರ, ಆಗಸ್ಟ್ 2, 2024) ಜಿಲ್ಲಾಧಿಕಾರಿ ಕೆ. ಇಂಬಾ ಶೇಖರ್ ರಜೆ ಘೋಷಿಸಿದ್ದಾರೆ. ಪೂರ್ವ ಘೋಷಿತ ಪರೀಕ್ಷೆಗಳಿಗೆ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ರಜೆ ಘೋಷಿಸಿದರೆ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಿಸಲಾಗಿದೆ.

(ಮತ್ತಷ್ಟು ಮಾಹಿತಿ ಶೀಘ್ರ ಅಪ್‌ಡೇಟ್ ಆಗಲಿದೆ)

Whats_app_banner