ಕನ್ನಡ ಸುದ್ದಿ  /  ಕರ್ನಾಟಕ  /  Class 5 8 9 Exam Result: ಇಂದು 5, 8, 9ನೇ ತರಗತಿ ಮೌಲ್ಯಾಂಕನ ಫಲಿತಾಂಶ ಶಾಲೆಗಳಲ್ಲಿ ಪ್ರಕಟ

Class 5 8 9 Exam Result: ಇಂದು 5, 8, 9ನೇ ತರಗತಿ ಮೌಲ್ಯಾಂಕನ ಫಲಿತಾಂಶ ಶಾಲೆಗಳಲ್ಲಿ ಪ್ರಕಟ

ಮಾರ್ಚ್ 11, 12 ಮತ್ತು 25 ರಿಂದ 28ರವರೆಗೆ 5, 8 ಹಾಗೂ 9ನೇ ತರಗತಿಗೆ ಪರೀಕ್ಷೆ ನಡೆದಿತ್ತು. ಇಂದು ಆಯಾ ಶಾಲೆಗಳಲ್ಲೇ ಈ ಮೂರು ತರಗತಿಗಳ ಮೌಲ್ಯಾಂಕನ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.

ಏಪ್ರಿಲ್ 8 ರಂದು 5, 8, 9ನೇ ತರಗತಿ ಮೌಲ್ಯಾಂಕನ ಫಲಿತಾಂಶ ಪ್ರಕಟವಾಗಲಿದೆ
ಏಪ್ರಿಲ್ 8 ರಂದು 5, 8, 9ನೇ ತರಗತಿ ಮೌಲ್ಯಾಂಕನ ಫಲಿತಾಂಶ ಪ್ರಕಟವಾಗಲಿದೆ

ಬೆಂಗಳೂರು: 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ್ದ ಮೌಲ್ಯಾಂಕದ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 8, ಸೋಮವಾರ) ಪ್ರಕಟವಾಗಲಿದೆ. ಆಯಾ ಶಾಲೆಗಳಲ್ಲೇ ಫಲಿತಾಂಶ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಸೂಚಿಸಿದೆ.

ಟ್ರೆಂಡಿಂಗ್​ ಸುದ್ದಿ

ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮಾರ್ಚ್ 11, 12 ಮತ್ತು ಮಾರ್ಚ್ 25 ರಿಂದ 28 ರವರೆಗೆ ಮೌಲ್ಯಾಂಕನ ಪರೀಕ್ಷೆಗಳು ನಡೆದಿದ್ದವು. ಈ ಎಲ್ಲಾ ಶಾಲೆಗಳಲ್ಲಿ ಇವತ್ತು ಸಮುದಾಯದತ್ತ ಶಾಲಾ ದಿನ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 9 ಗಂಟೆಯೊಳಗೆ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶ ಪ್ರಕಟಿಸಿರುವ ಬಗ್ಗೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಡಳಿಗೆ ವರದಿ ನೀಡಬೇಕೆಂದು ನಿರ್ದೇಶಿಸಲಾಗಿದೆ.

5, 8 ಹಾಗೂ 9ನೇ ತರಗತಿ ಬೋರ್ಡ್ ಪರೀಕ್ಷೆ ಕೊಂಚ ಗೊಂದಲದ ಗೂಡಾಗಿತ್ತು. ಪರೀಕ್ಷೆ ನಡೆಸಲು ಕರ್ನಾಟಕ ಹೈಕೋರ್ಟ್ ತಡೆ ನೀಡಿತ್ತು. ಬಳಿಕ ಸರ್ಕಾರ ಸುಪ್ರೀಂ ಕೋರ್ಟ್ ಮೇಟ್ಟಿಲೇರಿತ್ತು. ಉನ್ನತ ನ್ಯಾಯಾಲಯ ಪರೀಕ್ಷೆ ನಡೆಸಬೇಕೆಂದು ಹೇಳಿ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿತ್ತು. ಸದ್ಯ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಮೊದಲು ಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆ ನಂತರ ಆನ್‌ಲೈನ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು. ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ kseab.karnataka.gov.in ಫಲಿತಾಂಶ ಪಡೆಯಬಹುದು. ವಿದ್ಯಾರ್ಥಿಗಳು ತಮ್ಮ ಮುಂದಿನ ತರಗತಿಗಳಿಗೆ ದಾಖಲಾಗಲು ಅಂಕಗಳು ಮತ್ತು ಶ್ರೇಣಿಯ ಹಾರ್ಡ್ ಕಾಪಿಯನ್ನು ತೋರಿಸಬೇಕಾಗುತ್ತದೆ. ಹೀಗಾಗಿ ಶಾಲೆಯಲ್ಲಿ ನೀಡುವ ಅಂಕಪಟ್ಟಿಯನ್ನು ಪಡೆಯಬೇಕಾಗುತ್ತದೆ.

ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಿಸುವ ವಿಧಾನ

  1. ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  2. ಮುಖಪುಟದಲ್ಲಿ ಕಾಣುವ ಫಲಿತಾಂಶದ ವಿಭಾಗದ ಮೇಲೆ ಕ್ಲಿಕ್ ಮಾಡಿ
  3. ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ
  4. ಎಲ್ಲಾ ವಿವರ ಭರ್ತಿ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
  5. ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ
  6. ಮುಂದಿನ ಪ್ರಕ್ರಿಯೆಗಳಿಗಾಗಿ ಫಲಿತಾಂಶವನ್ನು ಸ್ಕ್ರೀನ್‌ಶಾಟ್ ಅಥವಾ ಪ್ರಿಂಟ್ಔಟ್ ತೆಗೆದುಕೊಳ್ಳಿ

ವಿದ್ಯಾರ್ಥಿಗಳಿಗೆ ಫಲಿತಾಂಶದ ಬಗ್ಗೆ ತೃಪ್ತಿಯಾಗದಿದ್ದರೆ ಮರು ಮೌಲ್ಯಮಾಪನಕ್ಕೆ ಅವಕಾಶ ಇರುತ್ತದೆ. ಇದಕ್ಕಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.ಇದಕ್ಕಾಗಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

IPL_Entry_Point