ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ; ಮರುಮೌಲ್ಯಮಾಪನ, ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯುವುದು ಹೀಗೆ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ; ಮರುಮೌಲ್ಯಮಾಪನ, ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯುವುದು ಹೀಗೆ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results) ಪ್ರಕಟವಾಗಿದ್ದು, ಇನ್ನು ಮರುಮೌಲ್ಯಮಾಪನ, ಉತ್ತರ ಪತ್ರಿಕೆಗಳನ್ನು ಪಡೆಯುವುದರ ಕಡೆಗೆ ಎಲ್ಲರ ಗಮನಹರಿಯುವುದು ಸಹಜ. ಆದ್ದರಿಂದ, ದ್ವಿತೀಯ ಪಿಯುಸಿ ಮರುಮೌಲ್ಯಮಾಪನ, ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯುವುದು ಹೀಗೆ- ಇಲ್ಲಿದೆ ವಿವರ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ; ಮರುಮೌಲ್ಯಮಾಪನ, ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯುವುದರ ವಿವರ (ಸಾಂಕೇತಿಕ ಚಿತ್ರ)
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ; ಮರುಮೌಲ್ಯಮಾಪನ, ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯುವುದರ ವಿವರ (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results) ಪ್ರಕಟವಾಗಿದ್ದು, ಅನೇಕರಿಗೆ ತಮಗೆ ಸಿಗಬೇಕಾದಷ್ಟು ಅಂಕ ಸಿಕ್ಕಿಲ್ಲ ಅಥವಾ ಸಂದೇಹಗಳಿದ್ದು, ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಬಯಸಿದರೆ ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್‌ ಪ್ರತಿ ಬೇಕು ಎಂದು ಬಯಸಿದರೆ ಅದನ್ನು ಪಡೆಯುವುದಕ್ಕೆ ಅವಕಾಶ ಇದೆ ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹೇಳಿದೆ.

ಟ್ರೆಂಡಿಂಗ್​ ಸುದ್ದಿ

ದ್ವಿತೀಯ ಪಿಯು ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್‌ಇಎಬಿಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಮಂಡಳಿ ಕಳುಹಿಸಲಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿಯನ್ನು ಪಡೆಯಲು ವಿದ್ಯಾರ್ಥಿಗಳು ಇಂದಿನಿಂದ ಏಪ್ರಿಲ್ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನಕ್ಕೆ ಶುಲ್ಕವನ್ನು ಪಾವತಿಸಬೇಕು. ಆನ್‌ಲೈನ್‌ನಲ್ಲಿ ಮತ್ತು ಆಫ್‌ಲೈನ್‌ನಲ್ಲಿ ಚಲನ್ ಮುಖಾಂತರ ಪಾವತಿ ಮಾಡಲು ಮಂಡಳಿ ಸೌಲಭ್ಯ ಒದಗಿಸಿದೆ.

ಮರು ಮೌಲ್ಯಮಾಪನ, ಸ್ಕ್ಯಾನ್ಡ್ ಪ್ರತಿ ಪಡೆಯುವಾಗ ಗಮನಿಸಬೇಕಾದ ಅಂಶ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಯ ಮರು ಮೌಲ್ಯಮಾಪನ, ಸ್ಕ್ಯಾನ್ಡ್ ಪ್ರತಿ ಪಡೆಯುವಾಗ ಗಮನಿಸಬೇಕಾದ ಅಂಶಗಳು ಇವು

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಮತ್ತು ಮರು ಮೌಲ್ಯಮಾಪನ

ವಿವರಆರಂಭದ ದಿನಕೊನೇ ದಿನ
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆಏಪ್ರಿಲ್ 10ಏಪ್ರಿಲ್ 16
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಲುಏಪ್ರಿಲ್ 14ಏಪ್ರಿಲ್ 19 
ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗಾಗಿ (ಸ್ಕ್ಯಾನ್ಡ್ ಪ್ರತಿ ಪಡೆದವರಿಗೆ ಮಾತ್ರ) ಅರ್ಜಿ ಸಲ್ಲಿಕೆ ಏಪ್ರಿಲ್ 14ಏಪ್ರಿಲ್ 20
ದ್ವಿತೀಯ ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಲು ಶುಲ್ಕ (ಪ್ರತಿ ವಿಷಯಕ್ಕೆ)530 ರೂಪಾಯಿ
ಮರುಮೌಲ್ಯಮಾಪನದ ಶುಲ್ಕ (ಪ್ರತಿ ವಿಷಯಕ್ಕೆ) 1670 ರೂಪಾಯಿ

ದ್ವಿತೀಯ ಪಿಯುಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ್ದು

ದ್ವಿತೀಯ ಪಿಯುಸಿಯ ಯಾವುದೇ ಅಭ್ಯರ್ಥಿಗಳು ಪರೀಕ್ಷೆ -2ಕ್ಕೆ ಅರ್ಜಿ ಸಲ್ಲಿಸುವುದಾದರೆ, ಅಂಥವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.

ಯಾವುದೇ ಸಂದರ್ಭದಲ್ಲಿ, “ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್ ಎಲ್ ಪಿ ಇ 1997, 29 (ಎ)” ಪ್ರಕಾರ ಈ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರುಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-1ರ ಅಂಕಗಳೆಂದು ಪರಿಗಣಿಸಲಾಗುತ್ತದೆ.

ಮರುಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿರುವುದಿಲ್ಲ.

ಮರು ಮೌಲ್ಯಮಾಪನದ ಮತ್ತು ಮರುಎಣಿಕೆಯ ಫಲಿತಾಂಶವನ್ನು ಮಂಡಳಿಯು, https://kseab.karnataka.gov.in ಎಂಬ ಮಂಡಲಿಯ ಅಂತರ್ಜಾಲದಲ್ಲಿ ಪ್ರಕಟಿಸಲಿದೆ. ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024

ದ್ವಿತೀಯ ಪಿಯು ಪರೀಕ್ಷೆಯಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉತ್ತೀರ್ಣ ಪ್ರಮಾಣ ಶೇಕಡ 81.15 ದಾಖಲಾಗಿದೆ. ಜಿಲ್ಲಾವಾರು ಉತ್ತೀರ್ಣ ಪ್ರಮಾಣದಲ್ಲಿ ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಜಿಲ್ಲೆಗಳು ಮೊದಲ ಮೂರು ಸ್ಥಾನಗಳಲ್ಲಿವೆ.

ರಾಜ್ಯ ಒಟ್ಟು 70 ಮೌಲ್ಯಮಾಪನ ಕೇಂದ್ರಗಳಲ್ಲಿ ಮಾರ್ಚ್ 25ರಿಂದ ಏಪ್ರಿಲ್ 3ರ ತನಕ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯಿತು. 27,650 ಮೌಲ್ಯಮಾಪಕರು ಇದರಲ್ಲಿ ಭಾಗವಹಿಸಿದ್ದರು. ಒಟ್ಟು 6,98,378 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಎಲ್ಲ ಪರೀಕ್ಷೆಗಳಿಗೆ ಗೈರುಹಾಜರಾದವರು 17,299. ಇನ್ನುಳಿದಂತೆ, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 6,81,079. ಉತ್ತೀರ್ಣರಾದ ವಿದ್ಯಾರ್ಥಿಗಳು 5,52,690

IPL_Entry_Point