ಕನ್ನಡ ಸುದ್ದಿ  /  Karnataka  /  Election 2024 Ex Pm Hd Devegowda Complaint On Freebies Bangalore Rural Ec Asks Karnataka Poll Officer To Tak Action Rmy

ಬೆಂಗಳೂರು ಗ್ರಾಮಾಂತರದಲ್ಲಿ ಉಚಿತ ವಸ್ತುಗಳ ಹಂಚಿಕೆ ಆರೋಪ; ಮಾಜಿ ಪ್ರಧಾನಿ ದೇವೇಗೌಡರ ಪತ್ರಕ್ಕೆ ಇಸಿ ಸ್ಪಂದನೆ, ತಕ್ಷಣ ಕ್ರಮಕ್ಕೆ ಸೂಚನೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳಲು ರಾಜ್ಯ ಚುನಾವಣಾ ಯಂತ್ರ ವಿಫಲವಾಗಿದೆ ಎಂದು ಗೌಡ ಆರೋಪಿಸಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್‌ಡಿ ದೇವೇಗೌಡರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್‌ಡಿ ದೇವೇಗೌಡರು. (PTI)

ಬೆಂಗಳೂರು: ಕಾಂಗ್ರೆಸ್ ಸಂಸದ, ಬೆಂಗಳೂರು ಗ್ರಾಮಾಂತರ ಕ್ಷೇತ್ರ (Bangalore Rural Constituency) ಅಭ್ಯರ್ಥಿ ಡಿ.ಕೆ ಸುರೇಶ್ (D K Suresh) ಅವರು ಉಚಿತ ಆಹಾರ ಪದಾರ್ಥಗಳನ್ನು ವಿತರಿಸಲು ಯೋಜಿಸುತ್ತಿದ್ದಾರೆ ಮತ್ತು ರಾಜ್ಯ ಚುನಾವಣಾ ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (Ex H D Deve Gowda) ಅವರು ಸಲ್ಲಿಸಿದ ದೂರಿನ ಬಗ್ಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿದೆ.

ರಾಜ್ಯ ಸಿಇಒಗೆ ಬರೆದ ಪತ್ರದಲ್ಲಿ, ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಮತ್ತು ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಆದಷ್ಟು ಬೇಗ ಅನುಸರಣಾ ವರದಿಯನ್ನ ಸಲ್ಲಿಸಬೇಕೆಂದು ಹೇಳಿದೆ.

ದೊಡ್ಡ ಗೌಡ್ರು ಚುನಾವಣಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಮಾರ್ಚ್ 21 ರಂದು ಚುನಾವಣಾ ಆಯೋಗಕ್ಕೆ ಪತ್ರ ಕಳುಹಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳಲು ರಾಜ್ಯ ಚುನಾವಣಾ ಯಂತ್ರ ವಿಫಲವಾಗಿದೆ ಎಂದು ಜೆಡಿಎಸ್ ನಾಯಕರು ಆರೋಪಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ವಿರುದ್ಧ ಕ್ರಮಕ್ಕೆ ಅಧಿಕಾರಿಗಳು ಹೆದರುತ್ತಿದ್ದಾರೆಂದು ಆರೋಪ

ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಲು ವಿಫಲವಾದ ಕಾರಣ ಉಚಿತ ವಸ್ತುಗಳನ್ನು ಗೋದಾಮಿನಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಯಿಂದ ಕರ್ತವ್ಯಲೋಪ ಮಾತ್ರವಲ್ಲ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಹೋದರರಾಗಿರುವ ಹಾಲಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹೆದರುತ್ತಿದ್ದಾರೆ ಎಂದು ಎಚ್‌ಡಿ ದೇವೇಗೌಡರು ಚುನಾವಣೆಗೆ ಬರೆದ ಪತ್ರದಲ್ಲಿ ಆರೋಪಿಸಿದ್ದರು.

ಇತ್ತೀಚೆಗಷ್ಟೇ ಕಾರ್ಯಾಚರಣೆ ನಡೆಸಿದ್ದ ಚುನಾವಣಾ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.86 ಕೋಟಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದರು. ಕಳೆದ 20 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕುಕ್ಕರ್‌ಗಳಿಗೆ ಆರ್ಡರ್ ಮಾಡಲಾಗಿದ್ದು, 4 ರಿಂದ 5 ಲಕ್ಷ ಕುಕ್ಕರ್‌ಗಳನ್ನು ಈಗಾಗಲೇ ಹಂಚಲಾಗಿದೆ ಎಂದು ಜೆಡಿಎಸ್ ನಾಯಕರು ಆರೋಪಿಸಿದ್ದಾರೆ. ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ 2 ಹಂತಗಳಲ್ಲಿ ನಡೆಯುತ್ತದೆ.

IPL_Entry_Point