Kannada News  /  Karnataka  /  Efforts Are Made To Provide 2a Reservation For Panchamasali Community During My Tenure Says Bsy
ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ) (HT_PRINT)

Panchamasali Reservation: ಪಂಚಮಸಾಲಿ ಮೀಸಲಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಬಿಎಸ್‌ವೈ ಸ್ಪಷ್ಟನೆ!

23 September 2022, 7:51 ISTHT Kannada Desk
  • Share on Twitter
  • Share on FaceBook
23 September 2022, 7:51 IST

ಪಂಚಮಸಾಲಿ ಸಮುದಾಯಕ್ಕೆ ಮೀಸಲತಿ ಕಲ್ಪಿಸುವ ನಿಟ್ಟಿನಲ್ಲಿ, ನನ್ನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯುಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ನಿನ್ನೆ(ಸೆ.22-ಗುರುವಾರ) ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಬಿಎಸ್‌ ಯಡಿಯೂರಪ್ಪ, ಪಂಚಮಸಾಲಿ ಸಮುದಾಯಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ನನ್ನ ಅವಧಿಯಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ.

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲತಿ ಕಲ್ಪಿಸುವ ನಿಟ್ಟಿನಲ್ಲಿ, ನನ್ನ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯುಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ವಿಧಾನಸಭೆಯಲ್ಲಿ ನಿನ್ನೆ(ಸೆ.22-ಗುರುವಾರ) ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಬಿಎಸ್‌ ಯಡಿಯೂರಪ್ಪ, ಪಂಚಮಸಾಲಿ ಸಮುದಾಯಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ನನ್ನ ಅವಧಿಯಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ. ಆದರೆ ತಾಂತ್ರಿಕ ಕಾರಣಗಳಿಂದ ಮೀಸಲತಿ ಕಲ್ಪಿಸಲು ಸಾಧ್ಯವಾಗಲಿಲ್ಲ. ಆದರೆ ಈ ದಿಸೆಯಲ್ಲಿ ಈಗಲೂ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಎಸ್‌ವೈ ಹೇಳಿದರು.

ಪಂಚಮಸಾಲಿ ಸಮುದಾಯವನ್ನು 2 ಎಗೆ ಸೇರಿಸಬೇಕು ಎಂಬುದು ನನ್ನ ಒತ್ತಾಸೆ. ಈ ಹಿಂದೆ ಪಂಚಮಸಾಲಿ ಸಮುದಾಯಕ್ಕೆ 3B ಮೀಸಲಾತಿ ಕಲ್ಪಿಸಿದ್ದೆ. 2ಎ ಮೀಸಲಾತಿಗೆ ತಾಂತ್ರಿಕ ತೊಡಕುಗಳು ಉಂಟಾಗಬಾರದು ಎಂಬ ಕಾರಣಕ್ಕೆ, ಹಿಂದುಳಿದ ವರ್ಗ ಆಯೋಗಕ್ಕೆ ವರದಿ ನೀಡಲು ಸೂಚಿಸಿದ್ದಾಗಿಯೂ ಬಿಎಸ್‌ವೈ ಸ್ಪಷ್ಟಪಡಿಸಿದರು.

ಪಂಚಮಸಾಲಿ ಸಮುದಾಯ ಕೃಷಿ ಅವಲಂಬಿತ ಸಮುದಾಯ. ಈ ಸಮುದಾಯದ ಮೀಸಲಾತಿ ಬೇಡಿಕೆ ಅತ್ಯಂತ ನ್ಯಾಯಯುತವಾಗಿದೆ. ಆದರೆ ಮೀಸಲಾತಿ ನೀಡಲು ಕಾನೂನಾತ್ಮಕ ನಿಯಮಗಳನ್ನು ಪಾಲನೆ ಮಾಡಬೇಕಿದೆ. ಅನ್ಯ ಸಮುದಾಯಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಬಿಎಸ್‌ವೈ ಹೇಳಿದರು.

ವೀರಶೈವ ಲಿಂಗಾಯತ ಅಭಿವೃದ್ಧಿಗಾಗಿ ನನ್ನ ಅವಧಿಯಲ್ಲಿ ಪ್ರಾಧಿಕಾರ ರಚನೆ ಮಾಡಲಾಗಿತ್ತು. ಅಲ್ಲದೇ ಪ್ರಾಧಿಕಾರಕ್ಕಾಗಿ 500 ಕೋಟಿ ರೂ.

ಕೂಡ ಒದಗಿಸಲಾಗಿತ್ತು. ನನ್ನ ಅವಧಿಯಲ್ಲಿ ಲಿಂಗಾಯತ ಸಮುದಾಯದ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳಾಗಿವೆ. ಎಲ್ಲಾ ಸಮುದಾಯಗಳ ಅಭಿವೃದ್ಧಿಗೂ ಸರ್ಕಾರ ಬದ್ದವಾಗಿದೆ ಎಂಧು ಬಿಎಸ್‌ವೈ ನುಡಿದರು.

ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಂಗಡಕ್ಕೆ ಸೇರಿಸಲು, ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನನ್ನ ಸಹಮತ ಇದೆ. ಈಗಾಗಲೇ ಮೀಸಲಾತಿಗೆ ಆಗ್ರಹಿಸಿ ಸಮದಾಯದ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದರು.

ಬೊಮ್ಮಾಯಿ ಪ್ರತಿಕ್ರಿಯೆ:

ಬಿಸ್‌ ಯಡಿಯೂರಪ್ಪ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೀಸಲಾತಿ ವಿಚಾರವಾಗಿ ಈಗಾಗಲೇ ಉತ್ತರ ನೀಡಿದ್ದೇನೆ. ವೀರಶೈವರ ಅನೇಕ ಪಂಗಡಗಳು ಮೀಸಲಾತಿ ಪಟ್ಟಿಯಿಂದ ಬಿಟ್ಟು ಹೋಗಿದ್ದವು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸಂಪುಟ ಉಪ ಸಮಿತಿ ರಚನೆಮ ಮಾಡಿ, ಈ ಕುರಿತು ಮುಂದಡಿ ಇಡಲಾಗಿತ್ತು. ನಾನೂ ಕೂಡ ಆ ಸಮಿತಿಯ ಸದಸ್ಯ ಆಗಿದ್ದೆ. ಮಾಹಿತಿ ಕೊರೆತಯ ಕಾರಣಕ್ಕೆ ಆಗ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಹಿಂದುಳಿದ ವರ್ಗ ಆಯೋಗದ ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಸಿಎಂ ಬಿಎಸ್‌ವೈ ತಮ್ಮ ಅಧಿಕಾರಾವಧಿಯಲ್ಲಿ ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಂಗಡಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವರ ಪ್ರಯತ್ನವನ್ನೇ ನಮ್ಮ ಸರ್ಕಾರ ಮುಂದುವರೆಸಿದ. ಹಿಂದುಳಿದ ವರ್ಗ ಆಯೋಗದ ವರದಿ ಬಂದ ಬಳಿಕ, ಅದನ್ನು ಪರಿಶೀಲಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಇತ್ತೀಚಿಗೆ ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದ್ದರು. ಮೀಸಲಾತಿಗೆ ಒತ್ತಾಯಿಸುತ್ತಿರುವ ಯತ್ನಾಳ್‌, ತಮ್ಮದೇ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸುತ್ತಿರುವುದು ರಾಜ್ಯದ ಗಮನ ಸೆಳೆದಿದೆ.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.