SSLC Results 2024: ಮೇ 10 ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ; ಲಿಂಕ್ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ
ಕನ್ನಡ ಸುದ್ದಿ  /  ಕರ್ನಾಟಕ  /  Sslc Results 2024: ಮೇ 10 ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ; ಲಿಂಕ್ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

SSLC Results 2024: ಮೇ 10 ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ; ಲಿಂಕ್ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ಮೇ 10 ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶವನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಈ ಕುರಿತ ಡಿಟೇಲ್ಸ್ ಇಲ್ಲಿದೆ.

ಮೇ 10 ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿಯಾಗಿದೆ.
ಮೇ 10 ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿಯಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEAB) ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್ kseab.karnataka.gov.in ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು (SSLC Result 2024) ಬಿಡುಗಡೆ ಮಾಡುವ ನಿರೀಕ್ಷೆಯಿದೆ. karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶವನ್ನು ಪರಿಶೀಲಿಸಬಹದು. ಮೇ 10 ರೊಳಗೆ ಫಲಿತಾಂಶ ಪ್ರಕಟ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ಎಚ್‌ಟಿ ಡಿಜಿಟಲ್‌ಗೆ ತಿಳಿಸಿವೆ. ಈ ಬಗ್ಗೆ ಮೌಲ್ಯಮಾಪನ ಮಂಡಳಿ ಯಾವುದೇ ರೀತಿಯ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಫಲಿತಾಂಶ ಪ್ರಕಟವಾದಾಗ ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ನೋಡಬಹುದು.

  • ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಮೇಲೆ ಲಿಂಕ್ ಕ್ಲಿಕ್ ಮಾಡಿ
  • ಲಾಗಿನ್ ಪುಟದಲ್ಲಿ ಕೇಳಲಾದ ರೋಲ್ ಸಂಖ್ಯೆ ಮತ್ತು ಹೆಸರಿನಂತಹ ವಿವರಗಳನ್ನು ನಮೂದಿಸಿ
  • ಹೊಸ ಪುಟದಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ
  • ಫಲಿತಾಂಶದ ಕಾಪಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ

ಕೆಎಸ್ಇಎಬಿ ಫಲಿತಾಂಶಗಳನ್ನು ಘೋಷಿಸುವ ಮೊದಲು ಅಧಿಕೃತ ದಿನಾಂಕ ಮತ್ತು ಸಮಯವನ್ನು ಪ್ರಕಟಿಸುವ ಸಾಧ್ಯತೆಯಿದೆ. ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪರೀಕ್ಷೆ ಪ್ರಾರಂಭವಾಗಿತ್ತು.

ಕರ್ನಾಟಕ ಪಿಯುಸಿ ದ್ವಿತೀಯ ಪಿಯುಸಿ ಈಗಾಗಲೇ ಏಪ್ರಿಲ್ 10, 2024 ರಂದು ಬಿಡುಗಡೆಯಾಗಿದೆ. ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳ ಫಲಿತಾಂಶವನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಾಗಿದೆ. ಈ ವರ್ಷ 12 ನೇ ತರಗತಿ ಫಲಿತಾಂಶದ ಒಟ್ಟಾರೆ ತೇರ್ಗಡೆ ಶೇಕಡಾ 81.15 ರಷ್ಟಿದೆ.

2,750 ಪರೀಕ್ಷಾ ಕೇಂದ್ರಗಳ್ಲಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು, 4.28 ಬಾಲಕಿಯರು ಸೇರಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತರು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅವಳಡಿಸಿ ಕಟ್ಟುನಿಟ್ಟಾಗಿ ಪರೀಕ್ಷೆಯನ್ನು ನಡೆಸಲಾಗಿದೆ.

Whats_app_banner