SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವಾಗ? ಫಲಿತಾಂಶ ನೋಡುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ
ಕನ್ನಡ ಸುದ್ದಿ  /  ಕರ್ನಾಟಕ  /  Sslc Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವಾಗ? ಫಲಿತಾಂಶ ನೋಡುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

SSLC Result 2024: ಎಸ್‌ಎಸ್‌ಎಲ್‌ಸಿ ರಿಸಲ್ಟ್ ಯಾವಾಗ? ಫಲಿತಾಂಶ ನೋಡುವುದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ

sslc result 2024 date in karnataka: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಅತಿ ಶೀಘ್ರದಲ್ಲಿ ಪ್ರಕಟವಾಗಲಿದೆ. ದಿನಾಂಕ, ಫಲಿತಾಂಶ ಎಲ್ಲಿ, ಹೇಗೆ ನೋಡಬೇಕು, ಲಿಂಕ್ ಯಾವುದು, ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂಬುದರ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ? ಫಲಿತಾಂಶ ನೋಡುವುದು ಹೇಗೆ, ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ? ಫಲಿತಾಂಶ ನೋಡುವುದು ಹೇಗೆ, ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾತುರದಿಂದ ಕಾಯುತ್ತಿದ್ದಾರೆ. ಅತಿ ಶೀಘ್ರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿಯಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಸೇರಿದಂತೆ ಕೋವಿಡ್ ನಂತರ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್ kseab.karnataka.gov.in ನಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. karresults.nic.in ರಂದು ಫಲಿತಾಂಶಗಳನ್ನು ಸಹ ಪರಿಶೀಲಿಸಬಹುದು.

ಮೇ 10 ರೊಳಗೆ ಫಲಿತಾಂಶಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ಎಚ್‌ಟಿ ಡಿಜಿಟಲ್‌ಗೆ ತಿಳಿಸಿವೆ. ಆದರೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ ಪ್ರಕಟಿಸಲಾಗುತ್ತದೆ ಎಂಬುದನ್ನು ಕೆಎಸ್‌ಇಎಬಿ ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಫಲಿತಾಂಶ ಪ್ರಕಟಕ್ಕೂ ಮುನ್ನ ಮಾಹಿತಿ ನೀಡಲಿದೆ.

ಫಲಿತಾಂಶ ಘೋಷಣೆಯಾದಾಗ ವಿದ್ಯಾರ್ಥಿಗಳು ಈ ಕೆಳಗಿನ ಹಂತಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

  • ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್‌ kseab.karnataka.gov.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ಎಸ್ಎಸ್ಎಲ್‌ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಲಾಗಿನ್ ಪುಟದಲ್ಲಿ ಕೇಳಲಾದ ಪರೀಕ್ಷಾ ನೋಂದಣಿ ಸಂಖ್ಯೆ ಹಾಗೂ ಹೆಸರು ಕೇಳಲಾದ ಮಾಹಿತಿಯನ್ನು ನಮೂದಿಸಿ
  • ಹೊಸ ಪುಟದಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ
  • ಡೌನ್ ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ

ಇದನ್ನೂ ಓದಿ: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದಾರೆ ಈ ಅಮ್ಮ, ಮಗಳು

ಕೆಎಸ್ಇಎಬಿ ಫಲಿತಾಂಶಗಳನ್ನು ಘೋಷಿಸುವ ಮೊದಲು ಅಧಿಕೃತ ದಿನಾಂಕ ಮತ್ತು ಸಮಯವನ್ನು ಪ್ರಕಟಿಸುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಸಲಾಗಿತ್ತು. ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪರೀಕ್ಷೆ ನಡೆಸಲಾಗಿತ್ತು.

ಫಲಿತಾಂಶದ ಹೆಸರಿನಲ್ಲಿ ವಂಚನೆ ಸಾಧ್ಯತೆ

ಗಮನಿಸಿ: ಫಲಿತಾಂಶ ಪರಿಶೀಲನೆ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಗಳು ವಂಚಿಸುವ ಸಾಧ್ಯತೆ ಇರುತ್ತದೆ. ತಮ್ಮಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ನೋಡಬಹುದು ಎಂದು ಹೇಳಿ ನಿಮ್ಮ ಮಾಹಿತಿ ಪಡೆದು ವಂಚಿಸುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್‌ನಲ್ಲೇ ಫಲಿತಾಂಶಗಳನ್ನು ವೀಕ್ಷಿಸುವುದು ಉತ್ತಮ.

ಈ ಬಾರಿಯ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು, 4.28 ಬಾಲಕಿಯರು ಸೇರಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 10 ರಂದು ಪ್ರಕಟವಾಗಿದೆ. ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳ ಫಲಿತಾಂಶವನ್ನು ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗಿದೆ. ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಒಟ್ಟಾರೆಯಾಗಿ ಶೇಕಡಾ 81.15 ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ.

Whats_app_banner