KSET 2023: ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕೆಸೆಟ್ 2023 ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಿದೆ. ಸೆಪ್ಟೆಂಬರ್ 11ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 30, 2023ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕೆಸೆಟ್ 2023 ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಿದೆ. ಸೆಪ್ಟೆಂಬರ್ 11ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 30, 2023ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಮೂಲಕ (kea.kar.nic.in) ಅರ್ಜಿ ಸಲ್ಲಿಸಬೇಕು.
ಸರಕಾರದ ಅಧಿಕೃತ ಅಧಿಸೂಚನೆ ಪ್ರಕಾರ ಕೆಸೆಟ್ ಪರೀಕ್ಷೆಗೆ ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 3ರವರೆಗೆ ಅವಕಾಶವಿದೆ. ನವೆಂಬರ್ 26ರಂದು ಕೆಸೆಟ್ ಪರೀಕ್ಷೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಜನರಲ್ ಕೆಟಗರಿ ಅಭ್ಯರ್ಥಿಗಳಿಗೆ ಶೇಕಡ 55 ಅಂಕ, ಒಬಿಸಿ, ಎಸ್‌ಸಿ ಮತ್ತು ಎಸ್‌ಟಿ ಹಾಗೂ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಶೇಕಡ 50 ಅಂಕ ನಿಗದಿಪಡಿಸಲಾಗಿದೆ. ಯುಇಸಿಯಿಂದ ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ವಯೋಮಿತಿ ನಿಗದಿಪಡಿಸಲಾಗಿಲ್ಲ.
ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನೇರ ಲಿಂಕ್ ಇಲ್ಲಿದೆ.
ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಿ. ವೆಬ್‌ಸೈಟ್ ವಿಳಾಸ: kea.kar.nic.in
- KSET 2023 ಲಿಂಕ್ ಕ್ಲಿಕ್ ಮಾಡಿ
- ಹೊಸ ಪುಟ ತೆರೆದುಕೊಳ್ಳುತ್ತದೆ. ಲಾಗಿನ್ ಆಗಿ.
- ಅಲ್ಲಿ ನಿಗದಿಪಡಿಸಿದ ಕಾಲಂಗಳನ್ನು ಭರ್ತಿ ಮಾಡಿ ಅರ್ಜಿ ತುಂಬಿ.
- ಅರ್ಜಿ ಶುಲ್ಕ ಪಾವತಿಸಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಉದ್ದೇಶಕ್ಕಾಗಿ ಅರ್ಜಿ ಪ್ರತಿಯ ಪ್ರಿಂಟೌಟ್ ತೆಗೆದುಕೊಳ್ಳಿ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಅಭ್ಯರ್ಥಿಗಳಿಗೆ, ಒಬಿಸಿ ಅಭ್ಯರ್ಥಿಗಳಿಗೆ 1000 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಟಿ, ಎಸ್‌ಟಿ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 700 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಹೆಚ್ಚಿನ ವಿವರವನ್ನು ಕೆಇಎ ವೆಬ್‌ಸೈಟ್‌ನಿಂದ ಪಡೆಯಬಹುದು.
