ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೀಘ್ರದಲ್ಲೇ ಪ್ರಕಟ; 10ನೇ ತರಗತಿ ರಿಸಲ್ಟ್‌, ಅಂಕ ಪರಿಶೀಲಿಸಲು ಹೀಗೆ ಮಾಡಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೀಘ್ರದಲ್ಲೇ ಪ್ರಕಟ; 10ನೇ ತರಗತಿ ರಿಸಲ್ಟ್‌, ಅಂಕ ಪರಿಶೀಲಿಸಲು ಹೀಗೆ ಮಾಡಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೇ 8 ರಿಂದ 10 ರ ನಡುವೆ 10ನೇ ತರಗತಿ ಫಲಿತಾಂಶ ಪ್ರಕಟಿಸಲಿದೆ ಎಂಬ ನಿರೀಕ್ಷೆ ಇದೆ. ಈ ಹಿಂದೆ ಒದಗಿಸಿದ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಮೇ 10ರ ಒಳಗೆ ಫಲಿತಾಂಶ ಪ್ರಕಟವಾಗಬೇಕಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದೆ (ಸಾಂಕೇತಿಕ ಚಿತ್ರ)
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದೆ (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ (Karnataka SSLC Result 2024)ಕ್ಕಾಗಿ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಕುತೂಹಲದಿಂದ ಕಾಯುತ್ತಿದ್ದಾರೆ. ಈಗಾಗಲೇ ತಿಳಿಸಿದ ಪ್ರಕಾರ ಮೇ 8 ಮತ್ತು ಮೇ 10 ರ ನಡುವೆ 10ನೇ ತರಗತಿ ರಿಸಲ್ಟ್ (10th Results) ಪ್ರಕಟವಾಗಲಿದೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಅಧಿಕಾರಿಗಳು ಅನೌಪಚಾರಿಕವಾಗಿ ಫಲಿತಾಂಶಗಳನ್ನು ಮೇ 8 ಮತ್ತು 10 ರ ನಡುವೆ ಬಿಡುಗಡೆ ಮಾಡಲಾಗುವುದು ಎಂದು ಹೇಳುತ್ತಿದ್ಧಾರೆ. ಹಾಗೇನಾದರೂ ಆದರೆ, ಇಂದು ಅಥವಾ ನಾಳೆ ಸಂಜೆಯೊಳಗೆ ಎಸ್ಎಸ್‌ಎಲ್‌ಸಿ ಫಲಿತಾಂಶಕ್ಕೆ ಸಂಬಂಧಿಸಿದ ಪ್ರಕಟಣೆಯನ್ನು ಮಂಡಳಿ ಬಿಡುಗಡೆ ಮಾಡಲಿದೆ. ಈ ಪ್ರಕಟಣೆ ಹೊರಡಿಸಿದ ಮಾರನೇ ದಿನ ಪತ್ರಿಕಾಗೋಷ್ಠಿ ನಡೆಸಿ, ವೆಬ್‌ಸೈಟ್‌ ಮೂಲಕವೂ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಮುಖ್ಯ ಅಂಶಗಳು

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಪ್ರಕಟವಾಗಬಹುದಾದ ಸಂಭಾವ್ಯ ದಿನಾಂಕ - ಮೇ 8 ರಿಂದ ಮೇ 10 ರ ನಡುವೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಪ್ರಕಟವಾಗಬಹುದಾದ ಸಮಯ- ಹಿಂದಿನ ವರ್ಷಗಳ ಸಮಯದ ಪ್ರಕಾರ ಬೆಳಗ್ಗೆ 10 ಗಂಟೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಪ್ರಕಟವಾಗುವ ಆನ್‌ಲೈನ್ ತಾಣಗಳಿವು - kseab.karnataka.gov.in ಮತ್ತು karresults.nic.in

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2024- ಗಮನಿಸಬೇಕಾದ ಅಂಶಗಳು

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2024 ಮಾರ್ಚ್ 25 ರಿಂದ ಏಪ್ರಿಲ್ 6ರ ನಡುವೆ ನಡೆಯಿತು. ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಾಳೆ (ಮೇ 9) ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾದರೆ ಬಾಹ್ಯ ವಿದ್ಯಾರ್ಥಿಯಾದರೆ ಶೇಕಡ 30 ಮತ್ತು ಶಾಲಾ ವಿದ್ಯಾರ್ಥಿಯಾದರೆ ಆಂತರಿಕ ಮೌಲ್ಯಮಾಪನವೂ ಸೇರಿ ಶೇಕ 35 ಅಂಕ ಗಳಿಸಬೇಕು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿ ವಿಷಯವೂ 100 ಅಂಕಗಳದ್ದಾಗಿರುತ್ತದೆ. ಇದರಲ್ಲಿ, ಮೂರು ಭಾಷಾ ಪ್ರಶ್ನೆ ಪತ್ರಿಕೆಗಳ ಪೈಕಿ ಒಂದು ಮುಖ್ಯ ಭಾಷೆಯಾಗಿದ್ದು ಅದಕ್ಕೆ 100 ಅಂಕ, ಉಳಿದ ಎರಡರಲ್ಲಿ ತಲಾ 80 ಅಂಕ ಲಿಖಿತ ಪರೀಕ್ಷೆಗೆ 20 ಅಂಕ ಆಂತರಿಕ ಮೌಲ್ಯಮಾಪನದ ಮೂಲಕ ಸಿಗಲಿದೆ.

ಈ ಬಾರಿ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರಿದ್ದರು. ಇದಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕೂಡ ಇವರಲ್ಲೇ ಸೇರಿಕೊಂಡು ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

ಓದಬಹುದಾದ ಇನ್ನಷ್ಟು ಸ್ಟೋರಿಗಳು

IPL_Entry_Point