ಕನ್ನಡ ಸುದ್ದಿ  /  ಕರ್ನಾಟಕ  /  ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಕಲಾ, ವಾಣಿಜ್ಯ, ವಿಜ್ಞಾನದಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಕಲಾ, ವಾಣಿಜ್ಯ, ವಿಜ್ಞಾನದಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 35 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದವರ 1,48,942 ವಿದ್ಯಾರ್ಥಿಗಳ ಪೈಕಿ 52,505 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ದ್ವಿತೀಯ ಪಿಯುಪಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 35 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಪಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 35 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. (PTI)

ಬೆಂಗಳೂರು: ದ್ವಿತೀಯ ಪಿಯುಪಿಯ ಮರು ಪರೀಕ್ಷೆಯ (Second PUC Exam-2 Result) ಫಲಿತಾಂಶ ಪ್ರಕಟವಾಗಿದ್ದು, ಕಲಾ (Arts), ವಾಣಿಜ್ಯ (Commerce) ಹಾಗೂ ವಿಜ್ಞಾನ (Science) ವಿಭಾಗಗಳಲ್ಲಿ ಶೇಕಡಾ 35 ರಷ್ಟು ವಿದ್ಯಾರ್ಥಿಗಳು ಪರೀಕ್ಷೆ-2 ರಲ್ಲಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 1,48,942 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಏಪ್ರಿಲ್ 29 ರಿಂದ ಮೇ 16ರ ವರೆಗೆ ಒಟ್ಟು 301 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪಡೆಯಬಹುದು. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪರೀಕ್ಷೆ-1 ಮತ್ತು ಪರೀಕ್ಷೆ-2 ರಲ್ಲಿ ವಿಷಯವಾರು ಗಳಿಸಿದ ಅತಿ ಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ https://kseab.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ.

ಪರೀಕ್ಷೆಗೆ ಒಟ್ಟು 84,632 ಬಾಲಕರು ಹಾಜರಾಗಿದ್ದರು. ಇದರಲ್ಲಿ 26,496 (ಶೇಕಡಾ 31.31 ರಷ್ಟು) ಬಾಲಕರು ಉತ್ತೀರ್ಣರಾಗಿದ್ದಾರೆ. 64,310 ಬಾಲಕಿಯರು ಪರೀಕ್ಷೆ ಬರೆದಿದ್ದು, ಈ ಪೈಕಿ ಶೇಕಡಾ 40.44 ರಷ್ಟು ಫಲಿತಾಂಶದೊಂದಿಗೆ 26,009 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ.

ವಿಭಾಗವಾರು ಫಲಿತಾಂಶವನ್ನು ನೋಡುವುದಾದರೆ ಕಲಾ ವಿಭಾಗದಲ್ಲಿ 52,120 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 11,589 ಮಂದಿ ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 39,474 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 8,709 ಮಂದಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 57,348 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 32,207 ಮಂದಿ ಪರೀಕ್ಷೆ-2ರಲ್ಲಿ ತೇರ್ಗಡೆ ಹೊಂದಿದ್ದಾರೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024