Employment News: ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಗಸ್ಟ್‌ 22 ಕಡೆ ದಿನ-employment applications are invited for government advocate post in mandya district august 22 is last date ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Employment News: ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಗಸ್ಟ್‌ 22 ಕಡೆ ದಿನ

Employment News: ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಗಸ್ಟ್‌ 22 ಕಡೆ ದಿನ

Mandya News ಸರ್ಕಾರಿ ವಕೀಲರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಗಸ್ಟ್‌ 22ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಮಂಡ್ಯದಲ್ಲಿ ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಂಡ್ಯದಲ್ಲಿ ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಡ್ಯ: ನೀವು ಕಾನೂನು ಪದವಿ ಪಡೆದುಕೊಂಡಿದ್ದೀರಾ, ವಕೀಲರಾಗಿಯೂ ಕೆಲಸ ಮಾಡುತ್ತಿದ್ದೀರಾ, ಹಾಗಾಗರೆ ನೀವು ಸರ್ಕಾರಿ ವಕೀಲರಾಗಿ ನೇಮಕಗೊಳ್ಳಲು ಅವಕಾಶವಿದೆ.ಮಂಡ್ಯ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಸದರಿ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆಗಸ್ಟ್ 22 ರ ಸಂಜೆ 5.00 ಗಂಟೆಯೊಳಗಾಗಿ ಖುದ್ದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 10 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು.ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು,ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.

ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ದಾಖಲಾತಿಗಳನ್ನು ಸಲ್ಲಿಸುವುದು. ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.ನೋಟರಿಯಿಂದ ಅಫಿಡವಿಟ್ ಪಡೆದು ಸ್ವವಿವರದೊಂದಿಗೆ ಅರ್ಜಿ ಸಲ್ಲಿಸುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

ಇದಲ್ಲದೇ ಮಂಡ್ಯ ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಸದರಿ ಹುದ್ದೆಗೆ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸುವುದು, .

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.

ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ ಮಂಡ್ಯ 08232 2 24600 ಸಂಪರ್ಕಿಸಬಹುದು.