Court News: 5,8,9,11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇರಲ್ಲ; ಕರ್ನಾಟಕ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಕರ್ನಾಟಕದಲ್ಲಿ 5,8,9,11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇರಲ್ಲ. ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅನುದಾನರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಬಳಿಕ ಈ ತೀರ್ಪು ಪ್ರಕಟವಾಗಿದೆ. ಇದರ ವಿವರ ಇಲ್ಲಿದೆ.
ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5,8,9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು (Board Exam) ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ (ಮಾರ್ಚ್ 5) ರದ್ದುಗೊಳಿಸಿದೆ.
ಕರ್ನಾಟಕ ಸರ್ಕಾರ ಇತ್ತೀಚೆಗೆ 5,8,9,11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿ ಸುತ್ತೋಲೆ ಪ್ರಕಟಿಸಿತ್ತು. ಸರ್ಕಾರದ ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನರಹಿತ ಶಾಲೆಗಳ ಸಂಘ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.
ಈ ಸುತ್ತೋಲೆ ಕುರಿತು ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಶಾಲಾ ಶಿಕ್ಷಣ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದು ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ.
ಕರ್ನಾಟಕದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವಿಶೇಷವಾಗಿ ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಶಾಲೆಗಳ 5,8,9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ನಡೆಸುವ ಸಂಬಂಧ 2023ರ ಡಿಸೆಂಬರ್‌ನಲ್ಲಿ ಸುತ್ತೋಲೆ ಪ್ರಕಟಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ.
(ಸುದ್ದಿ ಅಪ್ದೇಟ್ ಆಗ್ತಾ ಇದೆ)